ಕೋವಿಡ್ ಮಹಾಮಾರಿ ಗೆದ್ದ 80 ವರ್ಷದ ವಯೋವೃದ್ಧ


Team Udayavani, Aug 18, 2020, 6:22 PM IST

ಕೋವಿಡ್ ಮಹಾಮಾರಿ ಗೆದ್ದ 80 ವರ್ಷದ ವಯೋವೃದ್ಧ

ಕೊಟ್ಟೂರು: 80 ವರ್ಷದ ಇಳಿವಯಸ್ಸಿನಲ್ಲಿ ಕೋವಿಡ್ ವಿರುದ್ಧ ಹೋರಾಡಿ ಗುಣಮುಖರಾಗಿ ಮನೆಗೆ ವಾಪಾಸ್ಸಾಗಿದ್ದಾರೆ. ಕೊಟ್ಟೂರು ಪಟ್ಟಣದ ಹಿರಿಯರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಹೆದರದೇ ಕೋವಿಡ್ ಚಿಕಿತ್ಸೆಗೆ ಸ್ಪಂದಿಸಿ ಸೋಂಕಿನಿಂದ ಮುಕ್ತರಾಗಿದ್ದಾರೆ.

ಅನಾರೋಗ್ಯ ನಿಮಿತ್ತ ಆಗಾಗ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವರಿಗೆ ಕೋವಿಡ್‌ 19 ಪರೀಕ್ಷಿಸಿ ಸೋಂಕು ಇರುವುದು ದೃಢಪಟ್ಟಿತು. ಅವರನ್ನು ಬಳ್ಳಾರಿ ಜಿಲ್ಲೆ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಯಿತು. ನಂತರ ಅವರ ಮಗನಿಗೆ ನನ್ನ ತಂದೆಯವರು ಬದುಕುತ್ತಾರೆ ಎಂಬ ನಂಬಿಕೆ ಸಹ ಹೋಯಿತು. ನಾನು ಹೆದರಿ ನನ್ನ ತಂದೆ ಉಳಿಯುವುದಿಲ್ಲವೆಂದು ವ್ಯಥೆಪಡುತ್ತಿದ್ದೆ. ಆದರೆಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಇಲ್ಲಿನ ವೈದ್ಯರು ಮುಂದಾದರು. ಚಿಕಿತ್ಸೆಗೆ ಸ್ಪಂದಿಸಿದ ನಮ್ಮ ತಂದೆಯವರು ಆರೋಗ್ಯದಲ್ಲಿ ಚೇತರಿಸಿಕೊಳ್ಳಲು ಪ್ರಾರಂಭಿಸಿದರು.

ಅಲ್ಲಿನಿಂದ ಇಲ್ಲಿವರೆಗೂ ಯಾವುದೇ ರೀತಿಯಲ್ಲಿ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಲಿಲ್ಲ. ಈ ಕೊರೊನಾದಿಂದ ಯಾವುದೇ ರೀತಿಯ ಭಯಬೇಡ ಎನ್ನುವುದಕ್ಕೆ ನಮ್ಮ ತಂದೆಯೇ ಉದಾಹರಣೆ ಎನ್ನುತ್ತಾರೆ ಮಗ. ಇದೊಂದು ಕಾಯಿಲೆ ವಿನಃ ಮರಣವಲ್ಲ. ಆದ್ದರಿಂದ ಯಾರೂ ಈ ಕಾಯಿಲೆಗೆ ಹೆದರದೆ ಮುನ್ನುಗ್ಗಿ ಕಾಯಿಲೆ ಗುಣಪಡಿಸಿಕೊಳ್ಳಿ. ಸರ್ಕಾರ ಹಾಗೂ ವೈದ್ಯರು ಹೇಳಿದಂತೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬೇರೆಯವರಿಗೆ ಕಾಯಿಲೆ ಹರಡದಂತೆ ಜಾಗೃತರಾಗಿರಿ ಎಂದು ಮನವಿ ಮಾಡಿದರು. 14 ದಿನ ನಿತ್ಯದ ಆಹಾರ ಹಾಗೂ ಚಿಕಿತ್ಸೆ ನೀಡಲು ಮುಂದಾದ ಜಿಲ್ಲಾಸ್ಪತ್ರೆ ಯಾವುದೇ ಸಣ್ಣ ಕೊರತೆ ಇಲ್ಲದ ಹಾಗೆ ದಿನಕ್ಕೆ 5ಮಾತ್ರೆಗಳನ್ನು ಕೊಟ್ಟು ಉಸಿರಾಟದ ತೊಂದರೆ ಸುಧಾರಿಸಿದರು ಎಂದು ಹಿರಿಯರು ಸಂತಸ ವ್ಯಕ್ತಪಡಿಸಿದರು.

ಕೋವಿಡ್ ಬಂದರೆ ಯಾರು ಹೆದರಬೇಕಿಲ್ಲ. ನಮ್ಮ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಸೋಂಕಿತರಿಗೆ ತೊಂದರೆಯಾಗದಂತೆ ಊಟ ಮತ್ತು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಾರೆ. ಸೋಂಕಿತರು ಯಾವುದೇ ಕಾರಣಕ್ಕೂ ಭಯದಿಂದ ಬದುಕುವ ಹಾಗಿಲ್ಲ. ಮನೆಯಲ್ಲಿಯೇ ಇರುವಂತೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದಷ್ಟು ಗುಣಮುಖರನ್ನಾಗಿ ಮಾಡುವುದಷ್ಟೇ ಉದ್ದೇಶವಿರುವುದರಿಂದರೋಗಿಗಳು ರೋಗಮುಕ್ತರಾಗಲು ಸ್ಪಂದಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು  –ಎಸ್‌. ಎಸ್‌. ನಕುಲ್‌ ಡಿಸಿ, ಬಳ್ಳಾರಿ

ಸೋಂಕಿತರಿಗೆ ಚಿಕಿತ್ಸೆ ನೀಡಿ ಬೇಗ ಗುಣಮುಖರನ್ನಾಗಿಸುತ್ತಾರೆ. ಸೋಂಕು ಬಂದಾಗ ಹೆದರದೇ ಚಿಕಿತ್ಸೆ ಪಡೆದುಕೊಳ್ಳಿ. ಮಾಸ್ಕ್ ಮತ್ತು ಅಂತರದಿಂದ ಕೋವಿಡ್ ಓಡಿಸಿ.  – 80 ವರ್ಷದ ವೃದ್ಧ

 

-ಎಂ. ರವಿಕುಮಾರ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.