ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ


Team Udayavani, Oct 24, 2021, 2:01 PM IST

ballari news

ಬಳ್ಳಾರಿ: ಎಸ್‌ಟಿ ಮೀಸಲಾತಿ ಹೆಚ್ಚಿಸುವಂತೆಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ಎಸ್‌ಟಿಮೀಸಲಾತಿ ಹೋರಾಟ ಸಮಿತಿ ಕಳೆದ ನಾಲ್ಕುದಿನಗಳಿಂದ ಹಮ್ಮಿಕೊಂಡಿದ್ದ ಆಮರಣಾಂತ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಶನಿವಾರ ಅಂತ್ಯಗೊಳಿಸಲಾಯಿತು.

ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಕೂಡ್ಲಿಗಿ ಶಾಸಕಎನ್‌.ವೈ. ಗೋಪಾಲಕೃಷ್ಣ, ಮಾಜಿ ಶಾಸಕ ನಾರಾಸೂರ್ಯನಾರಾಯಣರೆಡ್ಡಿ, ವಾಲ್ಮೀಕಿ ಪೀಠದಮರಡಿ ಜಂಬಯ್ಯ ನಾಯಕ ಅವರು, ಸತ್ಯಾಗ್ರಹಕ್ಕೆಕೂತಿದ್ದ ಯುವ ಮುಖಂಡರಾದ ಬಿ.ಆರ್‌.ಎಲ್‌.ಶ್ರೀನಿವಾಸ್‌, ಗಡ್ಡಂ ತಿಮ್ಮಪ್ಪ ಅವರಿಗೆ ಮನವೊಲಿಸಿ ಎಳೆನೀರು ಕುಡಿಸುವ ಮೂಲಕ ಆಮರಣಾಂತ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎನ್‌.ವೈ. ಗೋಪಾಲಕೃಷ್ಣ, ವಾಲ್ಮೀಕಿ ಸಮುದಾಯಕ್ಕೆಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7.5ಕ್ಕೆಹೆಚ್ಚಿಸಬೇಕೆಂಬ ಸಮುದಾಯದ ಬೇಡಿಕೆನ್ಯಾಯಯುತವಾಗಿದೆ. ಇಂಥ ಹೋರಾಟವು ಸಹನಡೆಯಲೇಬೇಕಿತ್ತು. ಅದು ಬಳ್ಳಾರಿಯಿಂದಲೇನಡೆದಿರುವುದು ಇಲ್ಲಿನ ನಾಯಕರ ಕೆಚ್ಚನ್ನುತೋರಿಸುತ್ತದೆ.

ಮೀಸಲಾತಿ ಹೆಚ್ಚಳಕ್ಕಾಗಿ ಸತ್ಯಾಗ್ರಹಕೈಗೊಂಡಿರುವ ಯುವ ಮುಖಂಡರಾದ ಬಿ.ಆರ್‌.ಎಲ್‌.ಶ್ರೀನಿವಾಸ್‌, ಗಡ್ಡಂ ತಿಮ್ಮಪ್ಪ ಅವರುಹೋರಾಟವನ್ನು ಆರಂಭಿಸಿದ್ದಾರೆ. ಮುಂದೆ ಇನ್ನುಸಾಕಷ್ಟು ಇದೆ. ಸಮುದಾಯದ ಎಲ್ಲ ಶಾಸಕರನ್ನುಬೆಂಗಳೂರಿನಲ್ಲಿ ಸಭೆ ಕರೆದು ಒಮ್ಮತದ ನಿರ್ಣಯಕೈಗೊಂಡು ಅದಕ್ಕೊಂದು ಮಾರ್ಗಸೂಚಿಗಳನ್ನು ರೂಪಿಸಬೇಕು. ಮುಖ್ಯಮಂತ್ರಿಗಳನ್ನು ಸಹಭೇಟಿಯಾಗಿ ಒತ್ತಡ ಹೇರಲಾಗುವುದು ಎಂದವರು ಭರವಸೆ ನೀಡಿದರು.

ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಮಾತನಾಡಿ, ಸತ್ಯಾಗ್ರಹ ನಡೆಸಿರುವಶ್ರೀನಿವಾಸ್‌ ಪಾಲಿಕೆ ಚುನಾವಣೆಗೂ ಮುನ್ನ ನನ್ನಬಳಿಗೆ ಬಂದಿದ್ದರು. ನಾನೇ ಟಿಕೆಟ್‌ ಕೊಡಿಸಿದೆ.

ಅವರು ಜಯಗಳಿಸಿ ಬಂದಿದ್ದಾರೆ. ಅಲ್ಲಿವರೆಗೂಶ್ರೀನಿವಾಸ್‌ ಎಂದರೆ ಯಾರಿಗೂ ಗೊತ್ತಿರಲಿಲ್ಲ.ವಾಲ್ಮೀಕಿ ಶ್ರೀಗಳಿಗೆ ನೂರು ಕೆಜಿ ತುಲಾಭಾರಮಾಡಿಸಿದ್ದೇನೆ. ಸಮುದಾಯದ ಬೇಡಿಕೆನ್ಯಾಯಯುತವಾಗಿದೆ ಎಂದು ತಿಳಿಸಿದರು.

ವಾಲ್ಮೀಕಿ ಪೀಠದ ಧರ್ಮದರ್ಶಿ ಮರಡಿಜಂಬಯ್ಯ ನಾಯಕ ಮಾತನಾಡಿ, ಅ.20ರಂದು ನಡೆದ ವಾಲ್ಮೀಕಿ ಜಯಂತಿಸರ್ಕಾರಿ ಕಾರ್ಯಕ್ರಮವನ್ನು ಬಹಿಷ್ಕಾರ ಹಾಕಿಆಮರಣಾಂತ ಸತ್ಯಾಗ್ರಹ ಕೂತಿರುವುದುಬಳ್ಳಾರಿಯಲ್ಲೇ ಮೊದಲು. ಈ ಮೊದಲುಸ್ವಾಮೀಜಿಗಳ ನೇತೃತ್ವದಲ್ಲಿ 20 ದಿನಗಳ ಕಾಲ400 ಕಿಮೀ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆಮುತ್ತಿಗೆ ಹಾಕಿದ್ದೇವೆ.

1958ರಿಂದ ಸಮುದಾಯಕ್ಕೆಶೇ.3 ರಷ್ಟು ಮೀಸಲಾತಿ ನೀಡಲಾಗಿದ್ದು, ಅದುಇಂದಿಗೂ ಮುಂದುವರೆದಿದೆ. ಬಾಕಿ ಉಳಿದಿರುವಮೀಸಲಾತಿಯನ್ನು ನೀಡುವಂತೆ ಕಳೆದ 30ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂಸರ್ಕಾರಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಮೀಸಲಾತಿಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದ್ದರೂ, ಬೇರೆ ರಾಜ್ಯಗಳಲ್ಲಿ ಹೆಚ್ಚಿಸಲಾಗಿದೆ.

ಈ ನಿಟ್ಟಿನಲ್ಲಿರಾಜ್ಯ ಸರ್ಕಾರವು ಕ್ರಮಕೈಗೊಳ್ಳಬೇಕು ಎಂದವರುಆಗ್ರಹಿಸಿದರು.ಸತ್ಯಾಗ್ರಹದಲ್ಲಿ ವಿ.ಎಸ್‌.ಶಿವಶಂಕರ್‌,ಮುಖಂಡರಾದ ಅಸುಂಡಿ ಹೊನ್ನೂರಪ್ಪ,ಜಗನ್ನಾಥ್‌, ವಿಜಯಕುಮಾರ್‌, ಎರಗುಡಿಮಲ್ಲಯ್ಯ, ರುದ್ರಪ್ಪ, ಹುಲಿಗೇಶಿ,ವಿಜಯಕುಮಾರ್‌ ಸೇರಿದಂತೆ ಸಮುದಾಯದನೂರಾರು ಜನರು ಇದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.