ಈರುಳ್ಳಿಗಿಲ್ಲ ಮಾರುಕಟ್ಟೆ ವ್ಯವಸ್ಥೆ

ರಾಜಧಾನಿಯಲ್ಲಿ ಬೆಲೆಯಿದ್ದರೂ ರೈತರಿಗೆ ವಾಪಸ್‌ ಬರಲಿಕ್ಕಿಲ್ಲ ಸಾರಿಗೆ ವ್ಯವಸ್ಥೆ

Team Udayavani, Apr 17, 2020, 12:27 PM IST

17-April-08

ಬಳ್ಳಾರಿ: ಕೋವಿಡ್ ವೈರಸ್‌ನ ಲಾಕ್‌ಡೌನ್‌ ಬಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಯಲಾಗಿರುವ ಈರುಳ್ಳಿಗೂ ತಟ್ಟಿದೆ. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ, ಖರೀದಿಸಲು ವರ್ತಕರು ಬಾರದೇ ನೂರಾರು ಕ್ವಿಂಟಾಲ್‌ ಈರುಳ್ಳಿ ಹೊಲಗಳಲ್ಲೇ ರಾಶಿ ಬಿದ್ದಿದೆ. ಒಂದುವೇಳೆ ರೈತರೇ ಬೆಂಗಳೂರಿನ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಿದರೂ, ಅಲ್ಲಿಂದ ವಾಪಸ್‌ ಬರಲು ಸಾರಿಗೆ ಸೌಲಭ್ಯವಿಲ್ಲದೇ ಮನೆಯಲ್ಲೇ ಕೂರುವಂತಾಗಿದೆ.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹಡಗಲಿ, ಕೊಟ್ಟೂರು, ಹೊಸಪೇಟೆ, ಕೂಡ್ಲಿಗಿ ಸೇರಿ ವಿವಿಧ ತಾಲೂಕುಗಳಲ್ಲಿ ಈ ಬಾರಿ ಹೆಚ್ಚಿನ ರೈತರು ಈರುಳ್ಳಿ ಬೆಳೆದಿದ್ದಾರೆ. ಉತ್ತಮ ಇಳುವರಿ ಕೂಡ ಬಂದಿದೆ. ಒಬ್ಬೊಬ್ಬ ರೈತರು ಸುಮಾರು 100 ರಿಂದ 150 ಕ್ವಿಂಟಾಲ್‌ ಈರುಳ್ಳಿ ಬೆಳೆದಿದ್ದಾರೆ. ಎಲ್ಲವೂ ಮಾರುಕಟ್ಟೆಗೆ ಕೊಂಡೊಯ್ಯಲು ಸಿದ್ಧವಾಗಿದೆ. ಆದರೆ, ಕೋವಿಡ್ ಲಾಕ್‌ಡೌನ್‌ ಪರಿಣಾಮದಿಂದ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲವಾಗಿದೆ.

ಈಚೆಗೆ ಬಳ್ಳಾರಿಗೆ ಬಂದಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್‌, ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಣಿಕೆಗೆ ಯಾವುದೇ ನಿಯಮಗಳು ಅಡ್ಡಿಯಾಗಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ವರ್ತಕರು ಈರುಳ್ಳಿ ಖರೀದಿಸಲು ಬರದೇ ಇರುವುದು ರೈತರನ್ನು ಸಂಕಷ್ಟಕ್ಕೀಡು ಮಾಡಿದೆ.

ಬೆಲೆಯಿದ್ದರೂ ಸಾಗಿಸುವಂತಿಲ್ಲ: ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೊಟ್ಟೂರು ತಾಲೂಕುಗಳಲ್ಲಿ ಬೆಳೆದ ಈರುಳ್ಳಿಗೆ ಬೆಂಗಳೂರಿನ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುತ್ತದೆ. ಹಲವು ವರ್ಷಗಳಿಂದ ಈ ಭಾಗದ ರೈತರು ಬೆಂಗಳೂರಿನಲ್ಲೇ ಮಾರಾಟ ಮಾಡುತ್ತಿದ್ದಾರೆ. ಸದ್ಯ ಕ್ವಿಂಟಲ್‌ ಈರುಳ್ಳಿಗೆ 2500 ರೂ. ಇದೆ. ರೈತರೇ ಬಾಡಿಗೆ ವಾಹನ ಮಾಡಿಕೊಂಡು ಈರುಳ್ಳಿಯನ್ನು ಬೆಂಗಳೂರು ಮಾರುಕಟ್ಟೆಗೆ ಕೊಂಡೊಯ್ದರೆ ಉತ್ತಮ ಬೆಲೆ ದೊರೆಯಲಿದೆ. ಆದರೆ, ಈರುಳ್ಳಿಯನ್ನು ಕೊಂಡೊಯ್ದವರಿಗೆ ವಾಪಸ್‌ ಬರಲು ವಾಹನ ಸೌಲಭ್ಯವಿಲ್ಲ. ಈಚೆಗೆ ಈರುಳ್ಳಿಯನ್ನು ಬೆಂಗಳೂರಿಗೆ ಕೊಂಡೊಯ್ದ ರೈತರೊಬ್ಬರು ಕಾಲ್ನಡಿಗೆ ಮೂಲಕ ಊರು ಸೇರಿದ್ದಾರೆ.

ಹಾಗಾಗಿ ನಾವು ಈರುಳ್ಳಿಯನ್ನು ಬೆಂಗಳೂರಿಗೆ ಕೊಂಡೊಯ್ಯಲು ಸ್ವಲ್ಪ ಹಿಂದೇಟು ಹಾಕುತ್ತಿದ್ದೇವೆ ಎಂದು ಈರುಳ್ಳಿ ಬೆಳೆಗಾರ ಕೊಟ್ಟೂರಿನ ರಾಮನಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಚಿಲ್ಲರೆ ಮಾರಾಟದಿಂದ ನಷ್ಟ: ಕ್ವಿಂಟಲ್‌ಗ‌ಟ್ಟಲೆ ದಾಸ್ತಾನಿರುವ ಈರುಳ್ಳಿಯನ್ನು ಸ್ಥಳೀಯ ವರ್ತಕರು ಕೆಜಿಗೆ 6, 8, 10 ರೂ.ಗಳಿಗೆ ಕೇಳುತ್ತಿದ್ದಾರೆ. ಇದರಿಂದ ರೈತರಿಗೆ ತುಂಬಾ ನಷ್ಟವಾಗಲಿದೆ. ಈರುಳ್ಳಿ ಬೆಳೆಯಲು ಎಕರೆಗೆ ಸುಮಾರು 80 ಸಾವಿರ ರೂ. ವೆಚ್ಚವಾಗಿದೆ.

ಈರುಳ್ಳಿ ತುಂಬಲು ತಂದಿದ್ದ ಗೋಣಿಚೀಲ ಒಂದಕ್ಕೆ 20 ರಿಂದ 25 ರೂ. ಇದೆ. ಅಂತಹದ್ದರಲ್ಲಿ ವರ್ತಕರು ಕೆಜಿ ಈರುಳ್ಳಿಯನ್ನು 6, 10 ರೂ. ಗಳಂತೆ ಖರೀದಿಸಿದರೆ ರೈತರು ಭಾರಿ ನಷ್ಟ ಅನುಭವಿಸಬೇಕಾಗುತ್ತದೆ. ಕ್ವಿಂಟಲ್‌ಗ‌ಟ್ಟಲೆ ಖರೀದಿಸಿದರೆ ಒಂದಷ್ಟು ಉಳಿಯಲಿದೆ. ಏ.20ರ ನಂತರ ಪರಿಸ್ಥಿತಿ ನೋಡಿಕೊಂಡು ನಾವೇ ಏನಾದರೂ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಕೋವಿಡ್ ವೈರಸ್‌, ಲಾಕ್‌ಡೌನ್‌ ಪರಿಣಾಮ ಈರುಳ್ಳಿ ಖರೀದಿಸಲು ವರ್ತಕರಾರೂ ಮುಂದೆ ಬರುತ್ತಿಲ್ಲ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಒಳ್ಳೆಯ ಬೆಲೆಯಿದ್ದು, ಇಲ್ಲಿಂದ ಕೊಂಡೊಯ್ದು ಮಾರಿದರೂ ಅಲ್ಲಿಂದ ವಾಪಸ್‌ ಬರಲು ವಾಹನ ವ್ಯವಸ್ಥೆಯಿಲ್ಲ. ಈ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರಿಗೂ ದೂರವಾಣಿ ಕರೆ ಮೂಲಕ ಗಮನ ಸೆಳೆದಿದ್ದೇವೆ. ರೈತರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಹೇಳಲಾಗಿದೆ.
ರಾಮನಗೌಡ,
ಈರುಳ್ಳಿ ಬೆಳೆಗಾರ, ಕೊಟ್ಟೂರು.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.