ಪಾಲಿಕೆ ಚುನಾವಣೆ ಮುಂದೂಡಿಕೆಗೆ ಒತ್ತಡ?

ನಗರದಲ್ಲಿ ಬಿಜೆಪಿಗೆ ಪ್ರತಿಕೂಲ ಪರಿಣಾಮದ ಆತಂಕಕಾಂಗ್ರೆಸ್‌ ಪಾಳಯ ದಲ್ಲಿ ಗುಮಾನಿ

Team Udayavani, Feb 17, 2020, 12:55 PM IST

17-February-9

ಬಳ್ಳಾರಿ: ನಗರದಲ್ಲಿ ಕೆಲವೊಂದು ವಾರ್ಡ್‌ಗಳ ಮೀಸಲಾತಿ ಸಮಸ್ಯೆಯಿಂದ ಮುಂದೂಡಲಾಗುತ್ತಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಖಂಡರೇ ಒತ್ತಡ ಹೇರಿ ಮುಂದೂಡುತ್ತಿದ್ದಾರಾ? ಇಂಥಹದ್ದೊಂದು ಗುಮಾನಿ ಬಳ್ಳಾರಿ ಮಹಾನಗರ ಪಾಲಿಕೆ ಆವರಣದಲ್ಲಿ ಕೇಳಿಬರುತ್ತಿದೆ.

ಪಾಲಿಕೆ ಸದಸ್ಯರ ಅಧಿ ಕಾರಾವಧಿ  ಮುಗಿದು ಒಂದು ವರ್ಷ ಕಳೆದರೂ ಚುನಾವಣೆ ಘೋಷಣೆಯಾಗಿಲ್ಲ. ಈ ಮೊದಲು ವಾರ್ಡ್‌ಗಳ ಮೀಸಲಾತಿ ಬದಲಾವಣೆಗಾಗಿ ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಆದರೆ, ಎನ್‌ ಆರ್‌ಸಿ, ಸಿಎಎ ಬೆಂಬಲಿಸಿ ನಡೆದ ಸಮಾವೇಶದಲ್ಲಿ ಬಿಜೆಪಿ ಜನಪ್ರತಿನಿಧಿಗಳು, ಮುಖಂಡರು ಒಂದು ವರ್ಗವನ್ನು ಗುರಿಯಾಗಿಸಿಕೊಂಡು ಮಾಡಿದ ಪ್ರಚೋದನಾಕಾರಿ ಭಾಷಣದಿಂದ ನಗರದಲ್ಲಿ ಬಿಜೆಪಿಗೆ ಪ್ರತಿಕೂಲ ಪರಿಣಾಮ ಏರ್ಪಟ್ಟಿದೆ.

ಇಂಥ ಸಂದರ್ಭದಲ್ಲಿ ಪಾಲಿಕೆಗೆ ಚುನಾವಣೆ ನಡೆದರೆ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಯವರ ಲೆಕ್ಕಾಚಾರ. ಹೀಗಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎಂಬ ಗುಮಾನಿ ಕಾಂಗ್ರೆಸ್‌ ಪಾಳಯದಲ್ಲಿ ಮೂಡಿದೆ.

ಪಾಲಿಕೆಯ 9 ವಾರ್ಡ್‌ಗಳು ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಈ ವಾರ್ಡ್‌ಗಳಲ್ಲಿ ಅಲ್ಪಸಂಖ್ಯಾತರೆ ಸೋಲು-ಗೆಲುವುಗಳನ್ನು ನಿರ್ಧರಿಸುವ ನಿರ್ಣಾಯಕ ಮತದಾರರಾಗಿದ್ದಾರೆ. ನಗರ ವಿಧಾನಸಭಾ ಕ್ಷೇತ್ರದಲ್ಲಿನ ಇನ್ನುಳಿದ ವಾರ್ಡ್‌ಗಳ ಪೈಕಿ ಕೆಲ ವಾರ್ಡ್‌ಗಳಲ್ಲೂ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎನ್ನಲಾಗುತ್ತಿದೆ.

ವರ್ಷದ ಬಳಿಕ ನಡೆದ ಮೇಯರ್‌ ಆಯ್ಕೆ: ಬಳ್ಳಾರಿ ಮಹಾನಗರ ಪಾಲಿಕೆಗೆ 2013ರಲ್ಲಿ ನಡೆದ
ಚುನಾವಣೆಯಲ್ಲಿ 26 ಕಾಂಗ್ರೆಸ್‌, 6 ಬಿಎಸ್‌ಆರ್‌, 1 ಜೆಡಿಎಸ್‌, 2 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದರು. ಆಗಲೂ ಸಹ ಮೇಯರ್‌ ಸ್ಥಾನದ ಮೀಸಲಾತಿ ಬದಲಾವಣೆಗಾಗಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನೆಲೆಯಲ್ಲಿ ಆಗಲೂ ಪಾಲಿಕೆಗೆ ಚುನಾವಣೆ ನಡೆದು ವರ್ಷದ ಬಳಿಕ ಮೇಯರ್‌ ಆಯ್ಕೆ ಮಾಡಲು ಅವಕಾಶ ಲಭಿಸಿತ್ತು. ಪಾಲಿಕೆಗೆ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯಬೇಕಿದ್ದ ಚುನಾವಣೆ, ಸದಸ್ಯರ ಅವಧಿ ಮುಗಿದು ಒಂದು ವರ್ಷವಾದರೂ ಚುನಾವಣೆ ಘೋಷಣೆಯಾಗದಿರುವುದು ಸ್ಪರ್ಧಾಕಾಂಕ್ಷಿಗಳು, ಮತದಾರರಲ್ಲಿ ಬೇಸರ ಮೂಡಿಸಿದೆ.

ನಾಲ್ಕು ವಾರ್ಡ್‌ಗಳು ಹೆಚ್ಚಳ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಈ ಮೊದಲು 35 ಇದ್ದ ವಾರ್ಡ್‌ಗಳ ಸಂಖ್ಯೆಯನ್ನು 39ಕ್ಕೆ ಹೆಚ್ಚಿಸಲಾಗಿದೆ. ಕೆಲವೊಂದು ವಾರ್ಡ್ಗಳನ್ನು ವಿಭಜಿಸಿ ಹೆಚ್ಚುವರಿಯಾಗಿ ನಾಲ್ಕು ವಾರ್ಡ್ಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗಿದ್ದು, 39 ವಾರ್ಡ್ ಗಳಿಗೂ ಮೀಸಲಾತಿಯನ್ನು ಸಹ ಪ್ರಕಟಿಸಲಾಗಿದೆ.

ಮೀಸಲಾತಿ ಬದಲಿಗಾಗಿ ಕೋರ್ಟ್‌ ಮೊರೆ: ಈ ಹಿಂದೆ ಇದ್ದ 22ನೇ ವಾರ್ಡ್‌ 23ನೇ ವಾರ್ಡ್‌ ಆಗಿ ಬದಲಾವಣೆಯಾಗಿದ್ದು, ಈ ವಾರ್ಡ್‌ನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿ ಪಾಲಿಕೆ ಅಧಿಕಾರಿಗಳು ಪ್ರಕಟಿಸಿದ್ದರು. ಆದರೆ, ಕೆಲವರು ತಮ್ಮ ಅನುಕೂಲಕ್ಕಾಗಿ ನಿಗದಿತ ಅವಧಿ ಯಲ್ಲಿ ಆಕ್ಷೇಪಣೆ ಸಲ್ಲಿಸಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಈ ವಾರ್ಡ್‌ನ್ನು ಓಬಿಸಿ (ಎ) ಗೆ ಬದಲಾಯಿಸಿಕೊಂಡಿದ್ದಾರೆ. ಈ ವಾರ್ಡ್‌ನಲ್ಲಿ ದಲಿತರು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಮೇಲಾಗಿ ಕಳೆದ ಎರಡ್ಮೂರು ದಶಕಗಳಿಂದ ಪರಿಶಿಷ್ಟ ಜಾತಿಗೆ ಮೀಸಲಾಗದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ನೀಡಬೇಕು ಎಂದು ಸ್ಥಳೀಯರು ನ್ಯಾಯಾಲಯದ ಮೊರೆ ಹೋಗಿದ್ದಾರೆ. 1, 5ನೇ ವಾರ್ಡ್‌ ಮೀಸಲಾತಿಯನ್ನು ಬದಲಾವಣೆ ಮಾಡಬೇಕು ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯದಲ್ಲಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಚುನಾವಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತಿಲ್ಲ.

ಸಮಸ್ಯೆಗಳ ಕೇಳುವವರಿಲ್ಲ: ಪಾಲಿಕೆ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರದ ಜನರ ಸಮಸ್ಯೆಗಳನ್ನು ಕೇಳುವವರೇ ಇಲ್ಲವಾಗಿದೆ. ನಗರದ ಬಹುತೇಕ ಕಡೆ ಒಳಚರಂಡಿ ಸೋರಿಕೆ ಹೆಚ್ಚುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲೀಪುರ, ಮೋಕಾ ಕೆರೆಯಲ್ಲಿ ಸಮರ್ಪಕವಾಗಿ ಕುಡಿವ ನೀರು ಇದ್ದರೂ 10 ದಿನಕ್ಕೊಮ್ಮೆ ಸರಬರಾಜು ಮಾಡುವ ಪದ್ಧತಿ ಬದಲಾವಣೆಯಾಗುತ್ತಿಲ್ಲ ಎಂದು ಜನರು ಪಾಲಿಕೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

„ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.