ಡೊನೇಷನ್‌ ಹಾವಳಿ ತಡೆಗೆ ಆಗ್ರಹ

Team Udayavani, Jun 16, 2018, 10:48 AM IST

ballery-1.jpg

ಹೂವಿನಹಡಗಲಿ: ತಾಲೂಕಿನಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ವಸೂಲಾತಿ ಮಾಡುವ ಡೊನೇಷನ್‌ ಹಾವಳಿಯಿಂದ ಮಕ್ಕಳ ಪೋಷಕರು ಬೇಸತ್ತು ಹೋಗಿದ್ದು, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಜಿಲ್ಲಾ ಉಪಾಧ್ಯಕ್ಷ ಓಂಕಾರ ಪೂಜಾರ್‌, ತಾಲೂಕಿನಲ್ಲಿರುವ  ಖಾಸಗಿ ಶಾಲಾ-ಕಾಲೇಜುಗಳು ಪ್ರೀ ಕೆಜಿಯಿಂದ ಪದವಿ ತರಗತಿಯವರೆಗೂ ಶಿಕ್ಷಣ ಕಾನೂನುಗಳನ್ನು ಗಾಳಿಗೆ ತೂರಿ ಮನ ಬಂದಂತೆ ಡೊನೇಷನ್‌ ವಸೂಲಾತಿ ಮಾಡುತ್ತಿದ್ದಾರೆ.

ಇದರಿಂದಾಗಿ ಪಾಲಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು, ಸೂಕ್ತ ಕಾನುನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಶಿಕ್ಷಣಾಧಿಕಾರಿಗಳು ಡೊನೇಷನ್‌ ಹಾವಳಿ ತಪ್ಪಿಸಲು ನಿಯಂತ್ರಣ ಸಮಿತಿ ರಚಿಸಬೇಕು. ಪ್ರತಿ ಶಾಲೆಯಲ್ಲಿಯೂ
ಸಹ ಸರ್ಕಾರದಿಂದ ನಿಗದಿಪಡಿಸಿದ ಶುಲ್ಕವನ್ನು ಸೂಚನಾ ಫಲಕದಲ್ಲಿ ಹಾಕಬೇಕು. ಅಲ್ಲದೇ ಆರ್‌ಟಿಇನಲ್ಲಿ
ಆಯ್ಕೆಯಾದ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಶುಲ್ಕವನ್ನು ಪಡೆದುಕೊಳ್ಳುವಂತಿಲ್ಲ. ಆದರೂ ವಸೂಲಿ ಮಾಡಲಾಗುತ್ತಿದೆ ಎಂದು ದೂರಿದರು.

ಇನ್ನು ರಾಜ್ಯ ಸರ್ಕಾರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕು. ಈಗಾಗಲೇ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ತಿಂಗಳು ಕಳೆದರೂ ಬಸ್‌ ಪಾಸ್‌ ವಿತರಿಸಲು ವಿಳಂಬ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ. ಕೂಡಲೇ ಬಸ್‌ ಪಾಸ್‌ ವಿತರಿಸಬೇಕೆಂದು ಒತ್ತಾಯಿಸಿದರು. 
ತಾಲೂಕು ಎಸ್‌ಎಫ್‌ಐ ಅಧ್ಯಕ್ಷ ಡಿ. ಮೇಘರಾಜ, ಉಪಾಧ್ಯಕ್ಷ ಎಲ್‌. ಕೃಷ್ಣನಾಯ್ಕ, ಸಂತೋಷ್‌, ಚಂದ್ರಶೇಖರ್‌, ಗಿರೀಶ್‌, ವೀರೇಶ್‌, ರಾಜು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.