ಮತ್ತೆ 66 ಮಂದಿಗೆ ಸೋಂಕು: ಒಂದು ಸಾವು


Team Udayavani, Jul 11, 2020, 12:09 PM IST

ಮತ್ತೆ 66 ಮಂದಿಗೆ ಸೋಂಕು: ಒಂದು ಸಾವು

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶುಕ್ರವಾರ ಪುನಃ 66 ಜನರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1554ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಶುಕ್ರವಾರ ಮತ್ತೂಬ್ಬರು ಬಲಿಯಾಗಿದ್ದು, ಸತ್ತವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಸೋಂಕಿತರ ಸಂಖ್ಯೆ ದಿನೇದಿನೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಗುರುವಾರ 46 ಜನರಲ್ಲಿ ಪತ್ತೆಯಾಗಿದ್ದ ಸೋಂಕು ಶುಕ್ರವಾರ 66 ಜನರಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮಡುಗಟ್ಟಿದೆ. ಗುಣಮುಖರಾಗಿದ್ದ 79 ಜನರು ಬಿಡುಗಡೆಯಾಗುವ ಮೂಲಕ ಒಟ್ಟು 1008 ಜನರು ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ. ಒಟ್ಟು 55 ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್‌ ಸೋಂಕಿಗೆ ಶುಕ್ರವಾರ ಮತ್ತೂಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 47 ವರ್ಷದ ಪುರುಷ ಪಿ. 15538 ಸೋಂಕಿತನು ಜ್ವರ, ಉಸಿರಾಟ ಸಮಸ್ಯೆಯಿಂದಾಗಿ ಜುಲೈ 1ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 10ರಂದು ಮೃತಪಟ್ಟಿದ್ದಾನೆ. ಸಾಯುವ ಮುನ್ನ ಸ್ವ್ಯಾಬ್‌ ಪರೀಕ್ಷಿಸಿದಾಗ ಕೋವಿಡ್‌ ಪಾಸಿಟಿವ್‌ ಬಂದಿದೆ. ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇನ್ನು ಗುರುವಾರ ರೋಗಲಕ್ಷಣ ರಹಿತ 22 ಕೋವಿಡ್‌ ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇಡಲಾಗಿದ್ದು, ಶುಕ್ರವಾರ ಪುನಃ 24 ಸೋಂಕಿತರನ್ನು ಮನೆಯಲ್ಲೇ ಐಸೋಲೇಷನ್‌ನಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದೆ. ಈ ಮೂಲಕ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ರೋಗಲಕ್ಷಣ ರಹಿತ ಸೋಂಕಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಸಿರುಗುಪ್ಪದಲ್ಲಿ ನಾಲ್ಕು ಜನರಲ್ಲಿ ಸೋಂಕು ಪತ್ತೆ :  ನಗರದಲ್ಲಿ 4 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಕೋವಿಡ್ ಸೋಂಕಿತರ ಸುತ್ತಲಿನ 10 ಮನೆಗಳನ್ನು ಸೀಲ್‌ಡೌನ್‌ ಮಾಡಲಾಗಿದ್ದು, 100 ಮೀಟರ್‌ ಬಫರ್‌ಝೋನ್‌ ಎಂದು ಗುರುತಿಸಲಾಗಿದೆ. ಸೋಂಕಿತರ ಮನೆ ಸುತ್ತಮುತ್ತಲಿನ ಪ್ರದೇಶವನ್ನು ಡಿಸ್ಯಾನಿಟೈಸರ್‌ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಸುರೇಶ್‌ಗೌಡ ತಿಳಿಸಿದ್ದಾರೆ. ನಗರದ 15ನೇ ವಾರ್ಡ್‌ನ 52 ವರ್ಷದ ಮಹಿಳೆ, 23ನೇ ವಾರ್ಡ್‌ನ 45 ವರ್ಷದ ಮಹಿಳೆ, 17ನೇ ವಾರ್ಡ್‌ನ ಕೊರ್ರಮ್ಮನ ಹಳ್ಳ ಹತ್ತಿರದ ನಿವಾಸಿ 21 ವರ್ಷದ ಯುವಕ, 17ನೇ ವಾರ್ಡ್‌ನ ನಿವಾಸಿ ಸಿಂಧನೂರಿನ ಬ್ಯಾಂಕ್‌ ಆಫ್‌ ಬರೋಡ ಉದ್ಯೋಗಿ, 32 ವರ್ಷದ ಪುರುಷನಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್‌ -19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.