ಬಳ್ಳಾರಿಯಲ್ಲಿ ಮತ್ತೆ 26 ಸೋಂಕು ಪತ್ತೆ
Team Udayavani, Jun 22, 2020, 12:43 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಹೊಸದಾಗಿ 26 ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 442ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ತಾಲೂಕಿನಲ್ಲಿ 13, ಸಂಡೂರು ತಾಲೂಕು 9, ಹೊಸಪೇಟೆ 2, ಸಿರುಗುಪ್ಪ ತಾಲೂಕಿನಲ್ಲಿ 2 ಸೇರಿ ಒಟ್ಟು 26 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಬಹುತೇಕ ಪ್ರಕರಣಗಳು ಜಿಂದಾಲ್ ಸೋಂಕಿತ ನೌಕರರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರಾಗಿದ್ದಾರೆ. ಇದರಲ್ಲಿ ಪಿ.4996 ಸೋಂಕಿತರಿಂದ 4 ಜನರಿಗೆ ಸೋಂಕು ಹರಡಿದ್ದು, ಮೂವರು ಪಿ.6490 ಸೋಂಕಿತರ ಸಂಪರ್ಕಿತರಾಗಿದ್ದಾರೆ.
ಐದು ಜನರು ಐಎಲ್‌ಐ ಪ್ರಕರಣಗಳಾಗಿದ್ದು, ಒಬ್ಬರು ದುರ್ಬಲ ವರ್ಗದವರಾಗಿದ್ದಾರೆ. ಇನ್ನುಳಿದವರು ವಿವಿಧ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 442 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 112 ಜನರು ಗುಣವಾಗಿ ಮನೆಗೆ ಸೇರಿದ್ದಾರೆ. ಇಬ್ಬರು ಮೃತಪಟ್ಟಿದ್ದು, 328 ಸಕ್ರಿಯ ಪ್ರಕರಣಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ