ಕಟ್ಟಡ ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ ನೀಡಿ


Team Udayavani, Jul 3, 2021, 10:03 AM IST

ಕಟ್ಟಡ ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ ನೀಡಿ

ಬಳ್ಳಾರಿ: ಕೋವಿಡ್‌ ಸೋಂಕು, ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಕಟ್ಟಡ ಕಾರ್ಮಿಕರ ಸಂಘವು ನಗರದ ಡಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಕೋವಿಡ್‌ ಸೋಂಕು ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿದ್ದು, ಸೋಂಕಿಗೆ ಸಿಲುಕಿದ ಹಲವರು ನಿರುದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ನೋಂದಾಯಿತ/ವಲಸೆ ಕಾರ್ಮಿಕರ, ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಮೂರು ತಿಂಗಳಿಗೆ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು

ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಅನೇಕ ಹೋರಾಟ ನಡೆಸಿದ್ದರೂ ಸರ್ಕಾರ ಕೇವಲ ರೂ. 3000 ಪರಿಹಾರ ಘೋಷಿಸಿದೆ. ಇದು ರಾಜ್ಯದ ಲಕ್ಷಾಂತರ ನಿರ್ಮಾಣ ವಲಯದ ಕಾರ್ಮಿಕರನ್ನು ಅಸಮಾಧಾನ ಗೊಳಿಸಿದೆ. ಈ ತೀರ್ಮಾನವನ್ನು ತಾವು ಕೂಡಲೇ ಮಾರ್ಪಡಿಸಿಕೂಡಲೇ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮೂರು ತಿಂಗಳಿಗೆ ಮಾಸಿಕ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಎಐಯುಟಿಯುಸಿ ಸಂಯೋಜಿತ ಕೇಂದ್ರ ಕಾರ್ಮಿಕ ಸಂಘಟನೆ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘವು ಆಗ್ರಹಿಸಿದೆ.

ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ. ಪರಿಹಾರ ನೀಡಲು ಮಂಡಲಿ ಆದೇಶ ಹೊರಡಿಸಿ ಒಂದು ತಿಂಗಳು ಕಳೆದರೂ ಬಹುತೇಕ ಕಟ್ಟಡ ಕಾರ್ಮಿಕರ ಖಾತೆಗೆ ಇದುವರೆಗೂ ಪರಿಹಾರದ ಹಣ ಸೇರಿಲ್ಲ. ಆದ್ದರಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರ ಖಾತೆಗೆ ಪರಿಹಾರ ನಿಧಿ ಕೂಡಲೇ ತಲುಪಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕ್ಲೇಮ್‌ ಅರ್ಜಿ ಸಲ್ಲಿಸಿರುವ ಎಲ್ಲ ಅರ್ಹ ಫಲಾನುಭವಿಗಳ ಖಾತೆಗೆ ಕೂಡಲೇ ಹಣ ಪಾವತಿಸಬೇಕು. ಎಲ್ಲ ಕಟ್ಟಡ ಕಾರ್ಮಿಕರಿಗೂ ಗುಣಮಟ್ಟದ ಆಹಾರ ಪದಾರ್ಥಗಳ ಕಿಟ್‌ನ್ನು ನೀಡಬೇಕು. ಆಹಾರ ಪದಾರ್ಥಗಳ ಕಿಟ್ಟನ್ನುಪಡೆದಿರುವ ಸಾಕಷ್ಟು ಕಟ್ಟಡ ಕಾರ್ಮಿಕರಿಂದ ಆಹಾರ ಪದಾರ್ಥಗಳ ಗುಣಮಟ್ಟದ ಕುರಿತು ದೂರು ನೀಡಲಾಗಿದೆ. ಕಳಪೆ ಆಹಾರ ಪದಾರ್ಥಗಳ ಕಿಟ್‌ನ್ನು ಪಡೆದವರಿಗೆ ಮತ್ತೆ ಗುಣಮಟ್ಟದ ಆಹಾರ ಪದಾರ್ಥಗಳ ಕಿಟ್‌ನ್ನು ನೀಡಬೇಕು. ಕಟ್ಟಡ ಕಾರ್ಮಿಕರಿಗೆ ನೀಡಲು ಉತ್ತೇಜಿಸಿರುವ ಆಹಾರ ಪದಾರ್ಥಗಳ ಕಿಟ್‌ಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ದೂರುಗಳು ಬಂದಿರುವುದರಿಂದ ಕೂಡಲೇ ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಬಳಿಕ ಜಿಲ್ಲಾಡಳಿತದ ಮೂಲಕಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಐಯುಟಿಯುಸಿ ಮುಖಂಡರಾದ ಸುರೇಶ್‌.ಜಿ, ಕಟ್ಟಡ ಕಾರ್ಮಿಕರಾದ ಎಚ್‌. ನೀಲಪ್ಪ, ಜಯರಾಜ್‌, ಜಗದೀಶ್‌, ವಿಜಯಕುಮಾರ್‌, ಚಂದ್ರಪ್ಪ, ಓಬಳೇಶ್‌, ಶೇಖರ್‌ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.