ಮೈತ್ರಿ ಅಭ್ಯರ್ಥಿ ಗೆಲುವು ಖಚಿತ: ಸಿಂಧ್ಯಾ

Team Udayavani, Apr 20, 2019, 5:39 PM IST

ಬಳ್ಳಾರಿ: ಜೆಡಿಎಸ್‌ ರಾಷ್ಟ್ರೀಯ ಕಾರ್ಯದರ್ಶಿ ಪಿ.ಜಿ.ಆರ್‌.ಸಿಂಧ್ಯಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಬಳ್ಳಾರಿ: ಲೋಕಸಭೆ ಚುನಾವಣೆಯಲ್ಲಿ ಪ್ರಬುದ್ಧ
ಮತದಾರರ ಬೆಂಬಲದಿಂದಾಗಿ ರಾಜ್ಯದಲ್ಲಿ ಸುಮಾರು 18ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಕಾರ್ಯದರ್ಶಿ ಪಿ.ಜಿ.ಆರ್‌.ಸಿಂಧ್ಯಾ ಭವಿಷ್ಯ ನುಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು 2014ರ
ಚುನಾವಣೆಯಲ್ಲಿ ನೀಡಿದ್ದ ಯಾವುದೇ ಬೇಡಿಕೆ ಈಡೇರಿಸಲು ಸಾಧ್ಯವಾಗಿಲ್ಲ. ಅವರು ಪ್ರಧಾನಿಯಾದ ಬಳಿಕ ಜಾರಿಗೊಳಿಸಿದ ಜಿಎಸ್‌ಟಿಯಿಂದ ಜನ ಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ.

ನಿತ್ಯ ಜನರು ಪರದಾಡುವಂತಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿವರ್ಷ ಕೋಟಿಗಟ್ಟಲೇ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನೀಡಿದ ಭರವಸೆ ಹುಸಿಯಾಗಿದೆ. ಬದಲಾಗಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ
ಎಂದು ಕಿಡಿಕಾರಿದರು.

ಮೈತ್ರಿ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಒಳ್ಳೆಯ ವ್ಯಕ್ತಿ, ಬುದ್ಧಿವಂತ ರಾಜಕಾರಣಿ. ವಿದ್ಯಾವಂತರಿದ್ದು, ಜಿಲ್ಲೆಯ ಜನರು ಅವರನ್ನು ಆಯ್ಕೆ ಮಾಡಬೇಕು.
ಜಿಲ್ಲೆಯ ಜನರ ಸಮಸ್ಯೆಗಳ ಕುರಿತು ಸಂಸತ್‌ನಲ್ಲಿ
ಧ್ವನಿ ಎತ್ತಲಿದ್ದಾರೆ. ಜಿಲ್ಲೆಯ ಮತದಾರರು ಬಿಜೆಪಿ
ಅವರ ಸುಳ್ಳು ಭರವಸೆಗಳಿಗೆ ಮರುಳಾಗದೆ, ಪ್ರತಿಯೊಬ್ಬರೂ ಅಭಿವೃದ್ಧಿ ನಿರೀಕ್ಷಿಸಿ ಉಗ್ರಪ್ಪ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್‌-ಜೆಡಿಎಸ್‌ ಅವರು ಜಂಟಿಯಾಗಿ ನಮ್ಮ
ಎಲ್ಲ ಅಭ್ಯರ್ಥಿಗಳ ಪರ ಪ್ರಾಮಾಣಿಕವಾಗಿ ಕೆಲಸ
ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ಅಸಮಧಾನವೂ ಇಲ್ಲ. ರಾಷ್ಟ್ರೀಯ ಪಕ್ಷಗಳು ಅಂದ ಮೇಲೆ ಅಲ್ಪಸ್ವಲ್ಪ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ, ದೇಶದ ಅಭಿವೃದ್ಧಿ ನಿರೀಕ್ಷಿಸಿ ಎಲ್ಲರೂ ಒಂದಾಗಿದ್ದೇವೆ. ಏ.21ರಂದು ಜಿಲ್ಲೆಯಲ್ಲಿ ಜಂಟಿಯಾಗಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿದ್ದು, ಯಾವ ಮುಖಂಡರು ಭಾಗವಹಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜಿಲ್ಲೆ ಸೇರಿದಂತೆ ಎಲ್ಲ ಕಡೆಗಳಲ್ಲೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದೇವೆ.

ನಮ್ಮ ಎಲ್ಲ ಕಾರ್ಯಕರ್ತರು ಉತ್ಸುಕತೆಯಿಂದ
ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದಾರೆ. ಉಗ್ರಪ್ಪ
ಅವರ ಗೆಲುವು ನಿಶ್ಚಿತವಾಗಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ 18ಕ್ಷೇತ್ರಗಳಲ್ಲಿ ಗೆಲುವು ಸಾ ಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಶಿವಪ್ಪ ಮಾತನಾಡಿ, ಮಂಡ್ಯ, ಹಾಸನ, ತುಮಕೂರು ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಭರ್ಜರಿ ಗೆಲುವು ಸಾಧಿಸಲಿದೆ. ಇದರಲ್ಲಿ ಅನುಮಾನ ಬೇಡ, ಅದರಂತೆ ರಾಜ್ಯದ 18ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು. ಈ ವೇಳೆ ಮುಖಂಡರಾದ ಮಹ್ಮದ್‌ ಇಕ್ಬಾಲ್‌, ಮುನ್ನಾ, ರೋಶನ್‌, ವಿಜಯಕುಮಾರ್‌, ಶಾಂತಕುಮಾರ್‌, ಕಿರಣ್‌ ಕುಮಾರ್‌, ಸೋಮಲಿಂಗನಗೌಡ, ಬಂಡೇಗೌಡ, ವಿಜಯಕುಮಾರಿ, ಪುಷ್ಪಾ ಇತರರಿದ್ದರು .


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ...

  • ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ ಮುಂದುವರಿದಿದ್ದು, ಸಿಡಿಲಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ...

  • ಕುತ್ತಾರು: ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಶ್ರೀ ರಾಜರಾಜೇಶ್ವರಿ ಘಟಕದ ವತಿಯಿಂದ ಮಳೆಗಾಗಿ...

  • ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ...

  • ಪುಣೆ: ಭಾರತೀಯ ಕ್ರಿಕೆಟ್‌ ತಂಡ ಏಕದಿನ ವಿಶ್ವಕಪ್‌ಗಾಗಿ ಇಂಗ್ಲೆಂಡ್‌ಗೆ ತೆರಳುವ ಮೊದಲು ಭಾರತ ತಂಡದ ಕೋಚ್‌ ರವಿಶಾಸ್ತ್ರಿ ಮಹಾರಾಷ್ಟ್ರದಲ್ಲಿರುವ ಶಿರ್ಡಿ ಸಾಯಿಬಾಬಾ...

  • ಕುಂದಾಪುರ: ಮಳೆ ನೀರಿಂಗಿಸುವ ಮೂಲಕ ನೀರನ್ನು ಕಾದಿಟ್ಟು ಕೊಳ್ಳಿ. ಪ್ರತಿಯೊಬ್ಬರೂ ನೀರುಳಿ ಸುವ ನಿಟ್ಟಿನಲ್ಲಿ ನಿಮ್ಮದೇ ಆದ ಕೊಡುಗೆಗಳನ್ನು ನೀಡಿ. ನೀರು ಎಂದರೆ...