ಜಿಲ್ಲಾದ್ಯಂತ ಮಹಾ ಮಾನವತಾವಾದಿಗೆ ನಮನ
Team Udayavani, Apr 15, 2021, 5:54 PM IST
ಬಳ್ಳಾರಿ : ಡಾ| ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ 130 ನೇ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಬುಧವಾರ ಆಚರಿಸಲಾಯಿತು.
ನಗರದ ಡಾ| ಬಿ.ಆರ್.ಅಂಬೇಡ್ಕರ್ ಭವನದ ಬಳಿಯಿರುವ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಬಿ. ನಾಗೇಂದ್ರ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಮುಂಡ್ರಿಗಿ ನಾಗರಾಜ್, ಎ.ಮಾನಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಇತರರು ಇದ್ದರು.
ಮಾಸ್ಕ್ ಇಲ್ಲದವರನ್ನು ಗದರಿದ ಡಿಸಿ: ಜಯಂತಿ ಆಚರಿಸಲು ಬಂದಿದ್ದವರಲ್ಲಿ ಮಾಸ್ಕ್ ಹಾಕದವರನ್ನು ಜಿಲಾಧಿÉಕಾರಿ ಪವನಕುಮಾರ್ ಮಾಲಪಾಟಿ ಅವರು ಮಾಸ್ಕ್ ಹಾಕಿಕೊಂಡು ಒಳಗೆ ಬನ್ನಿ, ಇದು ನಿಮ್ಮ ಒಳ್ಳೆಯದಕ್ಕಾಗಿ ಹೇಳುತ್ತಿರುವುದು, ಮಾಸ್ಕ್ ಇಲ್ಲದೆ ಯಾರೂ ಹತ್ತಿರ ಬರಬೇಡಿ ಎಂದು ಗದರಿಸಿದ ಪ್ರಸಂಗ ನಡೆಯಿತು.