ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ


Team Udayavani, Jul 16, 2021, 10:12 PM IST

16-14

ಬಳ್ಳಾರಿ: ಎಲ್ಲ ನೌಕರರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. 50 ವರ್ಷ ದಾಟಿದ ನೌಕರರಿಗೆ ಕಡ್ಡಾಯ ನಿವೃತ್ತಿಗೊಳಿಸುವ ನೀತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಜಿಲ್ಲಾ ಘಟಕದಿಂದ ಗುರುವಾರ ಪ್ರತಿಭಟನೆ ನಡೆಸಿತು. ಈಚೆಗೆ ಐದು ರಾಜ್ಯಗಳಲ್ಲಿ ಚುನಾವಣೆ ಮುಗಿದ ನಂತರ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಪ್ರತಿ ದಿನ ಏರುತ್ತಿದ್ದು, ನೂರು ರೂಪಾಯಿ ಗಡಿ ದಾಟಿದೆ.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ವ್ಯವಸ್ಥೆಯು ಪೆಟ್ರೋಲಿಯಂ ಕಂಪನಿಗಳ ಹಿಡಿತದಲ್ಲಿದ್ದು, ಇದು ಅತ್ಯವಶ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗಿದ್ದು, ಜನತೆಯನ್ನು ಹಲವು ಸಂಕಷ್ಟಗಳಿಗೆ ಗುರಿ ಮಾಡಿದೆ. ದೇಶದ ಆರ್ಥಿಕತೆಯು ಕುಸಿಯುತ್ತಿದೆ. ಸಾಮಾನ್ಯ ಜನತೆಯ ಕೈಗೆ ಹಣ ನೀಡುವುದರ ಬದಲಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತುಟ್ಟಿಭತ್ಯೆ ಮತ್ತು ಇತರೆ ಸೌಲಭ್ಯ ಸ್ಥಗಿತಗೊಳಿಸಿರುವುದು ನೌಕರರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಆದ್ಯತೆ ಮೇಲೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಬೇಕು. ಜನರಿಗೂ ಉಚಿತವಾಗಿ ಲಸಿಕೆ ಹಾಕಬೇಕು. ರಾಜ್ಯ ಸರ್ಕಾರ ಕಳೆದ 2020 ಜನವರಿ ತಿಂಗಳಿಂದ 2021 ಜೂನ್‌ ತಿಂಗಳವರೆಗೆ 18 ತಿಂಗಳ ತುಟ್ಟಿಭತ್ಯೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ತುಟ್ಟಿಭತ್ಯೆ ಹೆಚ್ಚಳದ ದರವನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಪಿಎಫ್‌ಆರ್‌ಡಿಎ/ಎನ್‌ಪಿಎಸ್‌ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಎಲ್ಲ ನೌಕರರಿಗೂ ನಿಶ್ಚಿತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. 50 ವರ್ಷ ದಾಟಿದ ನೌಕರರಿಗೆ ಕಡ್ಡಾಯ ನಿವೃತ್ತಿಗೊಳಿಸುವ ನೀತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ರಾಜ್ಯದಲ್ಲಿ ಖಾಲಿಯಿರುವ 2.80 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು.

ಸರ್ಕಾರದ ಖಾಲಿ ಹುದ್ದೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ, ತಾತ್ಕಾಲಿಕ, ಅತಿಥಿ, ಅರೆಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವಿವಿಧ ಕೋರ್ಟ್‌ಗಳ ಆದೇಶದಂತೆ ಕಾಯಂ ನೌಕರರಿಗೆ ಸಮಾನವಾದ ವೇತನ ಭತ್ಯೆಗಳನ್ನು ನೀಡಬೇಕು. ಅವರನ್ನು ಸರ್ಕಾರಿ ಸೇವೆಯಲ್ಲಿ ನಿಯಮಾನುಸಾರ ಕಾಯಂಗೊಳಿಸಬೇಕು. ಆಡಳಿತ ಸುಧಾರಣಾ ಆಯೋಗ-2 ಪ್ರಸ್ತಾವನೆಯಲ್ಲಿ ಇಲಾಖೆ/ ಹುದ್ದೆಗಳ ಕಡಿತಗೊಳಿಸುವ ಪ್ರಕ್ರಿಯೆ ಕೈಬಿಡಬೇಕು. 6ನೇ ವೇತನ ಆಯೋಗ ಜಾರಿಗೆ ತರಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಆಲಂಬಾಷಾ, ಪ್ರಧಾನ ಕಾರ್ಯದರ್ಶಿ ಡಿ.ಸುಲ್ತಾನ್‌ಸಾಹೇಬ್‌, ತಾಲೂಕು ಘಟಕದ ಗಡದ್‌ ಬಸವರಾಜ್‌, ಹನುಮಂತಪ್ಪ, ಹನುಮಂತ, ರಾಮಕೃಷ್ಣ, ಉಮಾಶಂಕರ್‌, ವೆಂಕಟೇಶ್‌, ನಾಗರಾಜ್‌ ರ್ಯಾವಣಕಿ, ಶರಣಪ್ಪ, ವಿಜಯಕುಮಾರ್‌, ಸುಭಾನ್‌, ಹೊನ್ನೂರಸ್ವಾಮಿ, ಗುರುಸಿದ್ದಮೂರ್ತಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.