ಬಿಜೆಪಿ ಅಯೋಧ್ಯೆಯಲ್ಲಿ ವಾಲ್ಮೀಕಿ ದೇಗುಲ ನಿರ್ಮಿಸಬೇಕು: ಪ್ರಸನ್ನಾನಂದ ಸ್ವಾಮೀಜಿ


Team Udayavani, Dec 28, 2019, 11:47 AM IST

valmiki

ಬಳ್ಳಾರಿ : ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷ ಅಯೋಧ್ಯೆಯಲ್ಲಿ ರಾಮ ಮಂದಿರದ ಜತೆ ವಾಲ್ಮೀಕಿ ದೇಗುಲವನ್ನು ನಿರ್ಮಿಸಬೇಕು ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಪಕ್ಷ ಶ್ರೀರಾಮನನ್ನು ಐಕಾನ್ ಮಾಡಿಕೊಂಡಿದೆ. ರಾಮನ ಹೆಸರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರನ್ನು ನಿರ್ಮಿಸುವುದರ ಜತೆಗೆ ವಾಲ್ಮೀಕಿ ದೇಗುಲವನ್ನು ಸಹ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಸಮುದಾಯ ನಾಲ್ಕನೇ ಅತಿದೊಡ್ಡ ಸಮುದಾಯವಾಗಿದೆ. ವಾಲ್ಮೀಕಿ ಮಹರ್ಷಿಗಳ ಎರಡನೇ ವರ್ಷದ ಜಾತ್ರಾ ಮಹೋತ್ಸವ ಇರುವ ಕಾರಣ   ರಾಜ್ಯಾದ್ಯಂತ ಸುತ್ತಾಡಿ ಸಂಘಟನೆ ಮಾಡ್ತಾ ಇದ್ದೇನೆ. ವಾಲ್ಮೀಕಿ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ನಕಲಿ ಜಾತಿ ಪ್ರಮಾಣ ಪತ್ರದಿಂದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕು. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕು ಎಂದು ತಿಳಿಸಿದರು.

ಮೀಸಲಾತಿ ಪ್ರಮಾಣ ಹೆಚ್ವಳಕ್ಕೆ ಒತ್ತಾಯಿಸಿ ಇತ್ತೀಚೆಗೆ ನಡೆಸಿದ ಪಾದಯಾತ್ರೆ ವೇಳೆ ರಾಜ್ಯ ಸರ್ಕಾರ  ಮೀಸಲಾತಿಯನ್ನು  ಶೇಕಡಾ 7.5 ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು ಎಂದ ಸ್ವಾಮೀಜಿಗಳು, ಇದಕ್ಕೆ ಸಂಬಂಧಿಸಿದಂತೆ ರಚಿಸಲಾದ ನ್ಯಾ. ನಾಗಮಹೋನ ದಾಸ ಅವರಿಗೆ ವರದಿ ನೀಡಲು ಹೇಳಿದ್ದರು. ಜನವರಿ ಮೂವತ್ತರೊಳಗೆ ವರದಿ ಸಲ್ಲಿಸುವಂತೆ ಮನವಿ ಮಾಡುತ್ತೇವೆ. ಅಲ್ಲದೇ, ಮುಂದಿನ  ಫೆ.8, 9  ರಂದು ಮೀಸಲಾತಿಯನ್ನು ಘೋಷಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಸಮುದಾಯದವರು ಮೀಸಲಾತಿ ಅನುಭವಿಸಿ ಅಭಿವೃದ್ಧಿಯಾದವರು, ಬೇರೆಯವರಿಗೆ ಅವಕಾಶ ಕೊಡಬೇಕೆಂದು ಕೋರಿದ ಸ್ವಾಮೀಜಿಗಳು, ಅಭಿವೃದ್ಧಿಯಾದವರು ತ್ಯಾಗ ಮಾಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸವಲತ್ತು ಸಿಗಬೇಕು. ಜಾತಿಯಿಂದ ಗೆದ್ದವರು ಜನರ ಧ್ವನಿಯಾಗಿ ಮಾತನಾಡಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸದಿದ್ದರೆ ಸಮುದಾಯದ ಎಲ್ಲ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವಂತೆ  ಹೋರಾಟದ ವೇಳೆ ಹೇಳಿದ್ದೇನೆ. ಅಂದಿನ ವೇದಿಕೆಯಲ್ಲಿ ಪಕ್ಷಾತೀತವಾಗಿ ರಾಜೀನಾಮೆ‌ ನೀಡಲು ಸಮುದಾಯದ ಜನಪ್ರತಿನಿಧಿಗಳು ಸಮ್ಮತಿ ಸೂಚಿಸಿದ್ದರು. ಮುಖ್ಯಮಂತ್ರಿಗಳು ಸಹ ಮೀಸಲಾತಿ ನೀಡೋ ಭರವಸೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿಯವರು ವಾಲ್ಮೀಕಿ ಸಮುದಾಯವನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ‌. ಹಾಗಾಗಿ ಸಮುದಾಯದ ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.