ತರಕಾರಿ ಮಾರುಕಟ್ಟೆಗೆ ಸೌಕರ್ಯ ಮರೀಚಿಕೆ

­ಕೊಟ್ಟೂರು ತಾಲೂಕು ಆದ್ರೂ ತರಕಾರಿ ಮಾರ್ಕೆಟ್‌ ಇಲ್ಲ; ­ಕೆಸರು ಮಧ್ಯದಲ್ಲೇ ತರಕಾರಿ ಮಾರಾಟ

Team Udayavani, Jul 22, 2022, 4:58 PM IST

25

ಕೊಟ್ಟೂರು: ಪಟ್ಟಣದ ತೇರು ಬಯಲಿನಲ್ಲಿ ತರಕಾರಿ ಸಂತೆ ನಡೆಯುತ್ತಿದೆ. ಇಲ್ಲಿಗೆ ತಾಲೂಕಿನ ಸುತ್ತಮುತ್ತಲಿನ ರೈತರು ತಾವು ಬೆಳೆದ ತರಕಾರಿ ಮಾರಾಟ ಮಾಡಲು ಬರುತ್ತಾರೆ. ಆದರೆ ಸಮರ್ಪಕ ಸೌಕರ್ಯ ಇಲ್ಲದೆ ರೈತರು ಹಾಗೂ ಗ್ರಾಹಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ತೇರು ಬಯಲು ಪ್ರದೇಶದಲ್ಲಿರುವ ತರಕಾರಿ ಮಾರುಕಟ್ಟೆ ಮಳೆ ಬಂದರೆ ಸಾಕು ಈ ಪ್ರದೇಶವೆಲ್ಲ ಕೆಸರುಗದ್ದೆಯಂತೆ ಆಗುತ್ತದೆ. ರೈತರು ತಾವು ತಂದ ಬೆಳೆಯು ಸರಿಯಾದ ಬೆಲೆ ಇಲ್ಲದೆ ಒಂದು ಕಡೆ ಮತ್ತು ಕೆಸರು ಮಧ್ಯದಲ್ಲೇ ನಿಂತು ತಮ್ಮ ತರಕಾರಿ ಮಾರುವ ಸ್ಥಿತಿ ನಿರ್ಮಾಣವಾಗಿದೆ.

ವ್ಯಾಪಾರಸ್ಥರು ಮತ್ತು ರೈತರು ಬೀದಿ ವ್ಯಾಪಾರಿಗಳು ಗೋಳು ಕೇಳುವವರು ಯಾರು ಇಲ್ಲದಂತಾಗಿದೆ. ಪಟ್ಟಣ ಪಂಚಾಯತಿ ಒದಗಿಸಬೇಕಾದ ಕನಿಷ್ಟ ಮೂಲ ಸೌಕರ್ಯ ಸಹ ನೀಡುತ್ತಿಲ್ಲ. ಹೀಗಾದರೆ ನಮ್ಮ ಸಮಸ್ಯೆಗಳನ್ನು ಬಗೆಹರಿಸುವವರು ಯಾರು? ತರಕಾರಿ ಮಾರುಕಟ್ಟೆಗೆ ಸ್ಥಳ ನಿಯೋಜನೆ ಮಾಡಿಕೊಡುತ್ತೇವೆ ಎಂದು ಸ್ಥಳೀಯ ಶಾಸಕರು ಭರವಸೆ ನೀಡುತ್ತಾರೆ. ಇಲ್ಲಿತನಕ ಸೂಕ್ತ ತರಕಾರಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಕೊಟ್ಟಿಲ್ಲ. ನಾವು ಪ್ರತಿದಿನ ನಿತ್ಯ ಕೆಸರು ಗದ್ದೆಯಲ್ಲಿ ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ತರಕಾರಿ ಮಾರಾಟಗಾರರು ಹಾಗೂ ರೈತರು.

ಖಾಸಗಿ ಬಸ್‌ ನಿಲ್ದಾಣ ಹಾಗೂ ಸಂತೆ ಮಾರುಕಟ್ಟೆ ಸೇರಿ ಒಂದೇ ಜಾಗದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಮಳೆ ಬಂದರೆ ಈ ಪ್ರದೇಶವು ಕೆಸರು ಗದ್ದೆಯಂತೆ ಆಗುತ್ತದೆ. ತಮ್ಮ ತಮ್ಮ ಊರುಗಳಿಂದ ಬರುವ ಪ್ರಯಾಣಿಕರು ಕೆಸರಿನಲ್ಲೇ ಇಳಿದು ಕೆಸರನಲ್ಲೇ ಬಸ್‌ ಹತ್ತಬೇಕು. ಪಟ್ಟಣದ ಜನತೆಯು ಕೆಸರುಗದ್ದೆ ನೋಡಿ ತರಕಾರಿ ಕೊಂಡೊಯ್ಯಲು ಸಹ ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಒಬ್ಬ ಅಧಿಕಾರಿಗಳಾಗಲಿ, ಜನಪ್ರತಿನಿಧಿ ಗಳಾಗಲಿ ಗಮನ ಹರಿಸುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.

ಕೊಟ್ಟೂರು ತಾಲೂಕು ಆದ್ರೂ ತರಕಾರಿ ಮಾರುಕಟ್ಟೆಗೆ ಸೂಕ್ತ ಜಾಗವಿಲ್ಲ. ಪಟ್ಟಣಕ್ಕೆ ವಿವಿಧ ಹಳ್ಳಿಗಳ ರೈತರು ತಮ್ಮ ತಮ್ಮ ವಾಹನದಲ್ಲಿ ತರಕಾರಿ ಮಾರಾಟ ಮಾಡಲು ಬರುತ್ತಾರೆ. ಆದರೆ ಸಣ್ಣ ಮಳೆ ಬಂದರೆ ಸಾಕು ಕೆಸರಗದ್ದೆಯಂತೆಯಾಗಿ ಈ ಸಂತೆ ಮೈದಾನ ನೀರು ಕೆಸರು ಗದ್ದೆಯಲ್ಲಿ ಮುಳುಗಿರುತ್ತದೆ. ನಾವು ತಂದಿರುವಂತಹ ತರಕಾರಿಗಳನ್ನು ಕೊಂಡೊಯ್ಯಲು ಗ್ರಾಹಕರು ಸಹ ಹಿಂದೇಟು ಹಾಕುತ್ತಿದ್ದಾರೆ. ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳು ಸೂಕ್ತ ತರಕಾರಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಕೊಡಬೇಕು. –ತರಕಾರಿ ಬೆಳೆಗಾರ.‌

ಸೂಕ್ತ ತರಕಾರಿ ಮಾರುಕಟ್ಟೆ ಕಲ್ಪಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗನೆ ತಾಲೂಕಲ್ಲಿ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಿಕೊಡುತ್ತೇನೆ. –ಎಸ್‌.ಭೀಮನಾಯ್ಕ, ಶಾಸಕರು

-ರವಿಕುಮಾರ್‌ ಎಂ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.