ಕುತೂಹಲ ಮೂಡಿಸಿದ ಆನಂದ ನಡೆ

ಕೈ ಬಿಡಬೇಕಾ, ಬಿಜೆಪಿ ಸೇರಬೇಕೆಂಬುದರ ಬಗ್ಗೆ ಆಪ್ತರೊಂದಿಗೆ ಚರ್ಚೆ•ಕಾರ್ಯಕರ್ತರ ಜತೆ ಸಮಾಲೋಚನೆ

Team Udayavani, Jul 3, 2019, 12:01 PM IST

Udayavani Kannada Newspaper

ವೆಂಕೋಬಿ ಸಂಗನಕಲ್ಲು
ಬಳ್ಳಾರಿ:
ಜಿಂದಾಲ್ಗೆ ಜಮೀನು ಪರಭಾರೆಗೆ ವಿರೋಧ, ವಿಜಯನಗರ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ದಿಢೀರ್‌ನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕ ಆನಂದ್‌ಸಿಂಗ್‌ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದರತ್ತ ಕುತೂಹಲ ಮೂಡಿದೆ.

ಕಾಂಗ್ರೆಸ್‌ ಬಿಡಬೇಕಾ ಅಥವಾ ಆ ಪಕ್ಷದಲ್ಲಿಯೇ ಮುಂದುವರಿಯಬೇಕಾ? ಇಲ್ಲ ಮತ್ತೆ ಬಿಜೆಪಿ ಕದ ತಟ್ಟಬೇಕೆ ಎಂಬುದರ ಬಗ್ಗೆ ಆನಂದ ಸಿಂಗ್‌ ತಮ್ಮ ಆಪ್ತರ ಅಭಿಪ್ರಾಯ ಸಂಗ್ರಹಿಸುತ್ತಿದ್ದು ಮುಂದೆ ಯಾವ ಹೆಜ್ಜೆ ಇಡಬಹುದು ಎಂಬುದರತ್ತ ಎಲ್ಲರ ದೃಷ್ಟಿ ನೆಟ್ಟಿದೆ.

ಸೋಮವಾರ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಮಂಗಳವಾರ ಕ್ಷೇತ್ರಕ್ಕೆ ಆಗಮಿಸಿದ ಶಾಸಕ ಆನಂದ್‌ಸಿಂಗ್‌, ತಮ್ಮ ಆಪ್ತರು, ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಹೊಸಪೇಟೆಯ ಖಾಸಗಿ ಹೋಟೆಲ್ನಲ್ಲಿ ಆಪ್ತರು, ಬೆಂಬಲಿಗರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದು, ಶಾಸಕರಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರೆಯಬೇಕಾ ಅಥವಾ ಪುನಃ ಕಮಲ ಪಾಳಯಕ್ಕೆ ಸೇರಬೇಕಾ ಎಂಬುದರ ಕುರಿತು ಚರ್ಚಿಸುತ್ತಿದ್ದಾರೆ. ಈ ವೇಳೆ ಕೆಲವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವೇನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೋರಿದರೆ, ಇನ್ನು ಕೆಲವರು ಮುಂದಿನ ನಡೆ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆಶಿಯಿಂದ ಅಂತರ: ಬಿಜೆಪಿಯಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಆನಂದ್‌ಸಿಂಗ್‌, ಆ ಪಕ್ಷದಿಂದ ಎರಡು ಬಾರಿ ಶಾಸಕರಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ನಂತರ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಬಳ್ಳಾರಿಗೆ ಬಂದಾಗಲೆಲ್ಲ ವಿವಿಧ ವಿಷಯಗಳ ಕುರಿತು ಚರ್ಚಿಸುವ ಮೂಲಕ ತಮ್ಮಲ್ಲಿದ್ದ ಅಸಮಾಧಾನ ತೋಡಿಕೊಂಡಿದ್ದರು. ಡಿ.ಕೆ.ಶಿವಕುಮಾರ್‌ ಅವರು ಆನಂದ್‌ಸಿಂಗ್‌ ಮಾತಿಗೆ ಅಷ್ಟೊಂದು ಬೆಲೆ ಕೊಡದಿದ್ದರಿಂದ ಅವರೊಂದಿಗೂ ಅಂತರ ಕಾಯ್ದುಕೊಂಡು, ಪಕ್ಷದ ಕಾರ್ಯಚಟುವಟಿಕೆಗಳಿಂದಲೂ ದೂರ ಉಳಿದಿದ್ದರು.

ರಾಜೀನಾಮೆ ಪೂರ್ವನಿಯೋಜಿತ?: ಆನಂದ್‌ಸಿಂಗ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮೊದಲೇ ತಯಾರಿ ಮಾಡಿಕೊಂಡಿದ್ದರು. ಇದಕ್ಕಾಗಿ ಬಿಜೆಪಿ ನಾಯಕರನ್ನೂ ಭೇಟಿ ಮಾಡಿದ್ದರು. ಕಾಂಗ್ರೆಸ್‌ ತೊರೆದು ಪುನಃ ಮಾತೃಪಕ್ಷ ಸೇರಲು ಚಿಂತನೆ ನಡೆಸಿದ್ದರು ಎನ್ನಲಾಗಿದೆ. ಇದಕ್ಕೆ ಪುಷ್ಟಿ ಎಂಬಂತೆ ಮಾಜಿ ಪ್ರಧಾನಿ ದಿ|ಅಟಲ್ ಬಿಹಾರಿ ವಾಜಪೇಯಿ ಅಸ್ತಿ ವಿಸರ್ಜನೆ ಮೆರವಣಿಗೆ ಸೇರಿದಂತೆ ಹಲವು ಬಾರಿ ಬಿಜೆಪಿ ಮುಖಂಡರ ಜತೆ ಕಾಣಿಸಿಕೊಂಡಿದ್ದರು.

ಇನ್ನು ಬೆಂಗಳೂರಿನ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಜತೆ ಜಗಳವಾದ ಬಳಿಕ ಆನಂದ್‌ಸಿಂಗ್‌ ನಡೆ ಸಂಪೂರ್ಣವಾಗಿ ಗುಪ್ತ ಗಾಮಿನಿಯಾಗಿತ್ತು. ಲೋಕಸಭೆ ಉಪಚುನಾವಣೆಯಲ್ಲಿ ಸ್ವಲ್ಪ ಕಾಣಿಸಿಕೊಂಡಿದ್ದ ಅವರು, ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗ ಹೊರತುಪಡಿಸಿ ನಂತರ ಮಾಯವಾಗಿದ್ದರು.

ಇನ್ನು ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಹಲವು ವರ್ಷಗಳಿಂದಲೂ ಕೇಳಿಬರುತ್ತಿರುವ ಒತ್ತಾಯ. ಈ ಮಾತುಗಳನ್ನು ಪದೇ ಪದೇ ಹೇಳುತ್ತಲೇ ಬಂದಿದ್ದ ಆನಂದ್‌ಸಿಂಗ್‌, ಎಂದೂ ಸಹ ಗಂಭೀರವಾಗಿ ಹೋರಾಟಕ್ಕೆ ಕೈ ಹಾಕಿರಲಿಲ್ಲ. ಹೀಗಾಗಿ ಆನಂದ್‌ಸಿಂಗ್‌ ರಾಜೀನಾಮೆಗೆ ಈ ಎರಡೂ ವಿಷಯಗಳು ಕಾರಣವಲ್ಲ ಎನ್ನಲಾಗುತ್ತಿದೆ. ಹಾಗಾಗಿ ರಾಜೀನಾಮೆ ನೀಡಿರುವ ಆನಂದ್‌ಸಿಂಗ್‌ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಟಾಪ್ ನ್ಯೂಸ್

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

ಮೂರು ದಿನಗಳ ಬಳಿಕ ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 503 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಮೂರು ದಿನಗಳ ಬಳಿಕ ಮತ್ತೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 503 ಅಂಕ ಜಿಗಿತ; ನಿಫ್ಟಿಯೂ ಏರಿಕೆ

19arrest

ಕ್ಷುಲ್ಲಕ ಕಾರಣಕ್ಕೆ ಕೊಲೆಗೈದ ಸೈಕೋ ಕಿಲ್ಲರ್‌ ಬಂಧನ

army

ಕಾಶ್ಮೀರದಲ್ಲಿ ಈ ವರ್ಷ 26 ವಿದೇಶಿ ಭಯೋತ್ಪಾದಕರ ಸಂಹಾರ

1hh

ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!

ನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

ಶ್ರೀನಗರ: ಮಲಿಕ್ ಗೆ ಶಿಕ್ಷೆ, ದೇಶದ್ರೋಹ ಘೋಷಣೆ; 10 ಮಂದಿ ಬಂಧನ, UAPA ಕಾಯ್ದೆ ದಾಖಲು

1-f-ffs

ಬಿಬಿಎಂಪಿ ಚುನಾವಣೆ : ಮೇ 28ಕ್ಕೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

ಮೇಲ್ಸೇತುವೆಯೂ ಇಲ್ಲ -ಚತುಷ್ಪಥವೂ ಇಲ್ಲ!

22appeal

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್‌ ಮನವಿ

21releft

ಜಲಕ್ಷಾಮ: ಪರಿಹಾರಕ್ಕೆ ಆಗ್ರಹಿಸಿ ಸಭೆ ಬಹಿಷ್ಕಾರ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

24

ಮೇಲ್ಸೇತುವೆಯೂ ಇಲ್ಲ -ಚತುಷ್ಪಥವೂ ಇಲ್ಲ!

22appeal

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಜೆಡಿಎಸ್‌ ಮನವಿ

21releft

ಜಲಕ್ಷಾಮ: ಪರಿಹಾರಕ್ಕೆ ಆಗ್ರಹಿಸಿ ಸಭೆ ಬಹಿಷ್ಕಾರ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

ಆಡಂಬರದ ಮದುವೆಗೆ ಕಡಿವಾಣ ಹಾಕಿ; ಸಚಿವ ಎಂಟಿಬಿ

1-fgdfg

ಹೊರಟ್ಟಿಗೆ ಮಣೆ: ಬಿಜೆಪಿ ಟಿಕೆಟ್ ವಂಚಿತ ಮೋಹನ ಲಿಂಬಿಕಾಯಿ ತೀವ್ರ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.