ಕೊರೊನಾ ಸೋಂಕಿತರಿಗೆ ಶೇ.50ರಷ್ಟು ಬೆಡ್‌ ಮೀಸಲಿಡಿ


Team Udayavani, Apr 16, 2021, 6:21 PM IST

16-13

ಬಳ್ಳಾರಿ: ಕೋವಿಡ್‌ ಸೋಂಕು ಎರಡನೇ ಅಲೆಯಲ್ಲೂ ಅಬ್ಬರಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳು ಜನರಿಂದ ಸುಲಿಗೆ ಮಾಡುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದುಕೊಂಡು ನಿರ್ವಹಿಸಬೇಕು. ಕೋವಿಡ್‌ ಸೋಂಕಿತರಿಗೆ ಶೇ.50ರಷ್ಟು ಬೆಡ್‌ ಮೀಸಲಿಡಬೇಕು ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು.ಬಸವರಾಜ್‌ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ಸೋಂಕನ್ನು ನಿಯಂತ್ರಿಸಲು ಸರ್ಕಾರ ಸಾರ್ವಜನಿಕ ಆಸ್ಪತ್ರೆಗಳನ್ನು ಬಲಪಡಿಸಬೇಕು. ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ವಶಕ್ಕೆ ಪಡೆದು ನಿಭಾಯಿಸುವಂತೆ ಮೊದಲ ಅವ ಧಿಯಲ್ಲೇ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರದಿಂದ ಆ ಕ್ರಮ ಆಗಿಲ್ಲ. ಇದೀಗ ಎರಡನೇ ಅಲೆಯಲ್ಲೂ ಕೋವಿಡ್‌ ಅಬ್ಬರ ಹೆಚ್ಚಾಗಿದ್ದು, ಖಾಸಗಿ ಆಸ್ಪತ್ರೆಗಳು ಕೋವಿಡ್‌ ನೆಪದಲ್ಲಿ ಸಾರ್ವಜನಿಕರಿಂದ ದುಬಾರಿ ಹಣ ಸುಲಿಗೆ ಮಾಡುತ್ತಿವೆ ಎಂದು ಆಪಾದಿಸಿದರು. ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಅನುಗುಣವಾಗಿ ಹಾಸಿಗೆ, ವೆಂಟಿಲೇಟರ್‌ಗಳು ಲಭ್ಯವಿಲ್ಲ. ಕೊರೊನಾ ಎರಡನೇ ಅಲೆ ನಿಯಂತ್ರಿಸುವಲ್ಲಿ ಸರ್ಕಾರ ನಿರ್ಲಕ್ಷ ವಹಿಸಿದೆ. ಈಗಲೂ ಬೆಡ್‌, ವೆಂಟಿಲೇಟರ್‌ ಇಲ್ಲದೆ ಜನ ಸಾಯುತ್ತಿದ್ದಾರೆ. ಸರ್ಕಾರ ಕೇವಲ ಮೇಲ್ನೋಟಕ್ಕೆ ಮಾತ್ರ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ ಬಳಸಿ ಎಂಬ ಬಾಯಿ ಮಾತುಗಳನ್ನು ಹೇಳುತ್ತಿದ್ದೆಯೇ ಹೊರತು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದರು.

ಖಾಸಗಿ ಆಸ್ಪತ್ರೆ ವಶಕ್ಕೆ ಪಡೆಯಿರಿ: ಕೋವಿಡ್‌ ತುರ್ತು ಪರಿಸ್ಥಿತಿ ಘೋಷಿಸಿ ಕೂಡಲೇ ತಾತ್ಕಾಲಿಕವಾಗಿ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಕೋವಿಡ್‌ ತಡೆಗೆ ಬಳಸಿಕೊಳ್ಳಬೇಕು. ಎಲ್ಲ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್‌ ಸೋಂಕಿತರಿಗೆ ಮೀಸಲಿಡಬೇಕು. ಈ ಮೂಲಕ ಸುಲಿಗೆ ತಡೆಯಲು ಮುಂದಾಗಬೇಕು. ಮೊದಲನೇ ಅಲೆಯಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈ ಮೀರಿತ್ತಾದರೂ, ರಾಜ್ಯ ಸರ್ಕಾರ ಈಗಲೂ ಅದೇ ರಾಗ ಹಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಕೋವಿಡ್‌ ನಿಯಂತ್ರಿಸುವ ಲಸಿಕೆಯನ್ನು ಪಡೆದ 28 ದಿನಗಳ ಬಳಿಕ ಎರಡನೇ ಡೋಸ್‌ ನೀಡಬೇಕು. ನಂತರ ಮೂರು ವಾರಗಳ ಬಳಿಕ 3ನೇ ಡೋಸ್‌ ಪಡೆಯಬೇಕು. ಆದರೆ, ಇದೀಗ ಎರಡನೇ ಡೋಸ್‌ ನೀಡುವ ಅವ ಯನ್ನು ಮತ್ತಷ್ಟು ದೀರ್ಘ‌ಗೊಳಿಸಲಾಗುತ್ತಿದೆ. 30,35 ದಿನಗಳವರೆಗೆ ನೀಡುತ್ತಿಲ್ಲ. ಹಾಗಾಗಿ ಅವ  ಧಿಯನ್ನು ದೀರ್ಘ‌ಗೊಳಿಸದೇ ನಿಗದಿತ ಅವಧಿಯೊಳಗೆ ನೀಡಬೇಕು. ಲಸಿಕೆ ಕೊರತೆಯಿಂದ ಈ ರೀತಿ ಆಗುತ್ತಿದೆ. ಸಮರ್ಪಕವಾಗಿ ಅಗತ್ಯ ಲಸಿಕೆ ಪೂರೈಸಬೇಕು. ಕೈಗಾರಿಕೆಗಳು ಉತ್ಪಾದನೆ ನಿಲ್ಲಿಸಿ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು. ಅಗತ್ಯ ಸೇವೆಯಲ್ಲಿಯೂ ಶೇ.50ರಷ್ಟು ಸಿಬ್ಬಂದಿಯನ್ನು ಕೋವಿಡ್‌ ಸುರಕ್ಷತಾ ಕ್ರಮದೊಂದಿಗೆ ಬಳಸಬೇಕು. ಕಾರ್ಮಿಕರಿಗೆ ನರೇಗಾ ಉದ್ಯೋಗ ನೀಡಬೇಕು. ರಾಜ್ಯ ಸರ್ಕಾರ ಬಾಯಿ ಪ್ರಚಾರದ ಮಾತುಗಳನ್ನು ಬಿಡಬೇಕು ಎಂದು ಟೀಕಿಸಿದರು. ಕೋವಿಡ್‌ ಸಂದಭರ್ದಲ್ಲಿ ಎರಡೂ ಸರಕಾರಗಳು ಜನರನ್ನು ಲೂಟಿ ಮಾಡುತ್ತಿವೆ. ಕಾರ್ಪೋರೆಟ್‌ ಶಕ್ತಿಗಳಿಗೆ ಅನುಕೂಲ ಮಾಡಲು ಕಾಯಿದೆಗಳನ್ನು ಜಾರಿಗೆ ತಂದರು.

ಕೋವಿಡ್‌ ತಡೆಯಲು ರೈತರು ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಲು ಕೃಷಿ ಕಾಯಿದೆಗಳನ್ನು ತಾತ್ಕಾಲಿಕವಾಗಿ ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲ ಕುಟುಂಬಗಳ ಸಾಲಗಳನ್ನು ಕೂಡಲೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಚಂದ್ರಕುಮಾರಿ ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.