ಕಗತ್ತೂರು ದಲಿತ ಕಾಲೋನಿಯಲ್ಲಿ ಸ್ವಚ್ಛತೆ ಮರೀಚಿಕೆ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಲೋನಿ ನಿವಾಸಿಗಳ ಆಕ್ರೋಶ

Team Udayavani, Feb 20, 2020, 6:22 PM IST

20-February-30

ಚನ್ನಗಿರಿ: ತಿಂಗಳುಗಳೇ ಕಳೆದರೂ ಸ್ವಚ್ಛತೆ ಭಾಗ್ಯ ಕಾಣದ ಗಬ್ಬು ನಾರುವ ಚರಂಡಿಗಳು, ನಿಂತ ನೀರಿನಿಂದಾಗಿ ನೋಡಿದಲ್ಲೆಲ್ಲ ಸೊಳ್ಳೆಗಳು. ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟಕ್ಕೆ ಮನೆಯಿಂದ ಹೊರಗಡೆ ಬರುವುದಕ್ಕೂ ಹಿಂಜರಿಯುವ ಸ್ಥಿತಿ. ಇದು ಕಗತ್ತೂರು ಗ್ರಾಮದ ದಲಿತ ಕಾಲೋನಿ ಜನರ ನಿತ್ಯ ಗೋಳಾಟ.

ಹೌದು.. ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ದೇಶದಲ್ಲಿಯೇ ದೊಡ್ಡಮಟ್ಟದ ಅಭಿಯಾನ ನಡೆಯುತ್ತಿದೆ. ಅದರೆ ತಾಲೂಕಿನ ಕಗತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ಮಾತ್ರ ಸ್ವತ್ಛತೆ ಎನ್ನುವುದು ಕಡತದಲ್ಲಿ ಮಾತ್ರ ಎನ್ನುವಂತಾಗಿದೆ. ಗ್ರಾಮದಲ್ಲಿ ದಲಿತರ ಕಾಲೋನಿ ಹೊರತುಪಡಿಸಿ ಬೇರೆ ಕಾಲೋನಿಗಳ ರಸ್ತೆಗಳು, ಚರಂಡಿ ಸ್ವಚ್ಛವಾಗಿವೆ. ದಲಿತ ಕಾಲೋನಿಗಳತ್ತ ಮಾತ್ರ ಅಧಿಕಾರಿಗಳು ತಲೆ ಹಾಕದೇ ಇರುವುದಕ್ಕೆ ಕಾಲೋನಿ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

ಗಬ್ಬು ನಾರುವ ಚರಂಡಿಗಳು; ಕಳಪೆ ಗುಣಮಟ್ಟದ ಚರಂಡಿಗಳಲ್ಲಿ ನೀರು ಹರಿಯುವುದೇ ಇಲ್ಲ. ಕಸ ಕಟ್ಟಿಕೊಂಡು ರಸ್ತೆಮೇಲೆಲ್ಲ ನೀರು ಹರಿಯುತ್ತದೆ. ಇದರಿಂದ ಶಾಲೆಗೆ ಹೋಗುವ ಮಕ್ಕಳೂ ಕೊಳಚೆ ನೀರನ್ನು ತುಳಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟ ಶುರುವಾಗುತ್ತದೆ.

ಸಾಂಕ್ರಾಮಿಕ ರೋಗಗಳ ಭೀತಿ: ಸ್ವಚ್ಛತೆಯಿಲ್ಲದೆ ನಿಂತ ನೀರಿನಿಂದ ಡೆಂಘೀ, ಚಿಕೂನ್‌ ಗುನ್ಯಾ, ಕಾಲರಾ, ಮಲೇರಿಯಾ ಸೇರಿದಂತೆ ಅನೇಕ ರೋಗ ಹರಡುವ ಭೀತಿ ಶುರುವಾಗಿದೆ. ಈಗಾಗಲೇ ಸಣ್ಣಪುಟ್ಟ ಜ್ವರಗಳಿಂದ ಬಳಲುತ್ತಿರುವವರು ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದಾರೆ. ಬೀದಿ ನಲ್ಲಿಯಲ್ಲಿ ಬೀಡುವ ನೀರು ಹಿಡಿಯಲು ಕೂಡ ಚರಂಡಿಯಲ್ಲಿಯೇ ಕೊಡಪಾನಗಳನ್ನು ಇಟ್ಟು ತುಂಬಿಕೊಳ್ಳುವ ಪರಿಸ್ಥಿತಿ ಇದೆ. ಇಂತಹ ಶೋಚನೀಯ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವವರ ಸಮಸ್ಯೆಯನ್ನು ಹೇಳ್ಳೋರಿಲ್ಲ-ಕೇಳ್ಳೋರಿಲ್ಲ ಎನ್ನುವಂತಾಗಿದೆ.

ಪ್ರತಿ ವಾರಕ್ಕೊಮ್ಮೆಯಾದರೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲೀಚಿಂಗ್‌ ಪೌಡರ್‌ ಹಾಕಬೇಕು ಎಂಬ ನಿಯಮವಿದೆ. ಆದರೆ ಇಲ್ಲಿಯವರೆಗೂ ಗ್ರಾಮದಲ್ಲಿ ಬ್ಲೀಚಿಂಗ್‌ ಪೌಡರ್‌ನ್ನು ಚರಂಡಿಗಳು ಕಂಡೇ ಇಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಗಮನಹರಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಬೇಡಿಕೆ ಈಡೇರಿಕೆಗಾಗಿ ಶಿಕ್ಷಕರ ಸಂಘ ಪ್ರತಿಭಟನೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

16 ಪದವಿ ಕಾಲೇಜುಗಳ ಬಿಕಾಂ ಫಲಿತಾಂಶಕ್ಕೆ ತಡೆ

ballari news

ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

23-bly-1

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ: ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ

12m

ಡಿಸಿ ಕಚೇರಿ ಎದುರು 3ನೇ ದಿನ ಮುಂದುವರಿದ ಸತ್ಯಾಗ್ರಹ

MUST WATCH

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

ಹೊಸ ಸೇರ್ಪಡೆ

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.