ಕನ್ನಡದಲ್ಲಿ ಅನ್ಯಭಾಷೆ ಲಯ ಅಳವಡಿಕೆ ಸುಲಭ: ವಿಜಯಶಂಕರ್‌


Team Udayavani, Aug 1, 2020, 2:13 PM IST

ಕನ್ನಡದಲ್ಲಿ ಅನ್ಯಭಾಷೆ ಲಯ ಅಳವಡಿಕೆ ಸುಲಭ: ವಿಜಯಶಂಕರ್‌

ಹೊಸಪೇಟೆ: ವೆಬಿನಾರ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಬ್ಬಂದಿ ವರ್ಗ. 

ಹೊಸಪೇಟೆ: ಭಾಷಾಂತರದಿಂದ ಅನ್ಯಭಾಷೆಯ ಲಯವನ್ನು ಕನ್ನಡದಲ್ಲಿ ಅಳವಡಿಸಿಕೊಳ್ಳಲು ಸುಲಭವಾಗಲಿದೆ ಎಂದು ಕನ್ನಡ ಸಾಹಿತ್ಯದ ಖ್ಯಾತ ವಿಮರ್ಶಕ ಎಸ್‌.ಆರ್‌.  ವಿಜಯಶಂಕರ್‌ ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ವೆಬಿನಾರ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಹಲವರ ಸಹಯೋಗದೊಡನೆ ಭಾಷಾಂತರ ರೂಪಿಸಿದಾಗ ಖಚಿತವಾದ ಭಾಷಿಕ ಲಯವೊಂದು ಸಿಗಲಿದೆ. ಅನ್ಯ ಭಾಷೆ ವಿಚಾರಗಳ ಲೋಕಕ್ಕೆ ಪ್ರವೇಶಿಸಲು ಭಾಷಾಂತರಗಳು ಕಿಟಕಿಗಳಂತೆ ಸಹಕರಿಸುತ್ತವೆ. ಅವುಗಳನ್ನು ಇನ್ನಷ್ಟು ತಿಳಿದುಕೊಳ್ಳಬೇಕಾದರೆ ಬಾಗಿಲುಗಳನ್ನು ತೆರೆದು ಹೊರ ಹೊಗಬೇಕಾಗುತ್ತದೆ. ಹೊಸದಾಗಿ ಭಾಷಾಂತರ ಆರಂಭ ಮಾಡುವವರು ಮೂಲಕೃತಿಯ ಓದಿನ ಸಮಗ್ರ ತಿಳಿವಳಿಕೆಯಿಂದ
ಮುಂದಾಗಬೇಕು ಎಂದರು.

ಕೇಂದ್ರದ ನಿರ್ದೇಶಕ ಡಾ. ಮೋಹನ ಕುಂಟಾರ್‌ ಮಾತನಾಡಿ, ಯಾವುದೇ ಅನುವಾದ ಕೃತಿಯೊಂದು ರೂಪುಗೊಳ್ಳಬೇಕಾದರೆ ಅನುವಾದಕರ ವೈಯಕ್ತಿಕ ಹಿತಾಸಕ್ತಿಗಳು ಮಾತ್ರ ಕಾರಣವಾಗಿರುವುದಿಲ್ಲ. ಅದನ್ನು ಮೀರಿ ಸಮಕಾಲೀನ ಸಮಾಜ, ರಾಜಕೀಯ, ಸಾಹಿತ್ಯ ಕ್ಷೇತ್ರದ ಆಶೋತ್ತರಗಳು ಕೂಡ ಪ್ರಮುಖ ಪಾತ್ರವಹಿಸುತ್ತವೆ. ಈ ಆಶೋತ್ತರಗಳಿಗನುಗುಣುವಾಗಿಯೇ ಅನುವಾದಗಳು ಯಾವುದೇ ಕಾಲಘಟ್ಟಕ್ಕನುಗುಣವಾಗಿ ವಿಭಿನ್ನವಾಗಿ ರೂಪುಗೊಳ್ಳುತ್ತವೆ. ಕಾಲಕ್ಕೆ ತಕ್ಕಂತೆ ಅನುವಾದಕರ ಆಸಕ್ತಿ ಹಾಗೂ ಇತರೆ ಒತ್ತಡಗಳಿಂದ ಭಾಷಾಂತರ ಪ್ರವೃತ್ತಿಗಳು ರೂಪುಗೊಳ್ಳುತ್ತವೆ ಎಂದು ಹೇಳಿದರು.

ಬಳಿಕ ನಡೆದ ಸಂವಾದದಲ್ಲಿ ಮುಂಬೈ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ| ಜಿ.ಎನ್‌. ಉಪಾಧ್ಯ, ಡಾ| ಯರ್ರಿಸ್ವಾಮಿ ಇತರರು ಭಾಗವಹಿಸಿದ್ದರು. ಕುಲಸಚಿವ ಡಾ| ಎ. ಸುಬ್ಬಣ್ಣ ರೈ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಾಯಕ ನಿರ್ದೇಶಕ ಡಿ. ಪ್ರಭಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸುಮಾರು 184 ಜನ ಆಸಕ್ತರು ನೋಂದಣಿ ಮಾಡಿಕೊಂಡು ವೆಬಿನಾರ್‌ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.