ಖಾತ್ರಿ ಅನುಷ್ಠಾನ; ಬಳ್ಳಾರಿ ಜಿಪಂಗೆ ಪ್ರಶಸ್ತಿ


Team Udayavani, Apr 10, 2021, 8:23 PM IST

ಬ್ಗಹಚವಬ

ಬಳ್ಳಾರಿ: ಕಳೆದ 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯಿತಿಯು ಜಿಪಂ ಪ್ರಶಸ್ತಿಗೆ ಪಾತ್ರವಾಗಿದ್ದು, ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್‌. ನಂದಿನಿ ಅವರು ಗಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ, ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬಳ್ಳಾರಿ ಜಿಪಂ ನೇತೃತ್ವ ವಹಿಸಿರುವ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರಿಗೆ ಪ್ರಶಸ್ತಿ ವಿತರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳ್ಳಾರಿ ಜಿಪಂ ಹಾಲಿ ಸಿಇಒ ನಂದಿನಿ ಕೆ.ಆರ್‌. ಅವರು ಇದ್ದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಮನರೇಗಾ ಆಯುಕ್ತರು ಹಾಗೂ ವಿಜಯನಗರ ಜಿಲ್ಲೆಯ ವಿಶೇಷಾಧಿ  ಕಾರಿ ಅನಿರುದ್ಧ ಶ್ರವಣ್‌ ಸೇರಿದಂತೆ ಇನ್ನಿತರರು ಇದ್ದರು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರು, ಮನರೇಗಾದಡಿಯಲ್ಲಿ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಪ್ರಶಸ್ತಿ ಬಂದಿರುವುದು ತುಂಬಾ ಖುಷಿ ವಿಚಾರ. ರಾಜ್ಯದಲ್ಲಿ ಯಾವುದೇ ಜನಪ್ರತಿನಿಧಿ ಗಳಿಗೆ ಇಲ್ಲದೇ ಇರುವ ಈ ರೀತಿಯ ಪ್ರಶಸ್ತಿ ಸ್ವೀಕರಿಸಿ ಸನ್ಮಾನಿಸಿಕೊಳ್ಳುವ ಅವಕಾಶ ನನಗೆ ಬಂದಿರುವುದು ನನ್ನ ಸುದೈವ. ಮನರೇಗಾ ಅನುಷ್ಠಾನದಲ್ಲಿ ಉತ್ತಮ ಸ್ಪಂದನೆ ನೀಡಿದ ಜಿಲ್ಲೆಯ ಗ್ರಾಮೀಣ ಜನತೆಗೆ, ಜಿಪಂ, ತಾಪಂ, ಗ್ರಾಪಂ ಹಾಗೂ ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಅಭಿನಂದನೆ ಸಲ್ಲಿಸಿವೆ ಎಂದರು.

ಈ ಪ್ರಶಸ್ತಿಗೆ ಭಾಜನರಾದ ಜಿಪಂ ಡಿಎಂಐಎಸ್‌ ಶಿವಪ್ರಸಾದ್‌, ತಾಪಂ ಇಒ ಬಸಪ್ಪ, ಐಇಸಿ ಸಂಯೋಜಕ ಫಜಿಲ್‌ ಅಹಮ್ಮದ್‌, ತಾಂತ್ರಿಕ ಸಂಯೋಜಕ ವಿಜಯ್‌ ಮಹಾಂತೇಶ್‌, ಅಲಬೂರು ಗ್ರಾಪಂ ಪಿಡಿಒ ಮಾಧವಿ ಅವರ ಕಾರ್ಯವಿಧಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿಯಾಗಿ 2021-22ನೇ ಸಾಲಿನಲ್ಲಿಯೂ ಮನರೇಗಾ ಅನುಷ್ಠಾನದಲ್ಲಿ ಗ್ರಾಪಂ, ತಾಪಂಗಳು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸರ್ಕಾರದ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದಿಂದ ರಾಜ್ಯಮಟ್ಟದವರೆಗೆ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಕೆಲಸ ಮಾಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದ ಅವರು ಜಿಲ್ಲೆಯು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆಯಲಿ ಎಂದು ಆಶಿಸಿದರು.

ಗ್ರಾಪಂ, ಕೃಷಿ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಮೂಲಕ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮೀಣ ಭಾಗದ ಪ್ರತಿಯೊಂದು ಹಳ್ಳಿ ಹಳ್ಳಿಗೂ ಮನರೇಗಾ ಯೋಜನೆಯನ್ನು ತಲುಪಿಸುವ ಕೆಲಸ ಬಳ್ಳಾರಿ ಜಿಪಂನಿಂದ ಸಾಧ್ಯವಾಗಿದೆ ಎಂದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರು 2020-21ನೇ ಸಾಲಿನಲ್ಲಿ 99 ಲಕ್ಷ ಮಾನವ ದಿನಗಳ ಸೃಜನೆ ಮಾಡುವ ಗುರಿ ಹೊಂದಲಾಗಿತ್ತು.

ಅಧಿಕಾರಿಗಳ ಕಾರ್ಯಕ್ಷಮತೆ ಮತ್ತು ಪ್ರಾಮಾಣಿಕ ಕೆಲಸದಿಂದಾಗಿ 1,12,64,669 ಮಾನವ ದಿನಗಳ ಸೃಜನೆ ಮಾಡುವುದರ ಮುಖಾಂತರ ಶೇ.114ರಷ್ಟು ಸಾಧನೆ ಮಾಡಲಾಗಿದೆ ಎಂದರು. ಗಾಂಧಿಧೀಜಿ ಕನಸು ನನಸು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪಂಚಾಯಿತಿಯ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಳ್ಳಲು ಅವಕಾಶವಿದೆ.

ಸಮುದಾಯಕ್ಕೆ ಸಂಬಂಧಿ ಸಿದ ಬದು ನಿರ್ಮಾಣ, ಕೃಷಿ ಹೊಂಡ, ಇಂಗು ಗುಂಡಿ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಕಲ್ಯಾಣಿಗಳ ನವೀಕರಣ, ಗೋಕಟ್ಟೆ ನಿರ್ಮಾಣ, ಚೆಕ್‌ ಡ್ಯಾಂ ನಿರ್ಮಾಣ, ಕಾಲುವೆಗಳ ಹೂಳೆತ್ತುವುದು, ಸಿಸಿ ಚರಂಡಿ, ಸಿಸಿ ರಸ್ತೆ ನಿರ್ಮಾಣ, ಅಂಗನವಾಡಿ ಕೇಂದ್ರಗಳ ನಿರ್ಮಾಣ, ರಸ್ತೆಗಳ ಅಭಿವೃದ್ಧಿ, ಶಾಲೆ ಮೈದಾನದ ಅಭಿವೃದ್ಧಿ ಮತ್ತು ತಡೆಗೋಡೆಗಳ ಅಭಿವೃದ್ಧಿ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ಹಳ್ಳಿಯ ಜನರಿಗೆ ಕೆಲಸ ನೀಡಿ ಆ ಗ್ರಾಮಗಳ ಅಭಿವೃದ್ಧಿ ಜೊತೆಗೆ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸುವ ಕೆಲಸ ಮಾಡಲಾಗಿದೆ.

ಮನರೇಗಾ ಯೋಜನೆ ಹಳ್ಳಿಯ ಜನರ ಬದುಕು ಕಟ್ಟಿಕೊಳ್ಳುವಲ್ಲಿ ಸಹಾಯದ ಹಸ್ತ ಚಾಚುತ್ತದೆ ಎಂದು ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರು ಹೇಳಿದರು. ಮನರೇಗಾ ಯೋಜನೆಯ ಮುಖಾಂತರ ಗ್ರಾಮೀಣ ಭಾಗದ ಬಡಜನರು ನಗರಗಳ ಕಡೆ ವಲಸೆ ಹೋಗದಂತೆ ತಡೆಯುವ ಕೆಲಸವಾಗುತ್ತಿದೆ. ಈ ಮೂಲಕ ಗ್ರಾಮಗಳ ಅಭಿವೃದ್ಧಿ ಹಾಗೂ ಗ್ರಾಮ ಸ್ವರಾಜ ಪರಿಕಲ್ಪನೆಯ ಕುರಿತು ಗಾಂಧೀ ಜಿಯವರು ಕಂಡಿದ್ದ ಕನಸು ಮನರೇಗಾ ಯೋಜನೆಯ ಮುಖಾಂತರ ನನಸಾಗುವ ಹಾದಿಯತ್ತ ಸಾಗುತ್ತಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.