ಅಂತೂ ಇಂತೂ ಶುರುವಾಯ್ತು ಕಬ್ಬು ಕಟಾವು: ರೈತ ನಿರಾಳ


Team Udayavani, Dec 20, 2018, 5:18 PM IST

bell-1.jpg

ಸಿರುಗುಪ್ಪ: ತಾಲೂಕಿನಲ್ಲಿ ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಮಂಗಳವಾರದಿಂದ ಕಬ್ಬು ಕಟಾವು ಮಾಡಲು ಆರಂಭಿಸಿರುವುದರಿಂದ ರೈತರು ನಿರಾಳ ಆಗಿದ್ದಾರೆ.

ತಾಲೂಕಿನ 7500 ಎಕರೆ ಪ್ರದೇಶದಲ್ಲಿ 2.5 ಲಕ್ಷ ಟನ್‌ ಕಬ್ಬು ಬೆಳೆದಿದ್ದು, ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಈ ವರ್ಷ ಕಾರ್ಖಾನೆ ಪ್ರಾರಂಭಿಸದ ಕಾರಣ ಕಬ್ಬು ಬೆಳೆದ ರೈತರು ಆತಂಕಕ್ಕೀಡಾಗಿದ್ದರು. 

ಸರ್ಕಾರ ಮತ್ತು ಜಿಲ್ಲಾಡಳಿತ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಮಧ್ಯಸ್ಥಿಕೆ ನಡೆಸಿದ್ದರಿಂದ ಡಿಸೆಂಬರ್‌ 3ರಂದು ಕಬ್ಬು ಕಟಾವು ಪ್ರಾರಂಭವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದ್ದ ಕಬ್ಬು ಕಟಾವು ಮಂಗಳವಾರದಿಂದ ಪ್ರಾರಂಭವಾಗಿದೆ.
 
ತಾಲೂಕಿನ ದೇಶನೂರು ಗ್ರಾಮದ ರೈತ ದಾಮೋದರ ಜಮೀನಿನಲ್ಲಿ ಬೆಳೆದಿರುವ ಕಬ್ಬು ಕಟಾವು ವೀಕ್ಷಿಸಿದ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್‌ ಮಾತನಾಡಿ, ತಾಲೂಕಿನಲ್ಲಿ ಒಟ್ಟು 7500ಎಕರೆ ಪ್ರದೇಶದಲ್ಲಿ 2.5ಲಕ್ಷ ಟನ್‌ ಕಬ್ಬು ಬೆಳೆಯಲಾಗಿದೆ. 

ಮಂಗಳವಾರ ಕೋರ್‌ಗ್ರೀನ್‌ ಸಕ್ಕರೆ ಕಾರ್ಖಾನೆ ವತಿಯಿಂದ ಕಬ್ಬು ಕಟಾವು ಮಾಡುವ ಕಾರ್ಮಿಕರ ತಂಡಗಳು ಕಬ್ಬು
ಕಟಾವು ಮಾಡುತ್ತಿದ್ದು, ರೈತರು ಬೆಳೆದ ಕಬ್ಬು ಜೇಷ್ಠತಾ ಆಧಾರದಲ್ಲಿ ಕಟಾವು ಮಾಡಲಾಗುತ್ತದೆ ಎಂದು ತಿಳಿಸಿದರು.
 
ಡಿಸೆಂಬರ್‌ ತಿಂಗಳಲ್ಲಿ 450 ರೈತರ ಹೊಲದಲ್ಲಿ ಬೆಳೆದ 11 ಸಾವಿರ ಟನ್‌ ಕಬ್ಬು ಕಟಾವು ಮಾಡುವ ಗುರಿ ಹೊಂದಲಾಗಿದೆ. ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಯವರು ಹೆಚ್ಚಿನ ಸಾಗಾಣಿಕೆ ವೆಚ್ಚ ನೀಡುವುದಾಗಿ
ಒಪ್ಪಿಕೊಂಡಿದ್ದು, ಬಾಕಿ ಹಣವನ್ನು ನೀಡದಿದ್ದರೆ ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಬಾಕಿ ಹಣವನ್ನು ರೈತರಿಗೆ ಕೊಡಿಸುವುದಾಗಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ರೈತರಿಗೆ ಭರವಸೆ ನೀಡಿದ್ದಾರೆ. ಆದ್ದರಿಂದ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ರೈತ ದಾಮೋದರ್‌ ಮಾತನಾಡಿ, ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಯವರಿಂದ ಹೆಚ್ಚುವರಿಯಾಗಿ ಸಾಗಾಣಿಕೆ ವೆಚ್ಚ ಕೊಡಿಸಬೇಕು. ಕಾರ್ಖಾನೆಗಳಿಗೆ ನೀಡಿದ ಕಬ್ಬಿನ ಹಣ ಶೀಘ್ರವಾಗಿ ಪಾವತಿಯಾಗುವಂತೆ, ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಬಾಕಿ ಹಣವನ್ನು ಕೊಡಿಸುವಂತೆ ಒತ್ತಾಯಿಸಿದರು.

ರೈತ ಮುಖಂಡ ಮೋಹನ್‌ಕುಮಾರ್‌ ಮಾತನಾಡಿ, ರೈತರ ಜಮೀನಿನಲ್ಲಿ ಕಟಾವು ಮಾಡಿದ ಕಬ್ಬನ್ನು ಲಾರಿಗಳಲ್ಲಿ ಸಾಗಿಸಲು ರೈತರು ಜಮೀನಿನಿಂದ ಟ್ರ್ಯಾಕ್ಟರ್‌ಗಳಲ್ಲಿ ಕಬ್ಬನ್ನು ತಂದು ಮುಖ್ಯ ರಸ್ತೆಯಲ್ಲಿ ನಿಂತಿರುವ ಲಾರಿಗಳಿಗೆ ನೀಡಬೇಕಾಗಿರುವುದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತದೆ. ಆದ್ದರಿಂದ ಕಾರ್ಖಾನೆಯವರೇ ರೈತರ ಜಮೀನುಗಳಿಂದ ಕಬ್ಬನ್ನು ಸಾಗಾಣಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ದಯಾನಂದ್‌ಪಾಟೀಲ್‌, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಬಿ.ಆರ್‌
.ಪಾಲಾಕ್ಷಿಗೌಡ, ಕೃಷಿ ಅಧಿಕಾರಿಗಳಾದ ಗರ್ಜೆಪ್ಪ, ಸುಬಾನ್‌, ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ರೂಪೇಶ್‌ ಕುಮಾರ್‌, ಯಾದಗಿರಿ ಕೋರ್‌ಗ್ರೀನ್‌ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹಿರೇಮಠ…, ಕಬ್ಬು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಗೌಸ್‌ಸಾಬ್‌, ರೈತ ಮುಖಂಡ ರೋಫ್‌ಸಾಬ್‌ ಇದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.