ಸ್ವಚ್ಛತೆಯೊಂದಿಗೆ ನೀರು ಸಂರಕ್ಷಿಸಿ: ನಿತೀಶ್‌

ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಿ •ಅಂತರ್ಜಲ ಹೆಚ್ಚಿಸಲು ಕಾರ್ಯ ಪ್ರವೃತ್ತರಾಗಿ

Team Udayavani, Jun 12, 2019, 4:59 PM IST

ಬಳ್ಳಾರಿ: ಚೇಳ್ಳಗುರ್ಕಿ ಎರ್ರಿಸ್ವಾಮಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛಮೇವ ಜಯತೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ರಥಕ್ಕೆ ಜಿಪಂ ಸಿಇಒ ಕೆ.ನಿತೀಶ್‌ ಚಾಲನೆ ನೀಡಿದರು.

ಬಳ್ಳಾರಿ: ಸುತ್ತಮುತ್ತಲ ಪರಿಸರ ಸ್ವಚ್ಛತೆಗೆ ಒತ್ತು ನೀಡುವುದು. ಸ್ವಚ್ಛತೆ ಕಾಪಾಡುವುದರ ಜತೆಗೆ ನೀರಿನ ಸಂರಕ್ಷಣೆಗೂ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ಕೆ.ನಿತೀಶ್‌ ಹೇಳಿದರು.

ಪರಿಸರ ದಿನಾಚರಣೆ ನಿಮಿತ್ತ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಎರ್ರಿಸ್ವಾಮಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛಮೇವ ಜಯತೆ ಮತ್ತು ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರು ತಮ್ಮ ಹೊಲಗಳಲ್ಲಿ ನರೇಗಾ ಮತ್ತು ಜಲಾಮೃತ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ ಬದು ನಿರ್ಮಾಣ ಮಾಡುವ ಮೂಲಕ ಮಣ್ಣಿನ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯನ್ನು ಸರ್ಕಾರಿ ಅಧಿಕಾರಿಗಳಿಂದಲೇ ಮಾಡಲು ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವುದರ ಜತೆಗೆ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಮಾತ್ರ ಸ್ವಚ್ಛತೆಗೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿದಂತಾಗುತ್ತದೆ ಎಂದರು. ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಜಿಪಂ ಸದಸ್ಯ ಅಲ್ಲಂ ಪ್ರಶಾಂತ, ತಾಪಂ ಇಒ ಜಾನಕಿರಾಂ ಮಾತನಾಡಿದರು. ಚೆಳ್ಳಗುರ್ಕಿ ಗ್ರಾಪಂ ಅಧ್ಯಕ್ಷ ಎನ್‌.ಹನುಮಂತ, ಬಳ್ಳಾರಿ ತಾಪಂ ಅಧ್ಯಕ್ಷೆ ರಮೀಜಾ ಬಿ, ತಾಪಂ ಸದಸ್ಯ ಗೊವಿಂದಪ್ಪ, ಜಿಲ್ಲಾ ಅರಣ್ಯಾಧಿಕಾರಿ ಕಿರಣ, ಬಿಇಒ ವೆಂಕಟೇಶ ರಾಮಚಂದ್ರಪ್ಪ ಸೇರಿದಂತೆ ಹಲವರು ಇದ್ದರು. ಪ್ರೌಢ ಶಾಲಾ ಶಿಕ್ಷಕಿ ಯು.ಸುನಿತಾ ನಿರೂಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ