ಸಾಂಸ್ಕೃತಿಕ ಚಟುವಟಿಕೆ ಪ್ರೋತ್ಸಾಹಿಸಿ


Team Udayavani, Nov 25, 2018, 3:48 PM IST

dvg-8.jpg

ಬಳ್ಳಾರಿ: ಯುವಜನರು ಸಾಂಸ್ಕೃತಿಕ ಚಟುವಟಿಕೆಯತ್ತ ಸಕ್ರಿಯರಾಗಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜವಳಿ ರುದ್ರಪ್ಪ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಜನಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಫೂರ್ತಿ ಕಲಾವಿದರ ಸಂಘದ ಸಹಯೋಗದಲ್ಲಿ ನಗರದ ಡಾ.ರಾಜ್‌ ರಸ್ತೆಯಲ್ಲಿನ ಬಿಡಿಎಎ ಫುಟ್ಬಾಲ್‌ ಮೈದಾನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.

ಅತ್ಯಾಧುನಿಕ ಜಗತ್ತಿನಲ್ಲಿ ಮೊಬೈಲ್‌ ಹಾಗೂ ಸಾಮಾಜಿಕ ಜಾಲತಾಣಗಳ ಭರಾಟೆಯಲ್ಲಿ ಈ ನಾಡಿನ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮರೀಚಿಕೆಯಾಗುತ್ತವೆ. ಅವುಗಳನ್ನು ಉಳಿಸಿ, ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ, ಕ್ರೀಡಾ ಇಲಾಖೆ ಆಯೋಜಿಸುವ ಯುವಜನೋತ್ಸವದಲ್ಲಿ ಯುವಜನರು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದರು.

ದಶಕಗಳ ಹಿಂದೆ ಯುವಜನ ಕ್ರೀಡಾ ಇಲಾಖೆ ಎಂದರೆ ಯಾರಿಗೂ ಗೊತ್ತೇ ಇರಲಿಲ್ಲ. ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದ ಕಲಬುರಗಿ ವಿಭಾಗೀಯ ಮಟ್ಟದಲ್ಲಿ ಯುವಜನ ಪ್ರಶಸ್ತಿಗಳು ಬರುತ್ತಲೇ ಇರಲಿಲ್ಲ. ಇಲಾಖೆಯಲ್ಲಿ ಹಿಂದೆ ಅಧಿಕಾರಿಗಳಾಗಿದ್ದ ಕರೀ ಮುಲ್ಲಾಸಾಬ್‌ ಸೇರಿ ಇತರರು ವಿಧಾನಸೌಧಕ್ಕೆ ತಿರುಗಿ ಪ್ರಶಸ್ತಿ ಬರುವಂತೆ ಮಾಡಿದರು. ಆಗ 1990ರಲ್ಲಿ ಜಿಲ್ಲೆಗೆ ಯುವಜನ ಪ್ರಶಸ್ತಿ ನೀಡಲಾಯಿತು. ಅದೇ ರೀತಿ ಪ್ರತಿವರ್ಷವೂ ಸಮಾಜ ಸೇವಕರಿಗೆ ಯುವಜನ ಪ್ರಶಸ್ತಿ ನೀಡಬೇಕು ಎಂದವರು ಕೋರಿದರು.

ಯುವಜನರು ಮೊಬೈಲ್‌ ಬಳಕೆ ಕಡಿಮೆ ಮಾಡಬೇಕು. ಈ ನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸ್ಸನ್ನು  ಸಂತೋಷಗೊಳಿಸುವುದರ ಜೊತೆಗೆ ಯುವಜನರ ಮಾನಸಿಕ ಒತ್ತಡ ದೂರವಾಗಿಸಲು ಸಹಕಾರಿಯಾಗಲಿದೆ ಎಂದರು. ಸ್ಫೂರ್ತಿ ಕಲಾವಿದರ ಸಂಘದ ಅಧ್ಯಕ್ಷ ಜಕ್ರಿಯಾ ಮಾತನಾಡಿ, ಕಲೆಗೆ ಎಂಥ ದುಷ್ಟ ಶಕ್ತಿಯನ್ನು ನಿಯಂತ್ರಿಸುವ ಶಕ್ತಿಯಿದೆ. ಹಾಗಾಗಿ, ಯುವಜನರು ಯುವಜನೋತ್ಸವದಲ್ಲಿ ಸಕ್ರಿಯರಾಗಿ ಭಾಗವಹಿಸಿ, ನಾಡಿನ ಕಲೆ ಮತ್ತು ಸಂಸ್ಕೃತಿಯ ಜೀವಂತಿಕೆಗೆ ಶ್ರಮಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ರಹಮತ್‌ ಉಲ್ಲಾ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ಸಿರುಗುಪ್ಪ, ಹೊಸಪೇಟೆ, ಕೂಡ್ಲಿಗಿ, ಸಂಡೂರು, ಹಡಗಲಿ ಹಾಗೂ ಬಳ್ಳಾರಿ ತಾಲೂಕಿನ ಯುವಜನರ ಹತ್ತಾರು ತಂಡಗಳು ಈ
ಯುವಜನೋತ್ಸವದಲ್ಲಿ ಪಾಲ್ಗೊಂಡಿದ್ದರು.

ವಿವಿಧ ಸ್ಪರ್ಧೆ: ಶಾಸ್ತ್ರೀಯ ನೃತ್ಯಗಳಾದ ಭರತ ನಾಟ್ಯ, ಒಡಿಸ್ಸಿ, ಮಣಿಪುರಿ, ಕೂಚುಪುಡಿ, ಕಥಕ್‌, ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ, ಕೊಳಲು, ವೀಣೆ, ಮೃದಂಗ, ಹಾರ್ಮೋನಿಯಂ, ಗಿಟಾರ್‌, ಶಾಸ್ತ್ರೀಯ ಗಾಯನವಾದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಗಾಯನೋತ್ಸವ, ಆಶುಭಾಷಣ, ಏಕಾಂಕ ನಾಟಕ ಪ್ರದರ್ಶನ ಸ್ಪರ್ಧೆಗಳು ನಡೆದವು. ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಯುವ ಕ್ರೀಡಾಪಟು ಮಹಾಂತೇಶ, ಸಂಗೀತ ತರಬೇತುದಾರ ಎಸ್‌.ಕೆ.ಆರ್‌.ಜಿಲಾನಿ ಬಾಷಾ,
ಕ್ರೀಡಾ ಇಲಾಖೆ ಅಧಿಕಾರಿಗಳಾದ ರಾಮಸ್ವಾಮಿ, ರಫಿಕ್‌, ಪ್ರದೀಪ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.