ಕಾರ್ಮಿಕರ ಮರು ನೇಮಕಕ್ಕೆ ಆಗ್ರಹ

Team Udayavani, Aug 4, 2021, 6:22 PM IST

4-16

ಸಂಡೂರು: ರಾಷ್ಟ್ರೀಯ ಖನಿಜ ನಿಗಮ ದೋಣಿಮಲೈ ಸಂಡೂರು ಗಣಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಕಾರ್ಮಿಕರನ್ನು ಏಕಾಏಕಿ ತೆಗೆದುಹಾಕಿರುವುದು ಕಾರ್ಮಿಕ ನೀತಿಗೆ ವಿರುದ್ಧವಾದುದು. ತಕ್ಷಣ ಆ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್‌.ಬಿ. ಗಂಗಪ್ಪ ಒತ್ತಾಯಿಸಿದರು.

ಅವರು ತಾಲೂಕಿನ ರಾಷ್ಟ್ರೀಯ ಖನಿಜ ನಿಗಮ ದೋಣಿಮಲೈ (ಎನ್‌ಎಂಡಿಸಿ) ಕಚೇರಿ ಮುಂಭಾಗದಲ್ಲಿ ಗಣಿ ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಎನ್‌ಎಂಡಿಸಿ ಗಣಿಯಲ್ಲಿ ಗುತ್ತಿಗೆದಾರರ ಅಡಿಯಲ್ಲಿ 12 ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿರುವ ಭದ್ರತಾ ವಿಭಾಗದ 74 ಸಿಬ್ಬಂದಿಯನ್ನು ತೆಗೆದು ಹಾಕಿದ್ದ ಪರಿಣಾಮ ಇಡೀ ಕುಟುಂಬ ಬೀದಿಪಾಲಾಗಿದೆ. ಅವರಿಗೆ ಅನ್‌ ಸ್ಕಿಲ್ಡ್‌ ಲೇಬರ್‌ ಎಂಬ ಹಣೆಪಟ್ಟಿ ಕಟ್ಟಿ ಕೆಲಸಕ್ಕೆ ನೇಮಿಸುತ್ತಿರುವುದು ಕಾರ್ಮಿಕ ವಿರೋಧಿ  ನೀತಿಯಾಗಿದೆ. ತಕ್ಷಣ ಆ ಕುಟುಂಬಗಳ ರಕ್ಷಣೆ ಮಾಡಬೇಕು.

ಇವರ ಬದಲಿಗೆ ನಿವೃತ್ತಿ ಹೊಂದಿದ ಮಾಜಿ ಸೈನಿಕರುಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮ ನಿಜವಾಗಿಯೂ ಆಹಾರ ಬೇಕಾದ ಕಾರ್ಮಿಕರಿಗೆ ಆಹಾರವಿಲ್ಲದಂತೆ ಮಾಡಿ, ಹೊಟ್ಟೆ ತುಂಬಿದವರಿಗೆ ತುರುಕುವಂಥ ಕೆಲಸ ಮಾಡುತ್ತಿರುವ ಎನ್‌ಎಂಡಿಸಿ ಗಣಿ ಕಂಪನಿಗೆ ನಮ್ಮ  ಧಿಕ್ಕಾರವಿದೆ ಎಂದರು. ಗಣಿಕಾರ್ಮಿಕ ಸಂಘದ ಗೌರವಾಧ್ಯಕ್ಷ ಎಂ. ಸತೀಶ್‌ ಮಾತನಾಡಿ, ಧೂಳು ಕುಡಿಯುವವರು ಸ್ಥಳೀಯರು. ಆದರೆ ಉದ್ಯೋಗ ಮಾತ್ರ ಬೇರೆ ರಾಜ್ಯದವರಿಗೆ, ಇದು ಯಾವ ನ್ಯಾಯ. ಸ್ಥಳೀಯರಾಗಿ 12 ವರ್ಷಗಳಿಂದ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ ಇವರನ್ನು ಯಾವುದೋ ನಿಯಮ ಹೇಳಿ ತೆಗೆದು ಹಾಕಿದ್ದಾರೆ.

ಇದರಿಂದ ಸ್ಥಳೀಯವಾಗಿ ಇರುವ ಗಣಿ ಕಂಪನಿ ಸ್ಥಳೀಯರಿಗೆ ಬಳಕೆ ಇಲ್ಲದಂಥ ದುಸ್ಥಿತಿ ಉಂಟಾಗಿದೆ. ಆದ್ದರಿಂದ ತಕ್ಷಣ ಸ್ಥಳೀಯರಿಗೆ ಅದ್ಯತೆ ನೀಡುವ ಮೂಲಕ ಮರು ನೇಮಕ ಮಾಡಬೇಕು. ಬೇರೆ ರಾಜ್ಯದ ಮಾಜಿ ಸೈನಿಕರ ಬಗ್ಗೆ ಗೌರವವಿದೆ. ಆದರೆ ಅವರಿಗೆ ಹತ್ತಾರು ಅವಕಾಶಗಳಿವೆ. ಈ 74 ನೌಕರರಿಗೆ ದಾರಿಕಾಣದಾಗಿದೆ.

ಆದ್ದರಿಂದ ಇವರಿಗೆ ಮರು ನೇಮಕ ಮಾಡಿಕೊಳ್ಳುವವರೆಗೂ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಟಿಯುಸಿಐ ಸಂಘಟನೆಯ ರಾಜ್ಯಾಧ್ಯಕ್ಷ ಕಾಂ.ಆರ್‌.ಮಾನಸಯ್ಯ, ಅಮೀರ್‌ ಅಲಿ, ಜಿ. ಅಮರೇಶ್‌, ಡಿ.ಕೆ.ಲಿಂಗಸ್‌ಗೂರು, ಚನ್ನಪ್ಪ ಕೊಟ್ರೆಶ್‌, ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್‌.ಬಿ. ಗಂಗಪ್ಪ, ಪ್ರಧಾನ ಕಾರ್ಯದರ್ಶಿ ಅರ್‌. ವಿಜಯಕುಮಾರ್‌, ಖಜಾಂಚಿ ಪರ್ವತಗೌಡ, ಕಾರ್ಯದರ್ಶಿ ಜಂಬಪ್ಪ, ಎಸ್‌.ಎಂ.ರಾಜ, ಜಿ. ಶಿವಪ್ಪ, ಬಿ. ನಾಗರಾಜ, ಶ್ರೀನಿವಾಸ್‌, ಭರ¾ಪ್ಪ, ಟಿ.ಎಂ. ಕೊಟೇಪ್ಪ, ಬಸವರಾಜ ಇದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.