ಗಣಿನಾಡಲ್ಲಿ ಗಣೇಶನ ಆರಾಧನೆ

•ವಿವಿಧ ಭಕ್ಷ್ಯಗಳಿಂದ ನೈವೇದ್ಯ•ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತ

Team Udayavani, Sep 4, 2019, 12:20 PM IST

ಬಳ್ಳಾರಿ: ವಿಘ್ನ ನಿವಾರಕ ಗಣೇಶನ ಆರಾಧನೆ ಗಣಿ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಮಾಡಲಾಗುತ್ತಿದ್ದು, ಸೋಮವಾರ ನಗರದ ವಿವಿಧ ಬಡಾವಣೆಗಳಲ್ಲಿ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಯಿತು.

ಹಬ್ಬದ ನಿಮಿತ್ತ ಹೊಸಬಟ್ಟೆ ಧರಿಸಿ, ನಾನಾ ಕಡೆ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ಕೆಲವರು ಮನೆಯಲ್ಲೇ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರೇ, ಇನ್ನು ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗುವ ಈ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಖರೀದಿಸಿ, ವಿಶೇಷ ಪೂಜೆ ಸಲ್ಲಿಸಿರುವುದು ಸಾಮಾನ್ಯವಾಗಿ ಕಂಡು ಬಂತು. ವಿವಿಧ ಭಕ್ಷ ್ಯಗಳನ್ನು ಮನೆಯಲ್ಲಿ ತಯಾರಿಸಿ ಗಣೇಶನಿಗೆ ನೈವೇದ್ಯ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಗಣೇಶನಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಅರ್ಚನೆ ಸೇರಿದಂತೆ ವಿವಿಧ ಮಂತ್ರಘೋಷಗಳೊಂದಿಗೆ ಗಣೇಶನನ್ನು ಪೂಜಿಸಿ ಭಕ್ತಿ ಸಮರ್ಪಿಸಿದರು.

ಗಣೇಶ ಪ್ರತಿಷ್ಠಾಪನೆ: ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ನಗರದ ನೆಹರೂ ಕಾಲೋನಿ, ಬಸವೇಶ್ವರ ನಗರ, ಕೌಲ್ ಬಜಾರ್‌, ಬೆಂಗಳೂರು ರಸ್ತೆ, ಶಾಸ್ತ್ರೀ ಕಾಲೋನಿ, ಹೌಸಿಂಗ್‌ ಬೋರ್ಡ್‌ ಕಾಲೋನಿ, ಸತ್ಯನಾರಾಯಣ ಪೇಟೆ, ಗಾಂಧಿನಗರ ಸೇರಿದಂತೆ ನಗರದ ನಾನಾ ಕಡೆ ಬೃಹತ್‌ ಆಕಾರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಸೋಮವಾರ ಸಂಜೆ ನಾಗರಿಕರು ತಂಡೋಪ ತಂಡವಾಗಿ ತೆರಳಿ ಗೌರಿ ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಹಬ್ಬದ ನಿಮಿತ್ತ ಹೊಸಪೇಟೆ ನಗರ ರಾಣಿಪೇಟೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ ಗೌರಿ ಗಣೇಶ ಮೂರ್ತಿ ನಾಗರಿಕರು ದರ್ಶನ ಪಡೆದು ಸಂಭ್ರಮಿಸಿದರು. ನಂತರ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್‌, ನರಸಿಂಹ ಮೂರ್ತಿ ಸಂಗಡಿಗರಿಂದ ಹಾಸ್ಯಸಂಜೆ ಕಾರ್ಯಕ್ರಮ ನಡೆಯಿತು.

ನಗರದ ಸಿಂಗಿ ಕಾಂಪೌಂಡ್‌ ಬಳಿ ವಿನಾಯಕ ಮಿತ್ರ ಮಂಡಳಿ 42ನೇ ವರ್ಷದ ಗಣೇಶ ಮೂರ್ತಿ, ವಾಲ್ಮೀಕಿ ಚೌಕಿ ಹತ್ತಿರ ವಿನಾಯಕ ಮಿತ್ರ ಮಂಡಳಿ ವಾಲ್ಮೀಕಿ 15ನೇ ವರ್ಷದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅನಂತಪುರ ರಸ್ತೆಯಲ್ಲಿ ಸರ್ವ ಸಿದ್ಧಿ ವಿನಾಯಕ ಮಿತ್ರ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿರುವ 20ನೇ ವರ್ಷದ ಗಣೇಶ ಮೂರ್ತಿಯ ಪಕ್ಕದಲ್ಲಿ ಸುಭದ್ರ ಮತ್ತು ಬಲರಾಮನ ಮೂರ್ತಿ ಸಹ ಪ್ರತಿಷ್ಠಾಪಿಸಲಾಗಿದೆ.

ತಾಳೂರು ರಸ್ತೆಯ ಶ್ರೀನಗರದ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಬಾಲ ವಿನಾಯಕ ಗೆಳೆಯರ ಬಳಗದಿಂದ 6ನೇ ವರ್ಷದ ಮೂರ್ತಿ ಪ್ರತಿಷ್ಠಾಪಿಸಿದ್ದರೇ ಎಸ್‌ಎನ್‌ಪೇಟೆಯ 3ನೇ ಕ್ರಾಸ್‌ನ ಮೂರ್ತಿ ಕಾಂಪ್ಲೆಕ್ಸ್‌ನಲ್ಲಿ ಗಜಮುಖ ಫ್ರೆಂಡ್ಸ್‌ ಅಸೋಸಿಯೇಷನ್‌ನಿಂದ ಗಣೇಶ ಮೂರ್ತಿ, ನಗರದ ವಿವಿಧ ಬಡಾವಣೆ, ಏರಿಯಾಗಳಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

  • ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ "ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ'...

  • ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ದಲಿತರು, ಅಲ್ಪಸಂಖ್ಯಾತರರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟ ಸಾಹು ಮಹಾರಾಜ್‌ ಹಾಗೂ ಶಿವಾಜಿ ವಂಶಸ್ಥರಾದ ಮರಾಠಿಗರನ್ನು...

  • ಬೆಂಗಳೂರು: ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಹಳ್ಳಿ ಬಿಟ್ಟು ನಗರಕ್ಕೆ ಬರಬಾರದು ಎಂದು ನಟ ಶಿವರಾಜ್‌ಕುಮಾರ್‌ ರೈತರಲ್ಲಿ ಮನವಿ ಮಾಡಿದರು. ಕನಕಪುರ...

  • ಬೆಂಗಳೂರು: ರಾಜ್ಯದ್ಲಲಿ ಪೊಲೀಸರ ಕಾರ್ಯವೈಖರಿ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಎ ವಿರುದ್ಧದ...

ಹೊಸ ಸೇರ್ಪಡೆ

  • ಬೇಸಾಯ ಲಾಭದಾಯಕ ಅಲ್ಲ ಎನ್ನುವ ತೀರ್ಮಾನಕ್ಕೆ ಬಂದಿರುವ ರೈತರು ಪರ್ಯಾಯ ಉದ್ಯೋಗಗಳ ಹುಡುಕಾಟದಲ್ಲಿದ್ದಾರೆ. ಆದರೆ ಕೆಲವರು ಬೇಸಾಯದಲ್ಲೇ ಬದುಕು ರೂಪಿಸಿಕೊಳ್ಳುವ...

  • ಹಿಂದೆಲ್ಲಾ ಈಡೀ ಊರಿಗೆ ಒಂದೇ ಒಂದು ಎಸ್‌.ಟಿ.ಡಿ. ಬೂತ್‌ ಇರುತ್ತಿತ್ತು. ಇದು ದಶಕಗಳ ಹಿಂದಿನ ಮಾತು. ಆಗ, ಯಾರ ಬಳಿಯೂ ಮೊಬೈಲ್‌ ಇರುತ್ತಿರಲಿಲ್ಲವಾದ್ದರಿಂದ ಊರವರು...

  • ನಮ್ಮ ಊರಿನ ಒಬ್ಬ ರೈತರು ಟೆಫ್ ಎಂಬ ಹೊಸ ಬೆಳೆಯನ್ನು ಬೆಳೆಯುತ್ತಿದ್ದಾರೆ. ಅದು ಯಾವ ಬೆಳೆ, ಹೇಗೆ ಬೆಳೆಯಬೇಕು ಇತ್ಯಾದಿ ಮಾಹಿತಿ ನೀಡುವಿರಾ? - ಮಂಜುನಾಥ ಪಟೇಲ್‌,...

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...