ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್ 5 ಸಾವು; 7 ಜನರಿಗೆ ಗಾಯ


Team Udayavani, Mar 16, 2022, 11:58 AM IST

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್ 5 ಸಾವು; 7 ಜನರಿಗೆ ಗಾಯ

ಬಳ್ಳಾರಿ: ವಿಜಯನಗರ ಜಿಲ್ಲೆ ಕೂಡಗಲಿಗಿ ತಾಲೂಕು ಬಣವಿಕಲ್ಲು ಬಳಿ ಕ್ರೂಸರ್ ಪಲ್ಟಿಯಾಗಿ 5 ಜನರು ಮೃತಪಟ್ಟು, 9 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ನಡೆದಿದೆ.

ನಿಡಗುಂದಿ ಸಿದ್ದಯ್ಯ ಕಾಳಗಿ(42), ಕಲ್ಲವ್ವ(60), ಲಕ್ಷ್ಮೀಬಾಯಿ(60), ಕಿರಶಹಾಳ್ ಗ್ರಾಮದ ಕಾಂತವ್ವ(50), ಆಲಮಟ್ಟಿ ಗ್ರಾಮದ ನೀಲಮ್ಮ(54) ಮೃತ ದುರ್ದೈವಿಗಳು.

ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗವಾಗಿ ರಾಷ್ಟ್ರೀಯ  ಹೆದ್ದಾರಿ 50ರಲ್ಲಿ ಪ್ರಯಾಣಿಕರೊಂದಿಗೆ ಸಂಚರಿಸುತ್ತಿದ್ದ ಕ್ರೂಸರ್ ವಾಹನ, ಬಣವಿಕಲ್ಲು ಬಳಿ ಆಯತಪ್ಪಿ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ನಂತರ ಮೃತಪಟ್ಟಿದ್ದಾರೆ. ಇನ್ನು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಾಪುರ ಜಿಲ್ಲೆ ನಿಡಗುಂದಿ ಗ್ರಾಮದ ಇವರೆಲ್ಲರೂ, ತಮಿಳು ನಾಡಿನ ರಾಮೇಶ್ವರ ಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದರೆನ್ನಲಾಗಿದೆ. ಅತಿವೇಗವಾಗಿ ಚಲಾಯಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸವನ ಬಾಗೇವಾಡಿಯ ಬಸಮ್ಮ, ನಿಡಗುಂದಿಯ ನಿರ್ಮಲ, ಭೀಮೇಶಪ್ಪ, ಅನಸೂಯಾ, ಕಿರುಶಾಳ್  ರೇಣುಕಾ, ಸುಮಂಗಳಾ, ಸಿದ್ನಾಳ ಮಹಾನಂದೆಮ್ಮ, ತಿಪ್ಪಮ್ಮ, ಅಬ್ಯಾಳ್ ಶಂಕ್ರಮ್ಮ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲರೂ ವಿಜಯಪುರ ಜಿಲ್ಲೆಯವರಾಗಿದ್ದಾರೆ. ಗಾಯಾಳು ನಿರ್ಮಲ ನೀಡಿದ ದೂರಿನಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಗಾಯಳುಗಳನ್ನು ಭೆಟ್ಟಿಯಾಗಿ ವಿಚಾರಿಸಿದ್ದಾರೆ. ಕೂಡ್ಲಿಗಿ ಸಿಪಿಐ ಕೊಟ್ಟೂರು ಸಿಪಿಐ ಪಿಎಸ್ಐ, ಹೊಸಹಳ್ಳಿ ಪಿಎಸ್ಐ, ಮರಿಯಮ್ಮನಹಳ್ಳಿ ಪಿಎಸ್ಐ ಸೇರಿದಂತೆ ಹಾಗೂ ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ.ಕೊಟ್ಟೂರು ಸಿಪಿಐ ನೇತೃತ್ವದಲ್ಲಿ ಪ್ರಕರಣ ತನಿಖೆ ಜರುಗಿಸಲಾಗಿದೆ ಎಂದು ಇಲಾಖೆ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.