ನೇಕಾರರ ಅಭಿವೃದ್ದಿಗೆ ಸರ್ಕಾರ ಬದ್ದ

ಸಚಿವ ಬಿ. ಶ್ರೀರಾಮುಲು ಭರವಸೆ

Team Udayavani, Apr 7, 2022, 2:25 PM IST

weavers

ಬಳ್ಳಾರಿ: ನೇಕಾರರ ಸಮಾಜದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಗರದ ಬಿಡಿಎಎ ಫುಟ್ಬಾಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆದ್ಯ ವಚನಕಾರ ನೇಕಾರರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ದಾಸಿಮಯ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೇಕಾರರಿಗೆ ನೇಕಾರ ಸಮ್ಮಾನ್‌ ಯೋಜನೆ ಅಡಿ ನೀಡಲಾಗುತ್ತಿದ್ದ ವಾರ್ಷಿಕ 2 ಸಾವಿರ ಸಹಾಯಧನವನ್ನು 5 ಸಾವಿರಕ್ಕೆ ಹೆಚ್ಚಿಸಲಾಗಿದೆ. ರೇಷ್ಮೆ, ಹತ್ತಿ, ಉಣ್ಣೆ ಮತ್ತು ಇತರೆ ಕೈಮಗ್ಗ ನೇಕಾರರು ಸಹ ಈ ಯೋಜನೆಯ ಲಾಭ ಪಡೆಯಬೇಕು ಎಂದ ಸಚಿವ ರಾಮುಲು, ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಶ್ರಮಿಸುವ ಕೈಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

54,789 ನೇಕಾರರಿಗೆ 10.97 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ರಾಜ್ಯ ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಮೂಲಕ ನೇಕಾರರು ಪಡೆಯುವ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ ಸರ್ಕಾರ ನೀಡಿದೆ. ನೇಕಾರರ ಮಕ್ಕಳ ಶಿಕ್ಷಣ ಉತ್ತೇಜಿಸಲು ವಿದ್ಯಾರ್ಥಿ ವೇತನ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದರು.

ಶ್ರೀ ದೇವರ ದಾಸಿಮಯ್ಯ ಅವರು ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಸಚಿವ ಶ್ರೀರಾಮುಲು ಅವರು ನೇಕಾರರ ಶ್ರಮ ದೊಡ್ಡದು, ರೈತ ಅನ್ನ ಕೊಟ್ಟರೆ ನೇಕಾರ ಮಾನ ಮುಚ್ಚುತ್ತಾನೆ ಎಂದು ಸ್ಮರಿಸಿದರು.

ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾತನಾಡಿ, ನೇಕಾರ ಸಮುದಾಯದವರು ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ದೇವರ ದಾಸಿಮಯ್ಯರವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಪಿ. ಪಾಲಣ್ಣ, ಮೇಯರ್‌ ಎಂ.ರಾಜೇಶ್ವರಿ, ಉಪಮೇಯರ್‌ ಮಾಲನ್‌ ಬಿ, ಜಿಪಂ ಸಿಇಒ ಲಿಂಗಮೂರ್ತಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲು ಅಡಾವತ್‌, ಅಪರ ಜಿಲ್ಲಾಧಿಕಾರಿ ಮಂಜುನಾಥ, ತಹಶೀಲ್ದಾರ್‌ ವಿಶ್ವನಾಥ ಸೇರಿದಂತೆ ನೇಕಾರ ಸಮುದಾಯದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.