ಹಂಪಿ ಉತ್ಸವಕ್ಕೆ ಶೀಘ್ರ ದಿನಾಂಕ ನಿಗದಿ


Team Udayavani, Nov 2, 2020, 6:02 PM IST

ಹಂಪಿ ಉತ್ಸವಕ್ಕೆ ಶೀಘ್ರ ದಿನಾಂಕ ನಿಗದಿ

ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಹಂಪಿ ಉತ್ಸವ ಆಚರಣೆಗೆ ಸಂಬಂಧಿ ಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವ ಬಿ.ಎಸ್‌. ಆನಂದ್‌ಸಿಂಗ್‌ ಹೇಳಿದರು.

ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಭಾನುವಾರ ಕರ್ನಾಟಕರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲೇ ತಿಳಿಸಿದಂತೆ ಹಂಪಿ ಉತ್ಸವವನ್ನು ಈ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ಸರಳವಾಗಿ ಆಚರಿಸಲಾಗುವುದು. ಸದ್ಯ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಅದಕ್ಕಾಗಿ ಅದು ಮುಗಿದ ತಕ್ಷಣ ನಡೆಸಲು ನಿರ್ಧರಿಸಲಾಗುವುದು. ಈ ಉತ್ಸವ ಆಚರಣೆ ಬಗ್ಗೆ ಸರ್ಕಾರ ನಿರ್ಲಕ್ಷ ಧೋರಣೆ ಇಲ್ಲ. ಈಗಾಗಲೇ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿರಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ ಇಳಿಕೆ: ಬಳ್ಳಾರಿ ಜಿಲ್ಲೆ ಸೇರಿ ರಾಜ್ಯದಲ್ಲೂ ಕೋವಿಡ್‌ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಗಳನ್ನು ಎಲ್ಲರೂ ಬಳಕೆ ಮಾಡಿದರೆ ಅದರಿಂದ ಸಂಪೂರ್ಣ ನಿಯಂತ್ರಣ ಮಾಡಬಹುದು. ಚಳಿಗಾಲದಲ್ಲಿ ಕೋವಿಡ್‌ ಹೆಚ್ಚಾಗಬಹುದು ಎಂಬ ಅನುಮಾನವಿದೆ. ಅದಕ್ಕಾಗಿ ಎಲ್ಲರೂ ಜಾಗೃತರಾಗಿರಬೇಕು. ಸದ್ಯ ಕಡಿಮೆಯಾಗುತ್ತಿದೆ ಎಂದರೆ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿದ್ದು, ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ ಎಂದೇ ಭಾವಿಸಬೇಕಾಗಿದೆ. ಹಾಗಾಗಿ ಜನರು ಸ್ಯಾನಿಟೈಸರ್‌, ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಗೆಲುವು ಖಚಿತ: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಆದರೂ ನಮ್ಮ ಪಕ್ಷದ ಅಭ್ಯರ್ಥಿಗಳೂ ಸಹ ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ. ನಮ್ಮ ಸರ್ಕಾರದ ಕೆಲಸ ನೋಡಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.

ನೀತಿ ಸಂಹಿತೆ: ವಿಜಯನಗರ ಜಿಲ್ಲೆಯ ರಚನೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲ್ಲ. ನೀತಿ ಸಂಹಿತೆ ಇದೆ ಎಂದು ಜಾರಿಕೊಂಡ ಆನಂದ ಸಿಂಗ್‌ ಅವರು ಪಕ್ಕದಲ್ಲಿದ್ದ ಶಾಸಕಸೋಮಶೇಖರ ರೆಡ್ಡಿ ಅವರಿಗೆ ಅಣ್ಣಾನೀನೇನು ಗಾಬರಿಯಾಗಬೇಡ ಎಂದಿದ್ದು ಗಮನ ಸೆಳೆಯಿತು.

ಎರಡನೇ ಬೆಳೆಗೆ ನೀರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈ ಬಾರಿ ಬೇಸಿಗೆಯ ಎರಡನೇ ಬೆಳೆಗೆ ನೀರು ಬಿಡುವ ಕುರಿತು ಚರ್ಚಿಸಲು ಸದ್ಯದಲ್ಲೇ ನೀರಾವರಿಸಲಹಾ ಸಮಿತಿ ಸಭೆ ಕರೆಯಲಾಗುವುದು ಎಂದ ಸಚಿವ ಆನಂದ್‌ಸಿಂಗ್‌, ತುಂಗಭದ್ರಾ ಜಲಾಶಯ ಇಂದಿಗೂ ಭರ್ತಿಯಾಗಿದೆ.ಜತೆಗೆ ಈ ಬಾರಿ ಪ್ರಕೃತಿಯು ರೈತರಿಗೆ ಸಹಕಾರ ನೀಡಿದ್ದು ಉತ್ತಮವಾಗಿ ಮಳೆ ಸುರಿದಿದೆ.

ಇದರಿಂದ ಎರಡನೇ ಬೆಳೆ ಬೆಳೆಯಲು ನೀರಿನ ಸಮಸ್ಯೆ ಇಲ್ಲ. ಆದರೆ ಯಾವ ಯಾವ ಕಾಲುವೆಗಳಿಗೆ ಎಷ್ಟು ಪ್ರಮಾಣದಲ್ಲಿ ನೀರು ಹಂಚಿಕೆ ಮಾಡಿ ಬೆಳೆಯನ್ನು ಉತ್ತಮವಾಗಿ ಪಡೆಯಲು ಸಾಧ್ಯ ಎಂಬುದರ ಬಗ್ಗೆ ಅಧಿ  ಕಾರಿಗಳು ಮತ್ತು ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಶಾಸಕ, ಸಂಸದರಸಭೆ ಕರೆದು ನಿರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಶಾಸಕ ಜಿ. ಸೋಮಶೇಖರರೆಡ್ಡಿ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.