ಕೈಮಗ್ಗ ಉತ್ಪನ್ನ ಬಳಕೆ ಹೆಚ್ಚಲಿ

ವಸ್ತು ಪ್ರದರ್ಶನ-ಮಾರಾಟ ಮೇಳಗಳನ್ನು ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಿ

Team Udayavani, Jan 13, 2020, 4:59 PM IST

13-Jnauary-27

ಬಳ್ಳಾರಿ: ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕೇವಲ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೇ ತಾಲೂಕು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿಸ್ತರಿಸಬೇಕು ಎಂದು ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಹೇಳಿದರು.

ನಗರದ ಗಾಂಧಿಭವನದಲ್ಲಿ ನವದೆಹಲಿಯ ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ, ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ (ಕಾವೇರಿ ಹ್ಯಾಂಡ್‌ ಲೂಮ್ಸ್‌), ಬಳ್ಳಾರಿ ಜಿಪಂ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಯೋಗದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಕೈಮಗ್ಗ ಮೇಳ ವಸ್ತ್ರವೈಭವ-2020 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೈಮಗ್ಗ ಮತ್ತು ನೇಕಾರರು ತಯಾರಿಸಿದ ಬಟ್ಟೆಗಳನ್ನು ಧರಿಸಿದಲ್ಲಿ ಚರ್ಮದ ಖಾಯಿಲೆಗಳು ಬರುವುದಿಲ್ಲ. ಕೈಮಗ್ಗ ಉತ್ಪನ್ನಗಳು, ವಿವಿಧ ರೀತಿಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಗಳ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಚಾರವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಕೈಮಗ್ಗ ಮತ್ತು ಕಾಟನ್‌ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು ಎಂದು ಯುವಕರಿಗೆ ಕರೆ ನೀಡಿದರು.

ವಿಧಾನಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿ, ಪ್ರತಿ ಜಿಲ್ಲೆಗಳಲ್ಲಿ ಕೈಮಗ್ಗದ ಕೌಶಲ್ಯ ತರಬೇತಿ ಕೇಂದ್ರಗಳನ್ನು ತೆರೆಯಬೇಕು. ನೇಕಾರರ ವೃತ್ತಿಯಲ್ಲಿ ನೇಕಾರರಿಗೆ ಕನಿಷ್ಠ ವೇತನವನ್ನು ನಿಗದಿಪಡಿಸಲು ಸರ್ಕಾರದ ಗಮನಕ್ಕೆ ಅಧಿಕಾರಿಗಳಿಗೆ ತರಬೇಕು ಎಂದು ಸೂಚಿಸಿದರು. ಜಿಪಂ ಉಪಾಧ್ಯಕ್ಷೆ ಪಿ. ದೀನಾ ಮಂಜುನಾಥ ಮಾತನಾಡಿದರು. ಕೈಮಗ್ಗ ಇಲಾಖೆಯ ಅಧಿಕಾರಿ ವಿಠಲರಾಜ್‌ ಸ್ವಾಗತಿಸಿ, ವಂದಿಸಿದರು. ಈ ವೇಳೆ ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಆನಂದ್‌ ವಿ. ಕಿತ್ತೂರು, ಕೈಮಗ್ಗ ಮತ್ತು ಜವಳಿ ಇಲಾಖೆ ಉತ್ತರ ವಲಯದ ಜಂಟಿ ನಿರ್ದೇಶಕ ಬಿ. ಶ್ರೀಧರ ನಾಯಕ ಸೇರಿದಂತೆ ಮುಖಂಡರಾದ ಎ.ಮಂಜುನಾಥ, ಶೀಲಾ ಬ್ರಹ್ಮಯ್ಯ ಇತರರು ಇದ್ದರು.

ಸಕ್ರಾಂತಿ ಹಬ್ಬದ ಪ್ರಯುಕ್ತ ಈ ವಸ್ತ್ರ ಮೇಳದಲ್ಲಿ ರೇಷ್ಮೆ ಸೀರೆ, ಟವೆಲ್‌, ಗುಡಾರ, ಲುಂಗಿ, ಬೆಡ್‌ಸೀಟ್‌, ಬೆಡ್‌ಸ್ಟ್ರೇಡ್‌, ಮೊಳಕಾಲ್ಮೂರು ಸೀರೆ, ಚಿಂತಾಮಣಿ ಸೀರೆಗಳು, ಕೈವಸ್ತ್ರ, ಕಂಬಳಿ, ಉಣ್ಣೆ ರಗ್ಗು, ಶಾಲು, ಡೋರ್‌ಮ್ಯಾಟ್‌, ವಾಲ್‌ ಹ್ಯಾಂಗಿಂಗ್ಸ್‌, ಡ್ರೆಸ್‌ ಮೆಟಿರಿಯಲ್‌, ಖಾದಿ ಬಟ್ಟೆಗಳು ಹಾಗೂ ಇಲಕಲ್‌ ಸೀರೆಗಳು ಇತ್ಯಾದಿಗಳು ಕೈಮಗ್ಗ ನೇಕಾರರಿಂದ ನೇರ ಮಾರಾಟಕ್ಕೆ ಯೋಗ್ಯಬೆಲೆಯಲ್ಲಿ ಲಭಿಸಲಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.