ಕನ್ನಡ ಬೆಳವಣಿಗೆಗೆ ಇಂಗ್ಲಿಷ್‌ ಅಡ್ಡಿ

Team Udayavani, Aug 20, 2017, 4:30 PM IST

ಹೊಸಪೇಟೆ: ಕನ್ನಡ ಸಾಹಿತ್ಯದ ಬೆಳವಣಿಗೆಗೆ ಇಂಗ್ಲಿಷ್‌ ಅಡ್ಡಿಯಾಗಿದ್ದು, ಸರ್ಕಾರ, ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಹಿರಿಯ ರಂಗಕರ್ಮಿ ಮ.ಬ ಸೋಮಣ್ಣ ಹೇಳಿದರು. ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಕಸಾಪ ಹೋಬಳಿ ಘಟಕವು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದ
ಅಮಾತ್ಯ ತಿಮ್ಮರಸ ವೇದಿಕೆಯಲ್ಲಿ ನಡೆದ ಪ್ರಥಮ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಇಂಗ್ಲಿಷ್‌ ವ್ಯಾಮೋಹಕ್ಕೆ ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕುಂಠಿತಗೊಂಡಿದೆ. ಉನ್ನತ ಹುದ್ದೆ ಗಿಟ್ಟಿಸಿಕೊಳ್ಳಲು ಪ್ರಜ್ಞವಂತ ನಾಗರಿಕರೇ ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವುದು
ಕನ್ನಡಕ್ಕೆ ಮಾರಕವಾಗಿದೆ ಎಂದು ವಿಷಾದಿಸಿದರು. ಕನ್ನಡ ಭಾಷೆ ಮತ್ತು ಸಾಹಿತ್ಯ ಉಳುವಿಗಾಗಿ ಸರ್ಕಾರವು ಕನ್ನಡ
ಬಳಕೆಯನ್ನು ಕಡ್ಡಾಯಗೊಳಸಬೇಕು. ಕನ್ನಡ ಮಾಧ್ಯಮದಲ್ಲಿ ಉನ್ನತ ಶಿಕ್ಷಣಕ್ಕೆ ಮುಂದಾಗಿ ಕನ್ನಡಿಗರಿಗೆ ಎಲ್ಲ ಕ್ಷೇತ್ರದಲ್ಲಿ ಉದ್ಯೋಗವಕಾಶಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಮುಖ್ಯಅತಿಥಿ ಹಂಪಿ ಜಿಪಂ ಸದಸ್ಯ ಪ್ರವೀಣ್‌ ಸಿಂಗ್‌, ಮಾಜಿ ಶಾಸಕ ಎಚ್‌. ಆರ್‌. ಗವಿಯಪ್ಪ, ಬಿಜೆಪಿ ಮುಖಂಡ ಧರ್ಮೇಂದರ್‌ ಸಿಂಗ್‌, ಶೋಯೆಬ್‌, ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ, ಪ.ಪಂ ಅಧ್ಯಕ್ಷ ಬಿ.ಆರ್‌. ಮಳಲಿ, ಅಮಾಜಿ ಹೇಮಣ್ಣ, ಸಮಾಜ ಸೇವಕ ಚಂದ್ರಪ್ಪ ಸ್ಮರಣ ಸಂಚಿಕೆ ಮತ್ತು ಸಾಹಿತಿಗಳ ನೂತನ ಗ್ರಂಥಗಳನ್ನು ಬಿಡುಗಡೆ ಮಾಡಿದರು. ಹೂವಿನಹಡಗಲಿ ಕಾಶಿಮಠದ ಹಿರಿಶಾಂತವೀರ ಮಹಾಸ್ವಾಮಿಗಳು ಉದ್ಘಾಟಿಸಿದರು. ನಂತರ ಸಂಜೆ ಗೋಷ್ಠಿಗಳು ಜರುಗಿದವು. ಮೆರವಣಿಗೆ: ಕಸಾಪ ಕಮಲಾಪುರ ಹೋಬಳಿ ಘಟಕದ ವತಿಯಿಂದ ನಡೆದ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಮಲಾಪುರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಸಮ್ಮೇಳನದ ಸರ್ವಾಧ್ಯಕ್ಷ ಮ.ಬ.ಸೋಮಣ್ಣರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಮೆರವಣಿಗೆಗೆ ಮಾಜಿ ಶಾಸಕ ಎಚ್‌. ಆರ್‌. ಗವಿಯಪ್ಪ, ಮುನೀರ್‌ ಮೋಟಾರ್ ಶೋಯಬ್‌ ಚಾಲನೆ ನೀಡಿದರು. ಕಸಾಪ ಕಮಲಾಪುರ ಹೋಬಳಿ ಘಟಕದ ಅಧ್ಯಕ್ಷ ದಯಾನಂದ ಕಿನ್ನಾಳ್‌, ಪಪಂ ಅಧ್ಯಕ್ಷ ಡಾ|ಬಿ. ಆರ್‌. ಮಳಲಿ, ಉಪಾಧ್ಯಕ್ಷ ಕೊರವರ ಭೀಮಣ್ಣ ಸೇರಿದಂತೆ ಪಪಂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಗರದ ಗಣ್ಯರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌-ಜನವರಿ ತಿಂಗಳ ಅವಧಿಯಲ್ಲಿ ದೇಶದ ಚಾಲ್ತಿ ಖಾತೆ ಕೊರತೆ(ಸಿಎಡಿ)ಯ ಮೇಲೆ ಚಿನ್ನದ ಆಮದು ಶೇ.9ರಷ್ಟು ಕುಸಿದು ಸುಮಾರು...

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...