ನೆಲ್ಕುದ್ರಿ ಗ್ರಾಪಂಗೆ ಗಾಂಧಿ ಗ್ರಾಮ ಗರಿ

ದಾಖಲೆ ನಿರ್ವಹಣೆ-ಉದ್ಯೋಗ ಖಾತ್ರಿಯಲ್ಲಿ ಗ್ರಾಪಂ ಮೇಲುಗೈ

Team Udayavani, Oct 2, 2020, 7:24 PM IST

Ballary-tdy

ಹಗರಿಬೊಮ್ಮನಹಳ್ಳಿ: ಸರಕಾರ ಗ್ರಾಪಂಗಳ ಅಭಿವೃದ್ಧಿ, ದಾಖಲೆಗಳ ನಿರ್ವಹಣೆ ಗುರುತಿಸಿ ಅ.2 ಗಾಂಧಿ  ಜಯಂತಿ ದಿನದಂದು ನೀಡುವ ಗಾಂಧಿ  ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ನೆಲ್ಕುದ್ರಿ ಗ್ರಾಪಂ ಆಯ್ಕೆಯಾಗಿರುವುದು ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಂತಸ ಮನೆ ಮಾಡಿದೆ. ನೂತನ ನೆಲ್ಕುದ್ರಿ ಗ್ರಾಪಂನಲ್ಲಿ ಸ್ವತ್ಛತೆ, ನೈರ್ಮಲ್ಯ, ಕಂದಾಯ ವಸೂಲಿಯಲ್ಲಿ ವಿಶೇಷ ಸಾಧನೆ ಮಾಡಿರುವುದರಿಂದ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಪಂಚಾಯತ್‌ರಾಜ್‌ ಇಲಾಖೆಯ ಎಲ್ಲಾ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ, ಯೋಜನೆಗೆ ಅನುಷ್ಠಾನ, ಸಾರ್ವಜನಿಕರಿಗೆ ಅನುಕೂಲಕಾರಿಯಾಗುವಂತಹ ಕಾಮಗಾರಿ, ಜಮಾಬಂ ಧಿ, ಗ್ರಾಮಸಭೆ, ವಾರ್ಡ್‌ಸಭೆ, ಸಾಮಾನ್ಯಸಭೆಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿರುವ ಹಿನ್ನಲೆಯಲ್ಲಿ ಗ್ರಾಪಂಗೆ ಈ ಗರಿ ಸಿಕ್ಕಿದೆ. ಪಂಚತಂತ್ರ ಅಳವಡಿಕೆ, ಉದ್ಯೋಗ ಖಾತ್ರಿಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ನೀಡಲಾಗಿದೆ. ಸಕಾಲ ಸೇವೆ, ಗ್ರಾಪಂ ಹಣಕಾಸು ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಿರುವುದರಿಂದ ಪ್ರಶಸ್ತಿ ಲಭಿಸಿದೆ.

ಗ್ರಾಪಂವ್ಯಾಪ್ತಿಯ ಕನ್ನಿಹಳ್ಳಿ, ಚಿಮ್ನಳ್ಳಿ, ಹಂಚನಾಳು, ಹಳೇ ನೆಲ್ಕುದ್ರಿ, ಮಸಾರಿ ನೆಲ್ಕುದ್ರಿ, ನೆಲ್ಕುದ್ರಿ-1 ಗ್ರಾಮಗಳಲ್ಲಿ ಚೆಕ್‌ ಡ್ಯಾಂ, ಬದು ನಿರ್ಮಾಣ, ನಮ್ಮ ಹೊಲ ನಮ್ಮ ದಾರಿ, ದನದ ಕೊಟ್ಟಿಗೆ, ಚರಂಡಿ, ಸಿಸಿ ರಸ್ತೆ, ಮೆಟಲಿಂಗ್‌ ರಸ್ತೆಗಳನ್ನು ನಿರ್ಮಾಣ ಮಾಡಿ ಗ್ರಾಪಂನ್ನು ಮುನ್ನೆಲೆಗೆ ತರಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ದಾಳಿಂಬೆ ಬೆಳೆಗೆ ಪ್ರೋತ್ಸಾಹಧನ, ಕೃಷಿಇಲಾಖೆಯಿಂದ ಕೃಷಿಹೊಂಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ. ಕೆರೆ ಹೂಳು ಎತ್ತುವ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗಿದ್ದು, ಅಂತರ್ಜಲ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ಕೂಲಿ ಕಾರ್ಮಿಕರಿಂದಲೇ ಮಾಡಿಸಿ ಯಶಸ್ವಿಯಾಗಿರುವುದು ಪಂಚಾಯ್ತಿಯ ಹೆಮ್ಮೆಯಾಗಿದೆ.

ನೆಲ್ಕುದ್ರಿ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಯಶಸ್ವಿಯಾಗಿದ್ದಾರೆ. ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಸೇರಿ ವಿವಿಧ ವೈಯಕ್ತಿಕ ಕಾಮಗಾರಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂಚಾಯ್ತಿ ಪಿಡಿಒ, ಜನಪ್ರತಿನಿ ಧಿಗಳ ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಗಾಂಧಿ  ಗ್ರಾಮ ಪುರಸ್ಕಾರ ಲಭಿಸಿದೆ. – ಹಾಲಸಿದ್ದೇಶ್‌ ಪೂಜೇರಿ, ತಾಪಂ ಇಒ.

ಗಾಂಧಿ ಗ್ರಾಮ ಪುರಸ್ಕಾರ ಇನ್ನಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಉದ್ಯೋಗ ಖಾತ್ರಿ ಯೋಜನೆಯನ್ನುಸಮರ್ಪಕವಾಗಿ ಜಾರಿಗೊಳಿಸಿ, ಮಾನವ ದಿನಗಳನ್ನು ನೀಡಿ ಸೃಜಿಸಲಾಗಿದೆ. ಪಂಚಾಯ್ತಿಯಎಲ್ಲ ದಾಖಲೆಗಳನ್ನು ಸಮರ್ಪಕವಾಗಿನಿರ್ವಹಿಸುರುವುದರಿಂದ ಪ್ರಶಸ್ತಿ ಸಿಕ್ಕಿದೆ.- ಲಕ್ಷ್ಮಣ, ಪಿಡಿಒ, ನೆಲ್ಕುದ್ರಿ ಗ್ರಾಪಂ.

ನೂತನ ನೆಲ್ಕುದ್ರಿ ಗ್ರಾಪಂನಲ್ಲಿ ಉದ್ಯೋಗ ಖಾತ್ರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಾರೆ. ರೈತರಿಗೆ ಅನುಕೂಲಕಾರಿಯಾಗುವಂತಹ ಕಾಮಗಾರಿಗಳಿಗೆ ಕ್ರಿಯಾಯೋಜನೆ ರೂಪಿಸಿ ಜಾರಿಗೊಳಿಸಿದ್ದಾರೆ. –ಸಿದ್ದಪ್ಪ ಪೂಜಾರ, ಚಿಮ್ನಳ್ಳಿ ಗ್ರಾಮಸ್ಥರು.

 

-ಸುರೇಶ ಯಳಕಪ್ಪನವರ

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.