ಸೋಂಕು ನಿಯಂತ್ರಣಕ್ಕೆ ಪಾಲಿಕೆಯಿಂದ ಕ್ರಮ


Team Udayavani, May 16, 2021, 10:07 PM IST

16-14

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಹಾಗೂ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆಯಿಂದ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಲ್ಹೋಟ್ ತಿಳಿಸಿದ್ದಾರೆ.

ಕೋವಿಡ್‌ ಸಮಯದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದ್ದು, 39 ವಾರ್ಡ್‌ಗಳಲ್ಲಿ ತಂಡಗಳನ್ನು ರಚಿಸಿ ಸಮೀಕ್ಷೆ ಕಾರ್ಯನಿರ್ವಹಿಸಲಾಗುತ್ತಿದೆ. ಸೋಂಕು ನಿವಾರಕ ಸಿಂಪಡಣೆ ಮಾಡುವ ಕೆಲಸ ಮಾಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಕೋವಿಡ್‌-19ರ ಎರಡನೇ ಅಲೆ ಹಿನ್ನೆಲೆಯಲ್ಲಿ ಸಂಪೂರ್ಣ ಕೊರೊನಾ ಕರ್ಫ್ಯೂ ಮಾಡಿರುವುದರಿಂದ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮ, ಜನಸಂದಣೆ ಪ್ರದೇಶಗಳನ್ನು ಬಂದ್‌ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಎಲ್ಲ ವಾರ್ಡಗಳಲ್ಲಿ ಪ್ರತಿನಿತ್ಯ ಫೂಮಿಗೇಷನ್‌ ಮಾಡಲಾಗಿರುತ್ತದೆ. ಪೌರಕಾರ್ಮಿಕರಿಗೆ ಪರಿಕರಗಳನ್ನು ಒದಗಿಸಲಾಗಿದೆ ಹಾಗೂ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. 5 ಇಂದಿರಾ ಕ್ಯಾಂಟಿನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ ಸರಬರಾಜು ಮಾಡಲಾಗಿದೆ ಹಾಗೂ ಪ್ರತಿದಿನ ಕೋವಿಡ್‌-19ರ ನಿಯಮಗಳನ್ನು ಉಲ್ಲಂಘಿ ಸಿದವರಿಗೆ ದಂಡ ವಿ ಧಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪಾಲಿಕೆಯಿಂದ ಕೈಗೊಂಡ ಕ್ರಮಗಳು: ಜನಜಾಗೃತಿ-ಪಾಲಿಕೆಯ ಕಸ ಸಂಗ್ರಹಣೆ ವಾಹನಗಳಲ್ಲಿ ಮತ್ತು ಇತರೆ ಮೈಕ್‌ ಇರುವ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಆಡಿಯೊ ಜಿಂಗಲ್ಸ್‌ಗಳನ್ನು ಹಾಕಲಾಗುತ್ತಿದೆ. ಸಾಮಾಜಿಕ ಮಾಧ್ಯಮದ ಮೂಲಕ-ಪಾಲಿಕೆಯ ವೆಬ್‌ಪೇಜ್‌, ಫೇಸ್‌ ಬುಕ್‌ ಪೇಜ್‌, ವಾಟ್ಸಾಪ್‌ ಗ್ರೂಪ್ಸ್‌ಗಳ ಮೂಲಕ ಅನಿಮೇಷನ್‌ ವಿಡಿಯೋ ತುಣುಕುಗಳು, ಸಂದೇಶಗಳು, ಡಿಜಿಟಲ್‌ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸಿಬ್ಬಂದಿ ನಗರದ ವಿವಿಧ ಪ್ರದೇಶಗಳ ಮನೆ-ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.

ಜನಸಂದಣಿ ಪ್ರದೇಶಗಳನ್ನು ಮುಚ್ಚಿಸಿರುವುದು: ನಗರದಲ್ಲಿ ಕೊರೊನಾ ಕರ್ಫ್ಯೂ ಸಮಯದಲ್ಲಿ ಪಾಲಿಕೆಯು ನಗರದ ಜನಸಂದಣಿ ಸ್ಥಳಗಳಾದ ಸಿನೆಮಾ ಟಾಕಿಸ್‌ಗಳು, ಹೋಟೆಲ್‌ಗ‌ಳು, ಶಾಪಿಂಗ್‌ ಮಳಿಗೆಗಳು, ವಾಣಿಜ್ಯ ಪ್ರದೇಶಗಳು, ಉಪಾಹಾರ ಗೃಹಗಳು ಇತ್ಯಾದಿಗಳನ್ನು ಮುಚ್ಚಿಸಿ ಜನರು ಗುಂಪಾಗಿ ಸೇರುವುದನ್ನು ತಪ್ಪಿಸಲು ಕ್ರಮಜರುಗಿಸಲಾಗಿದೆ. ಜಿಲ್ಲಾಡಳಿತದ ಸಹಯೋಗದೊಂದಿಗೆ ನಗರದ ಎಲ್ಲ 39 ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್‌ ಲಕ್ಷಣಗಳಿರುವವರ ಸಮೀಕ್ಷೆ ನೆಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಾರ್ಡ್‌ವಾರು ತಂಡಗಳನ್ನು ರಚಿಸಿ ಸಮೀಕ್ಷೆ ನೆಡೆಸಲಾಗುತ್ತಿದೆ. ಅವಶ್ಯವಿದ್ದಲ್ಲಿ ಮೆಡಿಕಲ್‌ ಕಿಟ್‌ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸೋಂಕು ನಿವಾರಕ ಸಿಂಪಡಣೆ: ಪಾಲಿಕೆ ಎಲ್ಲ ವಾಡ್‌ ìಗಳಲ್ಲಿನ ಮುಖ್ಯ ರಸ್ತೆ ಮತ್ತು ಬಡಾವಣೆಗಳಲ್ಲಿ ಪಾಲಿಕೆಯ ಜೆಟ್ಟಿಂಗ್‌ ಯಂತ್ರ, ನೀರಿನ ಟ್ಯಾಂಕರ್‌ ಗೆ ಪಂಪ್‌ ಅಳವಡಿಸಿ ಮತ್ತು ಅಗ್ನಿಶಾಮಕ ದಳದ ವಾಹನ, ಎನ್‌ಎಂಡಿಸಿಯ ಮಿಸ್‌  ಕ್ಯನಾನ್‌ ಯಂತ್ರಬಳಸಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ.

ನಗರದ ಇಕ್ಕಟ್ಟಾದ ಪ್ರದೇಶಗಳು/ ವಸತಿ ವಲಯಗಳಲ್ಲಿ, ಚಿಕ್ಕ ರಸ್ತೆಗಳಲ್ಲಿ, ಕೊಳಚೆ ಪ್ರದೇಶಗಳಲ್ಲಿ, ವಾಣಿಜ್ಯ ಪ್ರದೇಶಗಳಲ್ಲಿ, ಬಸ್‌ ನಿಲ್ದಾಣಗಳು, ತರಕಾರಿ ಮಾರ್ಕೆಟ್‌ಗಳು ಇತ್ಯಾದಿ ಕಡೆಗಳಲ್ಲಿ ಪೆಟ್ರೋಲ್‌ ಪಂಪ್‌ ಚಾಲಿತ ಬ್ಯಾಕ್‌ಪ್ಯಾಕ್‌ ಸ್ಪ್ರೆàಯರ್‌ಗಳು ಮತ್ತು ಹ್ಯಾಂಡ್‌ ಪಂಪ್‌ ಸ್ಪ್ರೆಯರ್‌ಗಳನ್ನು ಬಳಸಿ ಸೋಂಕು ನಿವಾರಕವನ್ನು ಸಿಂಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬಳ್ಳಾರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಪ್ರತಿನಿತ್ಯ ಫೂÂಮಿಗೇಷನ್‌ ಮಾಡಲಾಗುತ್ತಿದೆ. ಪೌರಕಾರ್ಮಿಕರಿಗೆ ಅವಶ್ಯವಿರುವ  ಧರಿಸುಗಳಾದ ಮಾಸ್ಕ್, ಕೈಗವಸು, ಶೂಗಳು, ರಿಫ್ಲೆಕ್ಟರ್‌ ಜಾಕೆಟ್‌ಗಳನ್ನು ವಿತರಿಸಲಾಗಿದೆ.

ಎಲ್ಲ ಪೌರಕಾರ್ಮಿಕರಿಗೆ ಪ್ರತಿದಿನ ಥರ್ಮಲ್‌ ಸ್ಕಾÂನಿಂಗ್‌ ಮೂಲಕ ತಾಪಮಾನ ಪರೀಕ್ಷಿಸಿ ಮುಂಜಾಗ್ರತೆ ವಹಿಸಲಾಗುತ್ತಿದೆ. ಕೋವಿಡ್‌-19ರ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಪಾಲಿಕೆ ಎಲ್ಲ ಸಿಬ್ಬಂದಿಗೆ ಹಾಗೂ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ ನಗರಲ್ಲಿರುವ ಎಲ್ಲ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಸ್ವತ್ಛತೆ ಮತ್ತು ಭೌತಿಕ ಅಂತರಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ನಿರ್ದೇಶನದಂತೆ ಮೇ 11ರಿಂದ ನಗರದಲ್ಲಿರುವ 5 ಇಂದಿರಾ ಕ್ಯಾಂಟೀನ್‌ಗಳಿಂದ ಮೂರು ಹೊತ್ತು ಉಚಿತ ಊಟ ಸರಬರಾಜು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್‌ ಮನೆಗಳು/ಸ್ಥಳಗಳಿಂದ ನಿರ್ದೇಶನಾನುಸಾರ ಕಸವನ್ನು ಸಂಗ್ರಹಿಸಿ ನಿಯಮಾನುಸಾರ ವಿಲೇವಾರಿ ಮಾಡಲು, ಬಯೋಮೆಡಿಕಲ್‌ ವೇಸ್ಟ್‌ಪೊಸಸ್ಸಿಂಗ್‌ ಏಜನ್ಸಿಗೆ ಜವಾಬ್ದಾರಿ ವಹಿಸಿ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ಸೂಕ್ತ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿರುವ ಅವರು ಪ್ರತಿ ದಿನ ಕೋವಿಡ್‌-19ರ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿ ಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.