ಬಳ್ಳಾರಿ: ಜೆಸ್ಕಾಂ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ; ದಾಖಲೆಗಳ ಪರಿಶೀಲನೆ
Team Udayavani, Jul 15, 2021, 12:33 PM IST
ಬಳ್ಳಾರಿ: ನಗರದ ಜೆಸ್ಕಾಂ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ಆಗಿರುವ ಎ.ಎನ್. ವಿಜಯಕುಮಾರ್ ಅವರ ಮನೆಗೆ ಎಸಿಬಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬಳ್ಳಾರಿಯ ಆಹಂಭಾವಿ ಪ್ರದೇಶದಲ್ಲಿರೋ ವಿಜಯಕುಮಾರ್ ಮನೆಯ ಮೇಲೆ ದಾಳಿ ನಡೆದಿದ್ದು, ಇವರು ಬೆಂಗಳೂರು ಮತ್ತು ಬಳ್ಳಾರಿ ಎರಡು ಕಡೆಯೂ ಇಂಜಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಪಾರ ಪ್ರಮಾಣದ ಅಸ್ತಿಗಳಿಕೆ ಅರೋಪದ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮೂರು ಬಾರಿ ವಿಜಯಕುಮಾರ್ ವಿರುದ್ಧ ದೂರು ದಾಖಲಾಗಿತ್ತು.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಮಂಡ್ಯ ಉಪ ಅರಣ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಎಸಿಬಿ ದಾಳಿ