ನಿಸ್ಸಾರ್‌ ಅಹಮ್ಮ ದ್‌ ನಿಧನಕ್ಕೆ ಕಸಾಪ ಸಂತಾಪ

Team Udayavani, May 4, 2020, 6:15 PM IST

04-May-30

ಬಳ್ಳಾರಿ: ನಿತ್ಯೋತ್ಸವದ ಕವಿ ಕೆ.ಎಸ್‌. ನಿಸ್ಸಾರ್‌ ಅಹ್ಮದ್‌ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ಕಂಬನಿ ಮಿಡಿದಿದ್ದಾರೆ.

ಕನ್ನಡದ ಶ್ರೇಷ್ಠ ಸಾಹಿತಿಯೊಬ್ಬರನ್ನು ಕಳೆದುಕೊಂಡು ಕನ್ನಡ ಸಾಹಿತ್ಯ ಲೋಕ ಬರಡಾಗಿದೆ. ಅವರಿಲ್ಲದಿದ್ದರೂ ಅವರ ನೆನಪು ನಮ್ಮ ಮನದಲ್ಲಿ ನಿತ್ಯೋತ್ಸವವಾಗಿ ಉಳಿಯಲಿದೆ. ಅವರ ಜೋಗದ ಸಿರಿ ಬೆಳಕಿನಲ್ಲಿ ಕವಿತೆಯು ಕನ್ನಡಿಗರ ಅಸ್ಮಿತೆಯ ಸಂಕೇತವಾಗಿದೆ. ಸಂಜೆ ಐದರ ಮಳೆ, ನಿತ್ಯೋತ್ಸವ, ನೆನೆದವರ ಮನದಲ್ಲಿ, ನಾನೆಂಬ ಪರಕೀಯ, ಅನಾಮಿಕ, ಆಕಾಶಕ್ಕೆ ಸರಿಹದ್ದುಗಳಿಲ್ಲ ಮುಂತಾದ 21 ಕವನ ಸಂಕಲನಗಳು ಮಹತ್ವ ಪೂರ್ಣವಾದ ಕವಿತೆಗಳಾಗಿವೆ. ಭೂಗರ್ಭಶಾಸ್ತ್ರದ ಅಧ್ಯಾಪಕ ರಾಗಿದ್ದರೂ ಸಮಾಜದ ಆರೋಗ್ಯ ಕಾಪಾಡುವ ಅನೇಕ ಪದ್ಯ, ಗದ್ಯ, ಅನುವಾದ, ಸಂಪಾದನಾ ಕೃತಿಗಳನ್ನು ಹೊರತಂದಿದ್ದಾರೆ. ಸುಗಮ ಸಂಗೀತ ಕ್ಷೇತ್ರದಲ್ಲಿ ಅವರ ಕವಿತೆಗಳು ಅಪಾರ ಹೆಸರು ಮಾಡಿವೆ. ಮಾಸ್ತಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ಅನಕೃ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿವೆ. 2006ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದನ್ನು ಸ್ಮರಿಸಬಹುದು. ನಿತ್ಯೋತ್ಸವದ ಹೊಸ ಪರಿಭಾಷೆ ಕವಿತೆಗಳನ್ನು ಕಟ್ಟಿದ ಕನ್ನಡದ  ಧೀಮಂತ ಕವಿಯ ಅಗಲಿಕೆಗೆ ಕಸಾಪ ಬಳ್ಳಾರಿ ಜಿಲ್ಲಾ ಘಟಕವು ಶ್ರದ್ಧಾಂಜಲಿ ಸಲ್ಲಿಸುವುದರ ಜತೆಗೆ ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇವೆ ಎಂದವರು ಕಂಬನಿ ಮಿಡಿದಿದ್ದಾರೆ.

ಸಿರುಗುಪ್ಪ: ಪ್ರೊ | ಕೆ.ಎಸ್‌.ನಿಸಾರ್‌ ಅಹಮ್ಮದ್‌ ಇನ್ನಿಲ್ಲದರಿವುದು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಎಸ್‌.ಎಂ.ನಾಗರಾಜಸ್ವಾಮಿ ತಿಳಿಸಿದ್ದಾರೆ. ಕನ್ನಡದ ನಿತ್ಯೋತ್ಸವ ಕವಿಯಾಗಿ ಜನಪ್ರಿಯರಾಗಿದ್ದ ಇವರು ಅನೇಕ ರೀತಿಯ ಸಾಹಿತ್ಯ ರಚಿಸಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರ ಸಾಹಿತ್ಯ ಸೇವೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿಗಳು ದೊರೆತಿವೆ ಎಂದು ಸ್ಮರಿಸಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.