ವೈರಸ್‌ ವೇಷಧಾರಿಗಳಿಂದ ಜಾಗೃತಿ

ರಂಗಭೂಮಿ ಕಲಾವಿದ ಪುರುಷೋತ್ತಮ ನಿರ್ದೇಶನ ಪೊಲೀಸರಿಂದ ಹೊಸ ಯತ್ನ

Team Udayavani, Apr 13, 2020, 4:45 PM IST

13-April-28

ಬಳ್ಳಾರಿ: ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಕೋವಿಡ್ ವೈರಸ್‌ ವೇಷಧಾರಿಗಳು ಜನರಲ್ಲಿ ಭಯ ಮೂಡಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಬಳ್ಳಾರಿ: ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಕಿರುಚಿತ್ರ ನಿರ್ಮಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಜಿಲ್ಲಾ ಪೊಲೀಸ್‌ ಇಲಾಖೆ ಇದೀಗ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದೆ.

ಹಗಲುವೇಷದ ಮಾದರಿಯಲ್ಲಿ ಕೋವಿಡ್ ವೇಷ ಧರಿಸಿದವರು ಜನರಲ್ಲಿ ಭಯ ಬೀಳಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಕೋವಿಡ್ ವೈರಸ್‌ ನಿಯಂತ್ರಣಕ್ಕೆ ಜನರು ಅನಾವಶ್ಯಕವಾಗಿ ಹೊರಗಡೆ ತಿರುಗಾಡದೆ ಮನೆಗಳಲ್ಲೇ ಇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪ್ರಮುಖ ಅಸ್ತ್ರವಾಗಿದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ವಿಧಿಸಿ, ಯಾರೂ ಮನೆಯಿಂದ ಹೊರಬರದಂತೆ ಮನೆಯಲ್ಲೇ ಇರುವಂತೆ ಮನವಿ ಮಾಡಿದೆ. ಶೇ.80 ರಷ್ಟು ಜನರು ಮನೆಯಲ್ಲೇ ಇದ್ದರೂ, ಶೇ.20 ರಷ್ಟು ಜನರು ಅನ್ಯಕಾರ್ಯ ನಿಮಿತ್ತ ಹೊರಗೆ ತಿರುಗಾಡುತ್ತಲೇ ಇದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದ ಜಿಲ್ಲಾ ಪೊಲೀಸ್‌ ಇಲಾಖೆ ಈಗಾಗಲೇ ರಂಗಭೂಮಿ ಕಲಾವಿದ ಪತ್ರಿಕಾ ಛಾಯಾಗ್ರಾಹಕ ಪುರುಷೋತ್ತಮ ಹಂದ್ಯಾಳ್‌ ನಿರ್ದೇಶನದಲ್ಲಿ ಕಿರುಚಿತ್ರವೊಂದನ್ನು ನಿರ್ಮಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ವೈರಲ್‌ ಆಗಿತ್ತು.

ಕಿರುಚಿತ್ರದಲ್ಲಿ ಕೋವಿಡ್ ವೈರಸ್‌ ಬಗ್ಗೆ ಸಾರ್ವಜನಿಕರು ಹೇಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು. ಮನೆಗೆ ಬಂದಾಗ ಸೋಪ್‌ನಿಂದ ಕೈ ತೊಳೆದುಕೊಳ್ಳಬೇಕು. ಸ್ಯಾನಿಟೈಸರ್‌ ಬಳಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ತಿಳಿಸಲಾಗಿತ್ತು. ವೈರಸ್‌ ಬಗ್ಗೆ ಇಷ್ಟೆಲ್ಲ ಜಾಗೃತಿ ಮೂಡಿಸಿದರೂ ಜನರು ಹೊರಗೆ ತಿರುಗಾಡುವುದು ಮಾತ್ರ ಸಂಪೂರ್ಣ ನಿಂತಿಲ್ಲ.  ಅನಿವಾರ್ಯ ಕೆಲಸಗಳಿಂದ ಕೆಲವರು ಹೊರಗೆ ಬಂದರೆ, ಕೆಲವರು ವಿನಾಕಾರಣ ಬೈಕ್‌ಗಳಲ್ಲಿ ರಸ್ತೆಗಳಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಹಾಗಾಗಿ ಇದನ್ನು ಸಂಪೂರ್ಣವಾಗಿ ನಿಲ್ಲಿಸುವ ಸಲುವಾಗಿ ಹಗಲುವೇಷ ಮಾದರಿಯ ಕೋವಿಡ್ ವೈರಸ್‌ ವೇಷ ಧರಿಸಿದ್ದ ಇಬ್ಬರು ಜನರಲ್ಲಿ ಭಯ ಬೀಳಿಸುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದೆ.

ತರಕಾರಿ ಮಾರುಕಟ್ಟೆ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್ ವೇಷಾಧಾರಿಗಳು ಇರಲಿದ್ದಾರೆ. ಜತೆಗೆ ಅಲ್ಲಿರುವ ಪೊಲೀಸರು ಸಹ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಹೇಗೆ ಕಾಪಾಡಬೇಕು. ಸ್ಯಾನಿಟೈಸರ್‌ ಹೇಗೆ ಬಳಸಬೇಕು. ಕೈಗಳನ್ನು ಹೇಗೆ ತೊಳೆಯಬೇಕು? ಇನ್ನಿತರೆ ಮಾಹಿತಿಯನ್ನೂ ನೀಡಲಿದ್ದಾರೆ. ಕೊನೆಗೆ ಅನಾವಶ್ಯಕವಾಗಿ ಹೊರಗಡೆ ಬರಬೇಡಿ. ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂಬ ಸಂದೇಶವನ್ನೂ ಹೇಳುವ ಮೂಲಕ ಜನರು ಮನೆಯಿಂದ ಹೊರಗೆ ಬರದಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಕೊರೊನಾ ವೈರಸ್‌ ವೇಷಧಾರಿಗಳು ಭಾನುವಾರ ಜಾಗೃತಿ ಮೂಡಿಸಿದರು. ಈ ವೇಳೆ ಹೆಚ್ಚುವರಿ ಎಸ್‌ಪಿ ಬಿ.ಎನ್‌. ಲಾವಣ್ಯ, ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.