ಜಮೀನಿನಲ್ಲಿ ಕರಡಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
Team Udayavani, Oct 31, 2021, 12:18 PM IST
ಹರಪನಹಳ್ಳಿ: ತಾಲೂಕಿನ ಭೀಮ್ಲಾತಾಂಡ ಗ್ರಾಮದ ಜಮೀನಿನಲ್ಲಿ ಶನಿವಾರ ಸಂಜೆ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸಂಜೆ ಹೊತ್ತಿನಲ್ಲಿ ಕರಡಿ ಗ್ರಾಮದ ಜಮೀನೊಂದರಲ್ಲಿ ರಾಜಾರೋಷವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರೊಬ್ಬರೂ ತಮ್ಮ ಮೊಬೈಲ್ ನಲ್ಲಿ ದೂರದಿಂದಲೇ ಕರಡಿ ಪೋಟೋ ಸೆರೆ ಹಿಡಿದು ಸಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಆರಣ್ಯ ಇಲಾಖೆ ಅಧಿಕಾರಿಗಳ ನಿಲ೯ಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅಪಘಾತ ಸಂಭವಿಸದಂತೆ ಕ್ರಮವಹಿಸಿ
ಕಳೆದ ವಾರ ನೀಲಗುಂದ ಕೆರೆಯ ರಸ್ತೆ ಬಳಿ ಕರಡಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಭೀಮ್ಲಾತಾಂಡ ಹತ್ತಿರ ಕಾಣಿಸಿಕೊಂಡಿರುವುದರಿಂದ ಅದೇ ಕರಡಿ ಇರಬಹುದು ಎಂದು ಅ ಭಾಗದ ರೈತರು ಅಕ್ಕ ಪಕ್ಕದ ಗ್ರಾಮಸ್ಥರು ಭಯಭಿತರಾಗಿದ್ದಾರೆ. ಆದರೆ ಆರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವತಿ೯ಸುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಆರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ತಕ್ಷಣ ಕರಡಿ ಸೆರೆ ಹಿಡಿದು ಸಾವ೯ಜನಿಕರ ರೈತರ ಆತಂಕ ದೂರ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ