ಪ್ರತಿನಿತ್ಯ ಬಸ್‌ ಕಾಯೋದೇ ವಿದ್ಯಾರ್ಥಿಗಳ ಕಾಯಕ!

ಶಾಲಾ-ಕಾಲೇಜ್‌ಗೆ ತೆರಳಲು ಸಮಯಕ್ಕೆ ಸಾರಿಗೆ ಇಲ್ಲ ಪ್ರತಿಭಟನೆ ಮಾಡಿದರೂ ಪ್ರಯೋಜನವಿಲ್ಲ

Team Udayavani, Sep 2, 2019, 1:26 PM IST

ballary-tdy-2

ಕುರುಗೋಡು: ಪಟ್ಟಣದ ಮುಖ್ಯವೃತ್ತದಲ್ಲಿ ಬಸ್‌ ಹತ್ತಲು ಮುಗಿಬಿದ್ದಿರುವ ಶಾಲಾ-ಕಾಲೇಜು ವಿದ್ಯಾರ್ಥಿಗಳು.

ಕುರುಗೋಡು: ಪಟ್ಟಣದಲ್ಲಿ ಡಿಪೋ ಉದ್ಘಾಟನೆಯಾಗಿ ಒಂದು ವರ್ಷವಾದರೂ ಸರಿಯಾಗಿ ಬಸ್‌ ಬರದಿರುವುದರಿಂದ ದೂರದ ಗ್ರಾಮಗಳಿಂದ ನಿತ್ಯ ಬೆಳಗ್ಗೆ ಮತ್ತು ಸಂಜೆ ಶಾಲಾ-ಕಾಲೇಜುಗಳಿಗೆ ಹೊರಡುವ ವಿದ್ಯಾರ್ಥಿಗಳು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ.

ಬೆಳಗ್ಗೆ ಪಟ್ಟಣದಿಂದ ಬಳ್ಳಾರಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ತಕ್ಕಂತೆ ಬಸ್‌ ವ್ಯವಸ್ಥೆ ಇಲ್ಲದೇ ಇರುವುದರಿಂದ ಗಂಟೆಗಟ್ಟಲೇ ಮುಖ್ಯವೃತ್ತದಲ್ಲಿ ನಿಂತು ಬಸ್‌ ಕಾಯುವಂತಾಗಿದೆ. ಅಪರೂಪಕ್ಕೆ ಬರುವ ಬಸ್‌ಗಳಿಗೆ ಕುರಿ ಹಿಂಡಿನಂತೆ ಮುಗಿಬಿದ್ದು ಡೋರ್‌ನಲ್ಲಿ ನಿಂತು ವಿದ್ಯಾರ್ಥಿಗಳು ಪ್ರಯಾಣಿಸಬೇಕಾಗಿದೆ.

ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲಾಗಿತ್ತಿಲ್ಲ. ಡಿಪೋದಲ್ಲಿ ವಾರ್ಷಿಕ ಬಸ್‌ ಪಾಸ್‌ ವ್ಯವಸ್ಥೆ ಮಾಡಿಸಿದ್ದರೂ ದುಡ್ಡು ಕೊಟ್ಟು ಟಾಟಾ ಏಸ್‌ಗಳಲ್ಲಿ ಪ್ರಯಾಣಿಸಿಬೇಕಾದ ಅನಿವಾರ್ಯತೆ ಉಂಟಾಗಿದೆ.

ವಿದ್ಯಾರ್ಥಿಗಳ ನಿರೀಕ್ಷೆ ಹುಸಿ: ವರ್ಷದ ಹಿಂದೆ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಘಟಕವನ್ನು ಆಗಿನ ಕಾಂಗ್ರೆಸ್‌ ಸರ್ಕಾರದ ರಾಜ್ಯಸಾರಿಗೆ ಸಚಿವ ಎಚ್ಎಂ.ರೇವಣ್ಣ ಉದ್ಘಾಟಿಸಿದ್ದರು. ಆಗ ಜನರಲ್ಲಿ ಹೊಸ ಬಸ್‌ಗಳು ಬರುತ್ತವೆ ಮತ್ತು ಬಸ್‌ಗಳ ಸಂಖ್ಯೆ ಹೆಚ್ಚುತ್ತದೆ ಎಂಬ ಆಸೆ ಚಿಗುರಿತ್ತು, ಅದರೆ ಅದೇ ಪರಿಸ್ಥಿತಿ ಇನ್ನೂ ಮುಂದುವರೆದಿದ್ದು ಪಟ್ಟಣದಲ್ಲಿ ಡಿಪೋ ಇದ್ರೂ ಇಲ್ಲದಂತಾಗಿದೆ.

ಪ್ರತಿಭಟನೆಗಳಿಗೆ ದೊರಕದ ಸ್ಪಂದನೆ: ಇನ್ನೂ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಅನೇಕ ಬಾರಿ ಶಾಲಾ-ಕಾಲೇಜಿನ ಪಟ್ಟಣ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರೂ ಇಂದಿನವರೆಗೂ ಅದೇ ಪರಿಸ್ಥಿತಿ ಮುಂದುವರೆದಿದೆ.

ಹಳ್ಳಿ ಮತ್ತು ಗ್ರಾಮಗಳಿಂದ ಪಟ್ಟಣಕ್ಕೆ ನಿತ್ಯ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದೇವೆ. ಸರಿಯಾದ ಸಮಯಕ್ಕೆ ಬಸ್‌ ಇಲ್ಲದಾಗಿದೆ. ಇದರಿಂದ ತರಗತಿಗಳು ಮಿಸ್‌ ಆಗುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆ ಅಗುತ್ತಿದೆ. ಸಂಜೆ ಕೂಡ ಶಾಲೆ ಮುಗಿಸಿಕೊಂಡು ಮನೆಗೆ ಹೋಗಲು ಬಸ್‌ ವ್ಯವಸ್ಥೆ ಇಲ್ಲ. ಇದರಿಂದ ಮಹಿಳೆಯರಿಗೆ ತುಂಬ ತೊಂದರೆ. ಇದರ ಬಗ್ಗೆ ಅನೇಕ ಬಾರಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ.•ವಿದ್ಯಾರ್ಥಿ

•ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.