ಏರುತ್ತಲಿದೆ ಸೋಂಕಿತರ ಸಾವಿನ ಸಂಖ್ಯೆ
ನಿನ್ನೆ ಒಂದೇ ದಿನ ಐವರ ಸಾವು, ಸೋಂಕಿಗೆ ಸತ್ತವರ ಸಂಖ್ಯೆ 28ಕ್ಕೇರಿಕೆ
Team Udayavani, Jul 1, 2020, 5:38 PM IST
ಬಳ್ಳಾರಿ: ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಮೂವರು ಮಹಿಳೆಯರು, ಇಬ್ಬರು ಪುರುಷ ಸೇರಿ ಐವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಸತ್ತವರ ಸಂಖ್ಯೆ 28ಕ್ಕೆ ಏರಿಕೆಯಾಗಿದ್ದು, ಕಳೆದ ಮೂರು ದಿನಗಳಲ್ಲೇ 18 ಜನರು ಸಾವಿಗೀಡಾಗಿದ್ದಾರೆ.
ಜೂ.28ರಂದು ಭಾನುವಾರ ಒಂದೇ ದಿನ ನಾಲ್ವರು ಮೃತಪಟ್ಟಿದ್ದ ಕೋವಿಡ್ ಸೋಂಕಿಗೆ ಜೂ.29ರಂದು ಸೋಮವಾರ 10 ಜನರು ಸೋಂಕಿನಿಂದ ಸಾವನ್ನಪ್ಪಿದ್ದರು. ಇದೀಗ ಜೂ.30ರಂದು ಮಂಗಳವಾರವೂ ಐವರು ಬಲಿಯಾಗಿದ್ದಾರೆ. ಬಳ್ಳಾರಿ ತಾಲೂಕು ಕೋಳೂರು ಗ್ರಾಮದ 31 ವರ್ಷದ ಮಹಿಳೆ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದು, ಜೂ.28ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಜೂ.29ರಂದು ಮೃತಪಟ್ಟಿದ್ದಾರೆ.
ಹೊಸಪೇಟೆ ಎನ್ಸಿ ಕಾಲೋನಿಯ ಬೃಂದಾವನ ಅಪಾರ್ಟ್ಮೆಂಟ್ನಲ್ಲಿನ 63 ವರ್ಷದ ವೃದ್ಧ ರಕ್ತದೊತ್ತಡ, ನ್ಯುಮೋನಿಯಾ ಸಮಸ್ಯೆಯಿಂದ ಜೂ.28ರಂದು ದಾಖಲಾಗಿ ಜೂ. 29ರಂದು ಸೋಮವಾರ ಅಸುನೀಗಿದ್ದಾರೆ. ಬಳ್ಳಾರಿಯ 55 ವರ್ಷದ ಮಹಿಳೆ ರಕ್ತದೊತ್ತಡ, ಹೃದಯ ಸಮಸ್ಯೆಯಿಂದ ಜೂ.27ರಂದು ದಾಖಲಾಗಿ ಜೂ.29ರಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಸಂಡೂರಿನ ಕೆಎಚ್ಬಿ ಕಾಲೋನಿಯ 58 ವರ್ಷದ ಮಹಿಳೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಜೂ.29ರಂದು ಆಸ್ಪತ್ರೆಗೆ ದಾಖಲಾಗಿ ಅಂದೇ ಅಸುನೀಗಿದ್ದಾರೆ. ಮತ್ತೂಬ್ಬ ಪುರುಷ ಮೃತಪಟ್ಟಿದ್ದು, ಪೂರ್ಣ ಮಾಹಿತಿ ತಿಳಿದು ಬಂದಿಲ್ಲ. ಇವರೆಲ್ಲರ ಸಾವಿಗೂ ಮುನ್ನ ಕೋವಿಡ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಎಂದು ಬಂದಿದ್ದು, ಎಸ್ಒಪಿ ನಿಯಮಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್