ಸೇವೆ ಸ್ಥಗಿತಗೊಳಿಸಿ ಸಾಂಕೇತಿಕ ಧರಣಿ

ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದಿಂದ ಪ್ರತಿಭಟನೆ •ಸರ್ಕಾರದ ವಿರುದ್ಧ ವಿವಿಧ ಘೋಷಣೆ

Team Udayavani, Jul 18, 2019, 11:29 AM IST

18-July-13

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ನೂರಾರು ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ನೂರಾರು ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಗ್ರಾಮ ಲೆಕ್ಕಾಧಿಕಾರಿಗಳು ಡಿಸಿ ಕಚೇರಿ ಎದುರು ಧರಣಿ ಕುಳಿತರು. ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆ, ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯ ಸೇರಿದಂತೆ ಬೇರೆ ಇಲಾಖೆಯ ಕೆಲಸದ ಒತ್ತಡಗಳನ್ನು ನಮ್ಮ ಮೇಲೆ ಹೇರುತ್ತಿರುವ ಕುರಿತು ಸಾಕಷ್ಟು ಬಾರಿ ಸರ್ಕಾರದ ಗಮನಸೆಳೆದರೂ ಇಲ್ಲಿವರೆಗೂ ಕ್ರಮವಿಲ್ಲ. ಇತ್ತೀಚೆಗೆ ಮನವಿ ಸಲ್ಲಿಸಿ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಲಾಗಿತ್ತು. ನಂತರ ಕಂದಾಯ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎರಡು ಬಾರಿ ಅಧಿಕಾರಿಗಳ ಹಾಗೂ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಭರವಸೆ ನೀಡಿದ್ದರು. ಆದರೆ, ಇಲ್ಲಿವರೆಗೂ ಯಾವುದೇ ಕ್ರಮವಿಲ್ಲ. ಹೀಗಾಗಿ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೇವೆ ಸ್ಥಗಿತಗೊಳಿಸಿ, ಒಂದು ದಿನದ ಸಾಂಕೇತಿಕ ಧರಣಿ ನಡೆಸಿದ್ದೇವೆ. ಈಗಲೂ ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಕುಟುಂಬ ಸಮೇತ ಬೃಹತ್‌ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಬೇರೆ ಇಲಾಖೆಯ ಮತ್ತು ರಜಾ ದಿನಗಳಲ್ಲಿ ಕೆಲಸದ ಒತ್ತಡ ಹೇರುವುದನ್ನು ಕೂಡಲೇ ನಿಲ್ಲಿಸಬೇಕು. ಈ ಕುರಿತು ಆದೇಶ ಹೊರಡಿಸಬೇಕು, ಗ್ರಾಮಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಗ್ರಾಮಲೆಕ್ಕಿಗರ ಜೇಷ್ಠತೆಯನ್ನು ಒಗ್ಗೂಡಿಸಿ ಪದ ನವೀಕರಿಸಬೇಕು. ಗ್ರಾಮ ಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆ ದರವನ್ನು 1 ಸಾವಿರ ರೂ.ಗೆ ಹೆಚ್ಚಿಸಬೇಕು. ನೌಕರರಿಗೆ ಜಾಬ್‌ ಚಾರ್ಟ್‌ ನೀಡಬೇಕು ಎಂದು ತೀರ್ಮಾನಿಸಿದ್ದರೂ ಇಲ್ಲಿವರೆಗೂ ನೀಡಿಲ್ಲ. ಕೂಡಲೇ ಪರಿಷ್ಕೃತ ಜಾಬ್‌ ಚಾರ್ಟ್‌ ನೀಡಬೇಕು. ಅಕ್ರಮ ಮರಳು ದಂಧೆಕೋರರು ನಡೆಸಿದ ಲಾರಿ ದುರಂತದಲ್ಲಿ ಮೃತಪಟ್ಟ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್‌ ಪಾಟೀಲ್ ಕುಟುಂಬಕ್ಕೆ ಕೂಡಲೇ ಸರ್ಕಾರ 20 ಲಕ್ಷರೂ.ಗಳನ್ನು ಪರಿಹಾರ ನೀಡಬೇಕು. ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂಗೊಳಿಸಬೇಕು ಎಂದು ಸಾಕಷ್ಟು ಬಾರಿ ಭರವಸೆ ನೀಡಿದರೂ ಇಲ್ಲಿವರೆಗೂ ಕ್ರಮವಿಲ್ಲ. ಕೂಡಲೇ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಒಂದುವೇಳೆ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾ ನಿರತರು ಎಚ್ಚರಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ, ಕಂದಾಯ ಸಚಿವರು, ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಕೆ.ನಾಗರಾಜ್‌, ಗೌರವಾಧ್ಯಕ್ಷ ಸುದೀಪ್‌, ಪ್ರಧಾನ ಕಾರ್ಯದರ್ಶಿ ಜನಾರ್ಧನ. ಜೆ, ಖಜಾಂಚಿ ಕೆ.ಶ್ರೀನಿವಾಸ್‌, ಉಪಾಧ್ಯಕ್ಷ ಚಂದ್ರಶೇಖರ್‌ ಉಟಕೂರು ಸೇರಿದಂತೆ ನೂರಾರು ನೌಕರರು ಇದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.