ಏಡ್ಸ್‌ ಸೋಂಕು ತಡೆಗೆ ಜಾಗೃತಿ ಅಗತ್ಯ: ನ್ಯಾ| ಮಂಜುಳಾ


Team Udayavani, Dec 12, 2020, 7:57 PM IST

ಏಡ್ಸ್‌ ಸೋಂಕು ತಡೆಗೆ ಜಾಗೃತಿ ಅಗತ್ಯ: ನ್ಯಾ| ಮಂಜುಳಾ

ಹರಪನಹಳ್ಳಿ: ಏಡ್ಸ್‌ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರಾದ ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್‌ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಚ್‌ಐವಿ ಸೋಂಕಿನ ಬಗ್ಗೆ ಜನಸಾಮಾನ್ಯರಲ್ಲಿ ಆರೋಗ್ಯದ ತಿಳಿವಳಿಕೆ ಮತ್ತು ಕೊರತೆ ಇದ್ದು ಸಾರ್ವಜನಿಕರಲ್ಲಿ ಏಡ್ಸ್‌ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಿ, ಏಡ್ಸ್‌ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಬೇಕು. ಎಚ್‌ಐವಿ ಬಾಧಿ ತರನ್ನು ಯಾವುದೇ ತಾರತಮ್ಯ ಮಾಡದೇ ಗೌರವದಿಂದ ಕಾಣಬೇಕು. ಎಚ್‌ಐವಿ ಬಾಧಿತರಿಗೆ ಸರಕಾರದಿಂದ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು ಇದರ ಬಗ್ಗೆತಿಳಿವಳಿಕೆ ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.

ಸಿವಿಲ್‌ ನ್ಯಾಯಾಧೀಶರಾದ ಬಿ.ಜಿ. ಶೋಭಾ ಮಾತನಾಡಿ, ಕಾನೂನಿನಡಿಯಲ್ಲಿ ಏಡ್ಸ್‌ ಬಾಧಿ  ತರಿಗೆ ಗೌಪ್ಯತೆಯ ಹಕ್ಕು ನೀಡಲಾಗಿದ್ದು,ಎಚ್‌ಐವಿ ಏಡ್ಸ್‌ಗೆ ತುತ್ತಾಗಿರುವ ವ್ಯಕ್ತಿಗೆ ಸಾರ್ವಜನಿಕ ಕ್ಷೇತ್ರದಲ್ಲಾಗಲಿ ಅಥವಾ ಖಾಸಗಿಕ್ಷೇತ್ರದಲ್ಲಾಗಲಿ ತಾರತಮ್ಯವಾಗಿದ್ದರೆ, ಕಾನೂನು ರಕ್ಷಣೆಗೆ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಆಪ್ತ ಸಮಲೋಚಕ ಜಿ.ಎ.ಮಲ್ಲಿಕಾರ್ಜುನ ಮಾತನಾಡಿ, ಎಚ್‌.ಐ.ವಿ ಎನ್ನುವುದು ವೈರಸ್‌ ಮೂಲಕ ಹರಡುವ ರೋಗವಾಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹಂತ ಹಂತವಾಗಿ ನಾಶಗೊಳಿಸುವುದರಿಂದ ವಿವಿಧ ರೋಗಗಳಿಗೆತುತ್ತಾಗಬೇಕಾಗುತ್ತದೆ. ಆದ್ದರಿಂದ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಆಗ ರೋಗದ ಸ್ಥಿತಿಗತಿ ತಿಳಿಯಲು ಸಾಧ್ಯವಾಗುತ್ತದೆ. ಎಚ್‌ಐವಿ ಏಡ್ಸ್‌ ಕುರಿತು ಇತ್ತೀಚಿನ ದಿನಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳುನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಬಿ.ಚಂದ್ರೇಗೌಡ ಅಧ್ಯಕ್ಷತೆವಹಿಸಿದ್ದರು. ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎ.ಎಂ. ಬಸವರಾಜ್‌, ಸಾರ್ವಜನಿಕ ಆಸ್ಪತ್ರೆ ಅಧೀಕ್ಷಕ ಡಾ| ಶಿವಕುಮಾರ್‌, ಮಕ್ಕಳ ಕಲ್ಯಾಣ ಇಲಾಖೆ ಮಾಲುಂಬಿ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.