ಶಿಕ್ಷಣದಿಂದ ಸರ್ವಾಂಗೀಣ ವ್ಯಕ್ತಿತ್ವ
Team Udayavani, Jan 20, 2021, 6:27 PM IST
ಬಳ್ಳಾರಿ: ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಕ್ಕಳಿಗೆ ಕೇವಲ ಮಾಹಿತಿಯನ್ನು ಮಾತ್ರ ನೀಡಿ, ಪರಿಪೂರ್ಣತೆಯ ಕೊರತೆಯನ್ನು ಎದುರಿಸುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ| ತಳವಾರ ಸಾಬಣ್ಣ ಹೇಳಿದರು.
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ವಿವೇಕ ವೇದಿಕೆ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ಕುರಿತಾದ ಸ್ವಾಮಿ ವಿವೇಕಾನಂದ ಮತ್ತು ಮಹಾತ್ಮಾ ಗಾಂಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ:ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲು ಸಿಕ್ಕೇ ಸಿಗುತ್ತೆ
ಶಿಕ್ಷಣ ಪದ್ಧತಿಯಲ್ಲಿ ಇಂದು ಮೌಲ್ಯಗಳು ಕುಸಿಯುತ್ತಿವೆ. ಇಂತಹ ಶಿಕ್ಷಣ ಪದ್ಧತಿಯನ್ನು ಬದಲಿಸಬೇಕಿದೆ. ಈ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಸಂಸ್ಕೃತಿಯನ್ನು ಕಳೆದು ಕೊಳ್ಳುತ್ತಿದ್ದೇವೆ. ವಿದೇಶಿ ಶಿಕ್ಷಣ ಪದ್ಧತಿಯಿಂದ ನಾವು ಶಿಕ್ಷಿತರಾದರೆ ಅದು ಗುಲಾಮಿ ಪದ್ಧತಿ ರೂಢಿಗತ ಮಾಡುತ್ತದೆ ಎಂಬುದು ಸ್ವಾಮಿ ವಿವೇಕಾನಂದರ ಆಶಯವಾಗಿತ್ತು, ಮಾತೃ ಭಾಷೆಯ ಕಡ್ಡಾಯ ಶಿಕ್ಷಣ, ಆಂತರಿಕ ಸ್ವಾವಲಂಬನೆ ಮತ್ತು ಜಾತ್ಯಾತೀತ ವ್ಯವಸ್ಥೆಯ ನಿರ್ಮಾಣದ ಗುರಿ ವಿವೇಕರ ಅಭಿಪ್ರಾಯವಾಗಿತು ಎಂದರು. ಶಿಕ್ಷಣ ಬದುಕಿನ ಗುರಿ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಪೂರಕವಾಗಿರಬೇಕೆಂಬುದು ಮಹಾತ್ಮಾ ಗಾಂಧೀಜಿಯವರ ಆಶಯವಾಗಿತ್ತು. ಗುರುಕುಲ ಪದ್ಧತಿಯು ವ್ಯಕ್ತಿಗಳ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವುದರ ಜತೆಗೆ ಹಲವು ಕ್ಷೇತ್ರಗಳ ಮಾಹಿತಿ ನೀಡುತ್ತಿತ್ತು ಎಂದು ಹೇಳಿದರು.
ವಿವಿ ಕುಲಸಚಿವ ಪ್ರೊ| ಬಿ.ಕೆ. ತುಳಸಿಮಾಲಾ ಅಧ್ಯಕ್ಷತೆ ವಹಿಸಿದ್ದರು. ಮೌಲ್ಯಮಾಪನ ಕುಲಸಚಿವ ಪ್ರೊ| ಶಶಿಕಾಂತ ಉಡಿಕೇರಿ, ಹಣಕಾಸು ಅಧಿ ಕಾರಿ ಡಾ| ಕೆ.ಸಿ.ಪ್ರಶಾಂತ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ| ಜಿ.ಪಿ.ದಿನೇಶ್ ಹಾಗೂ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ದಾವೂದ್ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್ ಉಪಾಯ
ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ಗೆ 1 ವರ್ಷ ಜೈಲು ಶಿಕ್ಷೆ