ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ

Team Udayavani, Nov 20, 2018, 5:16 PM IST

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಮಧ್ಯೆ ಉಂಟಾದ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ.

ನಗರದ ಜಿಪಂ ಕಚೇರಿಯ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಎನ್‌ಎಸ್‌ ಎಲ್‌ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರನ್ನು ಭೇಟಿಯಾದ ಸಚಿವ ಡಿ.ಕೆ. ಶಿವಕುಮಾರ್‌, ಅಂದಾಜು 7500 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆಯಲಾಗಿದೆ. ಕಟಾವು ಹಂತಕ್ಕೆ ಬಂದಿರುವ ಕಬ್ಬನ್ನು ಖರೀದಿಸಲು ಸಕ್ಕರೆ ಕಾರ್ಖಾನೆ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಜಿಲ್ಲೆಯ ಸಿರುಗುಪ್ಪ ಮತ್ತು ಪಕ್ಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರೈತರು ಸಾವಿರಾರು ಹೆಕೇrರ್‌ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆದಿದ್ದಾರೆ. ಅದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಕಬ್ಬನ್ನು ಬೆಳೆದಿದ್ದು, ಆರ್ಥಿಕ ಮುಗ್ಗಟ್ಟು ಎದುರಾಗಿದೆ ಎಂಬ ಕಾರಣವೊಡ್ಡಲಾಗಿದೆ.

ಇದೀಗ ಕಬ್ಬು ಬೆಳೆಗಾರರು ಕಬ್ಬನ್ನು ಮಾರಾಟ ಮಾಡಲಾರದೆ, ಹಾಗೆಯೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ಆಯ್ತು ನಿಮ್ಮ ಈ ಸಮಸ್ಯೆಗಳ ಕುರಿತು ಪರಿಶೀಲಿಸಿ ಶೀಘ್ರವೇ ಇತ್ಯರ್ಥಪಡಿಸಲು ಶ್ರಮಿಸುವೆ. ಅಲ್ಲಿಯವರೆಗೆ ಸಾವಧಾನದಿಂದಿರಿ. ಈ ಜಿಲ್ಲೆಯ ಕಬ್ಬು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಹೊಸಪೇಟೆ, ಸಿರುಗುಪ್ಪ ತಾಲೂಕಿನ
ರೈತರು ಕೈಗೊಂಡಿದ್ದ ಪ್ರತಿಭಟನೆ ಮಧ್ಯ ಭಾಗದಲ್ಲೇ ಸಚಿವರು ಕುಳಿತುಕೊಂಡೇ ಸಮಸ್ಯೆ ಆಲಿಸಿದರು. ಈ ವಿಚಾರವಾಗಿ ನಾನು ಮತ್ತೆ ಮಾತನಾಡುವೆ.

ಜಿಲ್ಲಾಧಿಕಾರಿ ಡಾ| ರಾಮಪ್ರಸಾತ್‌ ಮನೋಹರ್‌ ಬಳಿ ನಾನು ಮಾಹಿತಿ ಪಡೆದು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಜಿಪಂ ಕಚೇರಿಗೆ ಮುತ್ತಿಗೆ: ಬೇಸಿಗೆ ಬೆಳೆಗೆ ತುಂಗಭದ್ರಾ ಜಲಾಶಯದಿಂದ ಎಚ್‌ಎಲ್‌ಸಿ ಉಪಕಾಲುವೆಗೆ ನೀರು ಹರಿಸಬೇಕು ಎಂದು ನೂರಾರು ರೈತರು ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದರು. ಪೊಲೀಸರು ರೈತರನ್ನು ತಡೆಹಿಡಿದರು. ಸಚಿವರು ಬರುವಂತೆ ಪಟ್ಟು ಹಿಡಿದರು.

ಕಚೇರಿಯ ಸಭಾಂಗಣದಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್‌ ಕೆಳಗಿಳಿದು ಬಂದರು. ರೈತರ ಮನವಿಪತ್ರ ಸ್ವೀಕರಿಸಿ, ಪರಿಶೀಲಿಸಿ ಬಗೆ ಹರಿಸುವುದಾಗಿ ಭರವಸೆ ನೀಡಿದರು. ಬಳ್ಳಾರಿ ಲೋಕಸಭಾ ಸದಸ್ಯ ವಿ.ಎಸ್‌. ಉಗ್ರಪ್ಪ, ಶಾಸಕರಾದ ಆನಂದ ಸಿಂಗ್‌, ಈ.ತುಕಾರಾಂ, ಜೆ.ಎನ್‌.ಗಣೇಶ, ಪಿ.ಟಿ.ಪರಮೇಶ್ವರ್‌ನಾಯ್ಕ ಸಾಥ್‌ ನೀಡಿದರು. ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ...

  • ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ ಮುಂದುವರಿದಿದ್ದು, ಸಿಡಿಲಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮಧ್ಯೆ, ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ...

  • ಕುತ್ತಾರು: ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಶ್ರೀ ರಾಜರಾಜೇಶ್ವರಿ ಘಟಕದ ವತಿಯಿಂದ ಮಳೆಗಾಗಿ...

  • ಮಂಗಳೂರು/ಉಡುಪಿ: ಮತದಾನಕ್ಕೂ ಮತ ಎಣಿಕೆಗೂ 35 ದಿನಗಳಷ್ಟು ದೀರ್ಘಾವಧಿಯ ಕಾಯುವಿಕೆ ಕರಾವಳಿ ಮತ್ತು ಮಲೆನಾಡು ವ್ಯಾಪ್ತಿಯ ಎರಡು ಮುಖ್ಯ ಲೋಕಸಭಾ ಕ್ಷೇತ್ರಗಳಿಗೆ...

  • ಪುಣೆ: ಭಾರತೀಯ ಕ್ರಿಕೆಟ್‌ ತಂಡ ಏಕದಿನ ವಿಶ್ವಕಪ್‌ಗಾಗಿ ಇಂಗ್ಲೆಂಡ್‌ಗೆ ತೆರಳುವ ಮೊದಲು ಭಾರತ ತಂಡದ ಕೋಚ್‌ ರವಿಶಾಸ್ತ್ರಿ ಮಹಾರಾಷ್ಟ್ರದಲ್ಲಿರುವ ಶಿರ್ಡಿ ಸಾಯಿಬಾಬಾ...

  • ಕುಂದಾಪುರ: ಮಳೆ ನೀರಿಂಗಿಸುವ ಮೂಲಕ ನೀರನ್ನು ಕಾದಿಟ್ಟು ಕೊಳ್ಳಿ. ಪ್ರತಿಯೊಬ್ಬರೂ ನೀರುಳಿ ಸುವ ನಿಟ್ಟಿನಲ್ಲಿ ನಿಮ್ಮದೇ ಆದ ಕೊಡುಗೆಗಳನ್ನು ನೀಡಿ. ನೀರು ಎಂದರೆ...