ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಗೆ ಸಿದ್ಧತೆ

25,268 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಹೊರಗಿನಿಂದ ಬಂದವರು 652 ಹೊರ ಜಿಲ್ಲೆಗಳಿಗೆ ಹೋದವರು 550

Team Udayavani, Jun 17, 2020, 12:44 PM IST

17-June-07

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ಕೋವಿಡ್ ಸೋಂಕು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಆಂಗ್ಲಭಾಷೆ ಪರೀಕ್ಷೆಯು ಜೂ.18ರಂದು ನಡೆಯಲಿದ್ದು, ಹೆಚ್ಚುವರಿ ಕೊಠಡಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವುದರ ಜತೆಗೆ ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಸೋಂಕು ಆವರಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿದೆ.

ಪ್ರಸಕ್ತ 2019-2020ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಮಾರ್ಚ್‌ 4ರಿಂದ ಆರಂಭವಾಗಿದ್ದು ಮಾ. 23ಕ್ಕೆ ಮುಗಿಯಬೇಕಿತ್ತು. ಎಲ್ಲ ವಿಷಯಗಳ ಪರೀಕ್ಷೆಗಳು ನಡೆದು ಕೊನೆಯದಾಗಿ ಮಾ. 23ರಂದು ನಡೆಯಬೇಕಿದ್ದ ಇಂಗ್ಲಿಷ್‌ ಭಾಷಾ ಪರೀಕ್ಷೆಗೆ ಕೇಂದ್ರ ಸರ್ಕಾರ ಲಾಕ್‌ ಡೌನ್‌ ವಿಧಿಸಿದ ಪರಿಣಾಮ ಮುಂದೂಡಲಾಗಿತ್ತು. ಇದೀಗ ರಾಜ್ಯದಲ್ಲಿ ದಿನೇದಿನೆ ಕೋವಿಡ್‌ ಸೋಂಕು ಆವರಿಸುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ರಾಜ್ಯ ಸರ್ಕಾರ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಯನ್ನು ಜೂ.18 ರಂದು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ಆವರಿಸದಂತೆ ಹೆಚ್ಚುವರಿ ಕೊಠಡಿ, ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ ಬಳಸುವ ಮೂಲಕ ಪರೀಕ್ಷೆಯನ್ನು ಅತ್ಯಂತ ಸುರಕ್ಷತಾ ಕ್ರಮಗಳ ಮೂಲಕ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ.

32 ಕೇಂದ್ರಗಳಲ್ಲಿ ಪರೀಕ್ಷೆ: ಬಳ್ಳಾರಿ ತಾಲೂಕು 11, ಹೊಸಪೇಟೆ 6, ಹರಪನಹಳ್ಳಿ 5, ಸಿರುಗುಪ್ಪ 2, ಸಂಡೂರು 1, ಕೂಡ್ಲಿಗಿ-ಕೊಟ್ಟೂರು-3, ಹಗರಿಬೊಮ್ಮನಹಳ್ಳಿ 2, ಹಡಗಲಿಯಲ್ಲಿ 2 ಸೇರಿ ಒಟ್ಟು 32 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿ ಸೇರಿ ಜಿಲ್ಲೆಯಾದ್ಯಂತ ಒಟ್ಟು 131 ಹೆಚ್ಚುವರಿ ಕೊಠಡಿ ಮತ್ತು 931 ಹೆಚ್ಚುವರಿ ಬ್ಲಾಕ್‌ಗಳನ್ನು ಸಿದ್ಧಪಡಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 25,268 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜತೆಗೆ ಜಿಲ್ಲೆಯಲ್ಲಿ ಹೆಸರು ನೋಂದಾಯಿಸಿ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಹೋಗಿದ್ದ 550 ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದು, ಬೇರೆ ಬೇರೆ ಊರುಗಳಲ್ಲಿ ಹೆಸರು ನೋಂದಾಯಿಸಿ ಬಳ್ಳಾರಿಗೆ ಬಂದಿರುವ 652 ವಿದ್ಯಾರ್ಥಿಗಳು ಬಳ್ಳಾರಿಯಲ್ಲಿ ಪರೀಕ್ಷೆ ಎದುರಿಸಲಿದ್ದಾರೆ. ಬೇರೆ ರಾಜ್ಯಗಳಿಂದ ಬರುವ 92 ವಿದ್ಯಾರ್ಥಿಗಳಿಗೆ ಇ-ಪಾಸ್‌ ಮಾಡಿಸಿಕೊಡಲಾಗಿದೆ. ಜತೆಗೆ ಪ್ರತಿ ಗ್ರಾಮ, ಪಟ್ಟಣಗಳಿಂದ ಪರೀಕ್ಷೆ ಸಮಯದ ಒಂದೂವರೆಗಂಟೆ ಮುಂಚೆ ಸಾರಿಗೆ ಬಸ್‌ ಬಿಡುವಂತೆಯೂ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿ ಕಾರಿಗಳನ್ನು ಕೋರಿದ್ದೇವೆ ಎಂದು ಡಿಡಿಪಿಯು ನಾಗರಾಜಪ್ಪ ಸ್ಪಷ್ಟಪಡಿಸಿದರು.

ಬ್ಲಾಕ್‌ಗೆ 12 ವಿದ್ಯಾರ್ಥಿಗಳು: ಈ ಮೊದಲು ಪರೀಕ್ಷೆಯಲ್ಲಿ ಕೊಠಡಿಗಳು ದೊಡ್ಡದಿದ್ದರೆ 2 ಬ್ಲಾಕ್‌ಗಳನ್ನಾಗಿ ಮಾಡಿ ಪ್ರತಿ ಬ್ಲಾಕ್‌ಗೆ 24ರಿಂದ 30 ವಿದ್ಯಾರ್ಥಿಗಳನ್ನು ಕೂಡಿಸಲಾಗುತ್ತಿತ್ತು. ಆದರೆ ಕೋವಿಡ್ ಸೋಂಕು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದರಿಂದ ಒಂದು ಬ್ಲಾಕ್‌ಗೆ 12ರಿಂದ 20 ವಿದ್ಯಾರ್ಥಿಗಳನ್ನು ಕೂಡಿಸಲಾಗುತ್ತದೆ. ಪರೀಕ್ಷೆ ಬರೆಯುವ ಬೆಂಚ್‌ ಮತ್ತು ವಿದ್ಯಾರ್ಥಿಗಳ ನಡುವೆ ಮೂರು ಅಡಿಗಳ ಅಂತರ ಕಾಪಾಡಲಾಗುತ್ತದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವ ಸಲುವಾಗಿ ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಕೋರಲಾಗಿದೆ.

ಮಾಸ್ಕ್ ಕಡ್ಡಾಯ
ಇಂಗ್ಲಿಷ್‌ ಭಾಷೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯವಾಗಿದೆ. ಆಯಾ ಸ್ಥಳೀಯ ಪುರಸಭೆ, ನಗರಸಭೆ ಸ್ಥಳೀಯ ಸಂಸ್ಥೆಗಳಿಗೆ ಮಾಸ್ಕ್ಗಳನ್ನು ವಿತರಿಸುವಂತೆ ಕೋರಲಾಗಿದೆ. ಜತೆಗೆ ಸ್ಯಾನಿಟೈಸರ್‌ನ್ನು ಕಡ್ಡಾಯವಾಗಿ ಬಳಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳ ಆರೋಗ್ಯವನ್ನು ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ತಪಾಸಣೆ ಮಾಡಲಾಗುತ್ತದೆ. ಈ ವೇಳೆ ಜ್ವರ, ಶೀತ, ಕೆಮ್ಮು, ನೆಗಡಿಗಳಂಥ ಕಾಯಿಲೆಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಪ್ರತಿ ಕೇಂದ್ರದಲ್ಲಿ ಒಬ್ಬ ಸ್ಟಾಫ್‌ ನರ್ಸ್‌, ಒಬ್ಬ ಲ್ಯಾಬ್‌ ಟೆಕ್ನೀಶಿಯನ್‌, ಒಬ್ಬ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುತ್ತಿದ್ದು, ಪರೀಕ್ಷೆ ಮುಗಿಯುವವರೆಗೂ ಅಲ್ಲಿಯೇ ಇರಲಿದ್ದಾರೆ. ಪ್ರತಿ ಕೇಂದ್ರದಲ್ಲಿ ಇಬ್ಬರು ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಿಬ್ಬಂದಿಗಳು ಸಹ ಇರಲಿದ್ದು, ವಿದ್ಯಾರ್ಥಿಗಳು ಅಂತರದಲ್ಲಿ ಸಾಲಾಗಿ ಹೋಗುವುದನ್ನು ನೋಡಿಕೊಳ್ಳಲಿದ್ದಾರೆ. ಕುಡಿವ ನೀರನ್ನು ವಿದ್ಯಾರ್ಥಿಗಳೇ ತಂದುಕೊಳ್ಳಬೇಕು ಎಂದು ಡಿಡಿಪಿಯು  ತಿಳಿಸಿದ್ದಾರೆ.

ಮಾರ್ಚ್‌ 23ರಂದು ನಡೆಯಬೇಕಿದ್ದ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಸೇರಿ ಅಗತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 32 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 131 ಹೆಚ್ಚುವರಿ ಕೊಠಡಿ, 931 ಹೆಚ್ಚುವರಿ ಬ್ಲಾಕ್‌ಗಳನ್ನು ಸಿದ್ಧಪಡಿಸಲಾಗಿದೆ. ಹೊರ ಜಿಲ್ಲೆಗಳಿಂದ ಬಂದ 652, ಹೊರ ಜಿಲ್ಲೆಗಳಿಗೆ ಹೋಗಿರುವ 550 ವಿದ್ಯಾರ್ಥಿಗಳು ಸೇರಿ ಒಟ್ಟು 25,268 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರತಿ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಿದ್ದು, ಜ್ವರ, ಶೀತ, ಕೆಮ್ಮುಗಳಂತಹ ಕಾಯಿಲೆ ಕಾಣಿಸಿಕೊಂಡರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುವುದು.
ನಾಗರಾಜಪ್ಪ,
ಉಪನಿರ್ದೇಶಕರು, ಪದವಿಪೂರ್ವ

ಶಿಕ್ಷಣ ಇಲಾಖೆ, ಬಳ್ಳಾರಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.