ಬಂಜಾರಾ ಸಮುದಾಯ ಮುಖ್ಯವಾಹಿನಿಗೆ ಬರಲಿ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ನಾಗರಾಜ ನಮ್ಮ ಸಂಸ್ಕೃತಿ ವಿಶ್ವಕ್ಕೆ ಮಾದರಿ: ಶಾಂತನಾಯ್ಕ

Team Udayavani, Feb 16, 2020, 2:35 PM IST

16-February-30

ಬಳ್ಳಾರಿ: ಬಂಜಾರಾ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ ಮುಖ್ಯವಾಹಿನಿಗೆ ಬರಬೇಕು. ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಕಡೆಗಣಿಸದೇ ಅವರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ತಹಶೀಲ್ದಾರ್‌ ಯು.ನಾಗರಾಜ ಹೇಳಿದರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಶನಿವಾರ ನಡೆದ ಸಂತ ಶ್ರೀ ಸೇವಾಲಾಲ್‌ ಜಯಂತಿ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂತ ಶ್ರೀ ಸೇವಾಲಾಲ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣವನ್ನು ತಮ್ಮ ಸಮುದಾಯದವರಿಗೆ ನೀಡಿದಾಗ ಅವರು ಸಾಧನೆ ಮಾಡಿ ತಮಗೆ ಹಾಗೂ ತಮ್ಮ ಗ್ರಾಮಕ್ಕೆ ಹೆಸರು ತರುತ್ತಾರೆ ಮತ್ತು ಸಮುದಾಯಕ್ಕೂ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು. ಸಂತ ಶ್ರೀ ಸೇವಾಲಾಲ್‌ ಕುರಿತು ವಿಶೇಷ ಉಪನ್ಯಾಸ ನೀಡಿದ ಖ್ಯಾತ ಲೇಖಕ ಪ್ರೊ| ಎನ್‌. ಶಾಂತನಾಯ್ಕ, ನಮ್ಮ ಸಂಸ್ಕೃತಿಯು ವಿಶ್ವಕ್ಕೆ ಮಾದರಿಯಾಗಿದೆ. ವಿದೇಶದಿಂದ ಬರುವವರು ನಮ್ಮ ಉಡುಗೆ-ತೊಡುಗೆಗಳಿಗೆ ಆಕರ್ಷಿತರಾಗುತ್ತಿದ್ದು, ಇಂಥ ಸಂಸ್ಕೃತಿಯು ಈಗಾಗಲೆ ಕ್ರಮೇಣವಾಗಿ ಕ್ಷೀಣಿಸುತ್ತಿದೆ. ಅದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ನೀಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಅಲ್ಲದೇ, ನಮ್ಮ ಸಮುದಾಯದ ಜನರು ದುಡಿಮೆಗೋಸ್ಕರ ಗುಳೆ ಹೋಗುವುದು ಕಡಿಮೆ ಮಾಡಿ ತಮ್ಮ ಗ್ರಾಮಗಳಲ್ಲಿ ಕುಲಕಸಬುಗಳನ್ನು ಮಾಡಿಕೊಳ್ಳಬೇಕು ಎಂದರು.

ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ಉಪನ್ಯಾಸಕ ಡಾ| ಸೋಮಶೇಖರ್‌ ನಾಯ್ಕ, ಸಂತ ಶ್ರೀ ಸೇವಾಲಾಲ್‌ ಕುರಿತು ಮಾತನಾಡಿದರು. ಅಖೀಲ ಕರ್ನಾಟಕ ಬಂಜಾರ ಸೇವಾ ಸಂಘದ ವತಿಯಿಂದ ಭಜನೆ ಮತ್ತು ಲಂಬಾಣಿ ನೃತ್ಯವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣವರ, ಬಂಜಾರ ಸಮುದಾಯದ ಸ್ವಾಮಿಗಳಾದ ಶ್ರೀ ಚಂದು ಮಹಾರಾಜ್‌, ಸಮಾಜದ ಹಿರಿಯ ಮುಖಂಡ ಆರ್‌.ಚಂದ್ರ ನಾಯ್ಕ, ಅಖೀಲ ಕರ್ನಾಟಕ ಬಂಜಾರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಎಸ್‌. ಚಂದ್ರನಾಯ್ಕ, ಸೇವಾಲಾಲ್‌ ಬಂಜಾರ ಸಂಘದ ಅಧ್ಯಕ್ಷ ರಾಮುನಾಯ್ಕ, ಕೀಚಾ ನಾಯ್ಕ, ಟೋಪು ನಾಯ್ಕ, ಸ್ವಾಮಿ ನಾಯ್ಕ, ಪೀಕು ನಾಯ್ಕ, ರೆಡ್ಡಿ ನಾಯ್ಕ, ಬಂಜಾರ ಸಮುದಾಯದ ಜನರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಗಮನ ಸೆಳೆದ ಮೆರವಣಿಗೆ: ಸಂತ ಶ್ರೀ ಸೇವಾಲಾಲ್‌ ಅವರ 281ನೇ ಜಯಂತಿ ನಿಮಿತ್ತ ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಭಾವಚಿತ್ರ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಅಪರ ಜಿಲ್ಲಾ ಧಿಕಾರಿ ಮಂಜುನಾಥ್‌ ಚಾಲನೆ
ನೀಡಿದರು.

ಮೆರವಣಿಗೆಯು ಮುನ್ಸಿಪಲ್‌ ಕಾಲೇಜು ಮೈದಾನದಿಂದ ಆರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಬೆಂಗಳೂರು ರಸ್ತೆ, ಎಚ್‌.ಆರ್‌. ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಿತು. ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಕಲಾತಂಡಗಳು ಹಾಗೂ ಬಂಜಾರ ಕಲಾತಂಡಗಳ ಪ್ರದರ್ಶನ ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಬಂಜಾರ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಶ್ರೀರಾಮುಲುಗೆ ಉಸುವಾರಿ-ಸಿಂಗ್‌ಗೆ ಕೊಪ್ಪಳ ಜವಾಬ್ದಾರಿ

್ಗಹಹಗಹಗದಗ

ಶಿವಕುಮಾರ ಶ್ರೀಗಳ ಬದುಕೇ ಶಿವಮಯ

ಚ್ಗೆಹಮನಬವಚಸಗಹದಗಹಗ್ದಸ

ಸೆಕ್ಯೂರಿಟಿ ಗಾರ್ಡ್‌ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ

ಎರಯುಇಯುಯರದಸಅ

ನೀಲಿ ನಾಲಿಗೆ ರೋಗಕ್ಕೆ 30 ಕುರಿಗಳ ಸಾವು

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.