ರೈಲು ಸಂಚಾರ ಪುನಾರಂಭಿಸಿ

Team Udayavani, Jul 22, 2021, 6:37 PM IST

22-15

ಹೊಸಪೇಟೆ: ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ರೈಲ್ವೆ ಸಂಚಾರ ಪುನರ್‌ ಆರಂಭ ಸೇರಿದಂತೆ ಹಲವು ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾಸಮಿತಿ ಪದಾಧಿಕಾರಿಗಳು ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕ ಅರವಿಂದ ಮಳಖೇಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಭೇಟಿ ಮಾಡಿದ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಪದಾಧಿಕಾರಿಗಳು ರೈಲ್ವೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ನಿಲುಗಡೆಯಾಗಿರುವ ಹುಬ್ಬಳ್ಳಿ-ತಿರುಪತಿ, ಕೊಲ್ಲಾಪುರ-ಮಣಗುರು (ಹೈದ್ರಾಬಾದ್‌), ಯಶವಂತಪುರ-ಬಿಜಾಪುರ, ಇತ್ಯಾದಿ ಎಲ್ಲ ಎಕ್ಸ್‌ಪ್ರೆಸ್‌ ಹಾಗೂ ಪ್ಯಾಸೆಂಜರ್‌ ಗಾಡಿಗಳನ್ನು ಪುನರ್‌ ಆರಂಭಿಸಬೇಕು. ಹಿರಿಯ ನಾಗರಿಕರು ಹಾಗೂ ಪ್ರಯಾಣಿಕರ ರಿಯಾಯಿತಿ ಪ್ರಯಾಣ ದರಗಳನ್ನು ಜಾರಿಗೆ ತರಬೇಕು.

ಆನ್‌ ಲೈನ್‌ ಟಿಕೆಟ್‌ ವ್ಯವಸ್ಥೆಯ ಜೊತೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಸಾಮಾನ್ಯ ಕೌಂಟರ್‌ನಲ್ಲಿ ಟಿಕೆಟ್‌ ವಿತರಿಸುವ ವ್ಯವಸ್ಥೆ ಜಾರಿಗೊಳಿಸಬೇಕು. ವಿಜಯನಗರ ಜಿಲ್ಲೆಯ ಪಶ್ಚಿಮ ತಾಲೂಕುಗಳ ಜನರ ಅನುಕೂಲಕ್ಕಾಗಿ ಬಳ್ಳಾರಿ-ಕೊಟ್ಟೂರು-ದಾವಣಗೆರೆ ನಡುವೆ ಪ್ರತಿ ದಿನ ಮುಂಜಾನೆ ಎರಡು ಕಡೆಯಿಂದ ಏಕ ಕಾಲಕ್ಕೆ ರೈಲ್ವೆ ಸೌಲಭ್ಯ ಕಲ್ಪಿಸಬೇಕು. ಸೊಲ್ಲಾಪುರ-ಗದಗ (ಗಾಡಿಸಂಖ್ಯೆ: 71303-71304) ರೈಲನ್ನು ಕೂಡಲೇ ಹೊಸಪೇಟೆಯವರೆಗೆ ವಿಸ್ತರಿಸಬೇಕು ಹಾಗೂ ಹುಬ್ಬಳ್ಳಿ-ಬಳ್ಳಾರಿ ಪ್ಯಾಸೆಂಜರ್‌ ಗಾಡಿಗೆ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಸಬೇಕು ಎನ್ನುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ರಿಯಾಸಮಿತಿ ಅಧ್ಯಕ್ಷರಾದ ವೈ. ಯಮುನೇಶ್‌, ಕಾರ್ಯದರ್ಶಿ ಮಹೇಶ್‌ ಕುಡಿತಿನಿ, ಯು. ಅಶ್ವತಪ್ಪ, ಯು.ಆಂಜನೇಯಲು, ಎಚ್‌.ಎಲ್‌. ಕೊಟ್ರೇಶಪ್ಪ, ಜಿ.ಸೋಮಣ್ಣ, ಎಂ.ಲೋಗನಾಥನ್‌, ಎಚ್‌. ಮಹೇಶ್‌, ಜಿ.ಕೆ. ಆಚಾರ್‌, ಕಲ್ಲೇಶ್‌ ಜೀರ್‌, ವೈ. ಶೇಖರ್‌, ಜಾಲಿ ಅರವಿಂದ, ತಿಪ್ಪೇಸ್ವಾಮಿ, ಮೊಹಮ್ಮದ್‌ ಭಾಷ, ಎಲ್‌.ಕೆ. ತಾರಾನಾಥ, ಮಹಾಂತೇಶ್‌, ಐಲಿ ಸಿದ್ದಣ್ಣ ಹಾಗೂ ಹಿರಿಯ ಮುಖಂಡ ಹೇಮಯ್ಯ ಸ್ವಾಮಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.