ಸೋಂಕಿತ ಮೃತರಿಗೆ ಗೌರವದ ವಿದಾಯ


Team Udayavani, May 17, 2021, 9:59 PM IST

17-13

„ಆರ್‌. ಬಸವರೆಡ್ಡಿ ಕರೂರು

ಸಿರುಗುಪ್ಪ: ತಾಲೂಕಿನಲ್ಲಿ ಕೊರೊನಾ ಸೋಂಕಿತ ಶವಗಳಿಗೆ ಮತ್ತು ಅನಾಥ ಶವಗಳಿಗೆ ಗೌರವದ ಅಂತ್ಯಕ್ರಿಯೆ ಮಾಡುವ ಕಾರ್ಯವನ್ನು ಪ್ಯಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ಕಾರ್ಯಕರ್ತರು ನಡೆಸುತ್ತಿದ್ದಾರೆ.

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಪ್ರತಿಯೊಬ್ಬ ಕುಟುಂಬದ ಸದಸ್ಯರು ಇಚ್ಛೆಪಡುತ್ತಾರೆ, ಆದರೆ ಕೊರೊನಾ ಸೋಂಕು ಹರಡುತ್ತದೆ ಎನ್ನುವ ಭಯದಿಂದ ಸರ್ಕಾರವು ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ಮಾಡಲು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸದೇ ತಾವೇ ಬೇಕಾಬಿಟ್ಟಿಯಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದರು.

ಕಳೆದ ವರ್ಷ ಕೊರೊನಾದಿಂದ ಮೃತಪಟ್ಟವರನ್ನು ಜೆಸಿಬಿಯಿಂದ ಶವವನ್ನು ತಂದು ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ಅತ್ಯಂತ ನಿರ್ಲಕ್ಷéವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಇದರಿಂದಾಗಿ ಮೃತರ ಕುಟುಂಬದವರು ತಮ್ಮವರ ಅಂತ್ಯಸಂಸ್ಕಾರ ಗೌರವಯುತವಾಗಿ ನಡೆಯುತ್ತಿಲ್ಲ ಎನ್ನುವ ಸಂಕಟ ಅನುಭವಿಸುತ್ತಿದ್ದರು.

ಕಳೆದ ವರ್ಷದಿಂದ ತಾಲೂಕಿನಲ್ಲಿ ಕೊರೊನಾ ಸೋಂಕಿತರಿಗೆ ಮರ್ಯಾದೆಯ ಅಂತ್ಯಸಂಸ್ಕಾರವನ್ನು ಪಿಎಫ್‌ಐ ತಂಡದ ಯುವಕರು ಮಾಡಲು ಮುಂದಾಗಿದ್ದು, ಇಲ್ಲಿಯವರೆಗೆ 124ಕ್ಕೂ ಹೆಚ್ಚು ಅಂತ್ಯಸಂಸ್ಕಾರವನ್ನು ಅವರವರ ಧರ್ಮದ ವಿ ವಿಧಾನಗಳೊಂದಿಗೆ ಗೌರವಯುತವಾಗಿ ಮಾಡಿದ್ದಾರೆ.

ಈ ತಂಡದ ಸದಸ್ಯರು ಮಾಡುತ್ತಿರುವ ಕೆಲಸವನ್ನು ನೋಡಿದರೆ ಭಯವು ಆವರಿಸುತ್ತದೆ. ಮನಸ್ಸು ಭಾರವಾಗುತ್ತದೆ. ಕೊರೊನಾದಿಂದ ಸಾವನ್ನಪ್ಪಿದರೆ ಮನೆಯವರೇ ಹತ್ತಿರ ಬಾರದ ಪರಿಸ್ಥಿತಿಯನ್ನು ಅಪರಿಚಿತ ಶವಕ್ಕೆ ಹೆಗಲು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೊರೊನಾ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್‌ ಧರಿಸಿ ಸೊಂಕಿತರ ಅಂತ್ಯಕ್ರಿಯೆ ಮಾಡುತ್ತಿದ್ದಾರೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊರೊನಾ ಸೊಂಕಿತರ ಅಂತ್ಯಸಂಸ್ಕಾರವನ್ನು ಈ ತಂಡದ ಸದಸ್ಯರು ಆರೋಗ್ಯ ಇಲಾಖೆಯ ಸಮ್ಮುಖದಲ್ಲಿ ವೈಜ್ಞಾನಿಕವಾಗಿ ಮಾಡುವ ಮೂಲಕ ಮಾನವೀಯತೆ ಇನ್ನೂ ಇದೆ ಎನ್ನುವುದನ್ನು ತೋರಿಸಿದ್ದಾರೆ.

ಪಿಎಫ್‌ಐ ಸಂಘಟನೆಯ 12 ಸದಸ್ಯರು ನುರಿತ ವೈದ್ಯರಿಂದ ತರಬೇತಿ ಪಡೆದು ಮೃತಪಟ್ಟ ಕೊರೊನಾಸೋಂಕಿತರ ಅಂತ್ಯಸಂಸ್ಕಾರ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಿ ಮಾಡಬೇಕೆನ್ನುವುದು ಅರಿತು, ಆಯಾ ಧರ್ಮದ ವಿಧಿವಿಧಾನಗಳಂತೆ ಅಂತ್ಯಸಂಸ್ಕಾರ ಮಾಡುತ್ತಿದ್ದೇವೆ.
-ಖಾಜ ಕಿಜರ್‌, ಸಂಘಟನೆ ಸದಸ್ಯ

ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕೊರೊನಾ ಸೋಂಕಿತರನ್ನು ಮುಟ್ಟಿ ಅಂತ್ಯಸಂಸ್ಕಾರ ಮಾಡುವ ಕಾರ್ಯವನ್ನು ಈ ಸಂಘಟನೆಯ ಕಾರ್ಯಕರ್ತರು ಆಯಾ ಧರ್ಮಕ್ಕೆ ಅನುಗುಣವಾಗಿ ಮಾಡುತ್ತಿರುವ ಕಾರ್ಯ ಅತ್ಯಂತ ಶ್ಲಾಘನೀಯ.
-ಡಾ|ದೇವರಾಜ್‌, 100 ಹಾಸಿಗೆಗಳ ಸರ್ಕಾರಿ
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ

 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.