ಈರುಳ್ಳಿ ಬಿತ್ತನೆ ಬೀಜ ದರ ಬಲು ದುಬಾರಿ!

ಕಳೆದ ವರ್ಷ 600 ರೂ. ಇದ್ದ ದರ ಈ ಬಾರಿ 1200 ರೂ.ಗೆ ಏರಿಕೆ

Team Udayavani, May 11, 2020, 5:49 PM IST

11-May-28

ಸಾಂದರ್ಭಿಕ ಚಿತ್ರ

ಹಗರಿಬೊಮ್ಮನಹಳ್ಳಿ: ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಅನೇಕ ಸಮಸ್ಯೆಗಳೊಂದಿಗೆ ದಿನದೂಡುತ್ತಿರುವ ರೈತರ ಸಮಸ್ಯೆಗಳಿಗೆ ಟೊಂಕ ಕಟ್ಟಿ ನಿಲ್ಲಬೇಕಾದ ರಾಜ್ಯ ಸರಕಾರ, ಈರುಳ್ಳಿ ಬೆಳೆಗೆ ಉತ್ತಮ ಬೆಲೆ ನೀಡದೆ, ಈರುಳ್ಳಿ ಬೀಜದ ಬೆಲೆಯನ್ನು ಗಗನಕ್ಕೇರಿಸಿ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಬೇಸಿಗೆಯಲ್ಲಿ ಈರುಳ್ಳಿ ಬೆಳೆದವರ ಪಾಡು ಬೀದಿಗೆ ಬಂದಿದೆ.

ಈರುಳ್ಳಿ ಬೆಲೆ ಹಗ್ಗಕ್ಕೆ ಮುಗ್ಗಿನ ಜೋಳ ಎಂಬಂತೆ ಕೇಳಿದ್ದರಿಂದ ಮಾರುಕಟ್ಟೆಯಲ್ಲಿ ಬೆಳೆಗಾರರು ಸುರಿದು ಬರಿಗೈಯಲ್ಲಿ ವಾಪಾಸಾಗಿರುವುದು ಸರಕಾರಕ್ಕೆ ತಿಳಿದಿದೆ. ಆದರೂ ಕೂಡ ಈರುಳ್ಳಿ ಬೀಜವನ್ನು ಸರಕಾರ ಸಬ್ಸಿಡಿಯಲ್ಲಿ ಕೊಡುವ ಬದಲಿ ಹಿಂದಿದ್ದ ರೇಟಿಗಿಂತ ಎರಡರಷ್ಟು ಹೆಚ್ಚಿಸಿ ರೈತರು ಈರುಳ್ಳಿ ತಂಟೆಗೆ ಹೋಗದಂತೆ ಮಾಡಿದೆ.

ಕಂಪನಿ ಬೆನ್ನಿಗೆ ಸರಕಾರ: ಸರಕಾರ ರೈತರ ಹಿತ ಕಾಪಾಡುವ ಬದಲಿ ಈರುಳ್ಳಿ ಸೀಡ್‌ ಕಂಪನಿಗಳ ಅಭಿವೃದ್ಧಿಗೆ ನಿಂತಂತಿದೆ. ದುಬಾರಿ ಈರುಳ್ಳಿ ಬೀಜ ತೆಗೆದುಕೊಳ್ಳಲು ಹಿಂಜರಿಯುತ್ತಿರುವ ರೈತರು ಸರಕಾರದ ಕ್ರಮಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಈರುಳ್ಳಿ ಬೀಜ ದರ ಏರಿಕೆ ರೈತರಿಗೆ ನುಂಗಲಾರದ ತುತ್ತಾಗಿದೆ. ಹೊಲಗಳನ್ನು ಮಾಗಿ ಮಾಡಿಕೊಂಡು ಬಿತ್ತನೆಯ ತರಾತುರಿಯಲ್ಲಿರುವ ಈರುಳ್ಳಿ ಬೆಳೆಗಾರರು ಗೊಂದಲದಲ್ಲಿ ಸಿಕ್ಕಿಕೊಂಡಿದ್ದಾರೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಈರುಳ್ಳಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೊರೊನಾ ಕಾರಣ ನೀಡಿದ ಸರಕಾರ, ಕೊರೊನಾ ಪರಿಸ್ಥಿತಿಯಲ್ಲಿ ಸೀಡ್‌ ಕಂಪನಿಗಳ ಪರವಾಗಿ ನಿಂತಿರುವುದು ಎಷ್ಟರಮಟ್ಟಿಗೆ ಸರಿ ಎನ್ನುವುದು ತಾಲೂಕಿನ ರೈತರ ಪ್ರಶ್ನೆಯಾಗಿದೆ.

ಈರುಳ್ಳಿಗೆ ಬೆಲೆ ಇಲ್ಲದ್ದರಿಂದ ತಿಪ್ಪೆಗೆ ಚೆಲ್ಲಿದ್ದೇವೆ. ಸರಕಾರ ಈರುಳ್ಳಿ ನಷ್ಟ ಬೆಳೆಗಾರರಿಗೆ ಪರಿಹಾರ ನೀಡಿ ಕೈ ತೊಳೆದುಕೊಂಡಿದ್ದಾರೆ. ಈರುಳ್ಳಿ ಬೀಜದ ದರವನ್ನು ಕಂಪನಿಗಳು ಗಗನಕ್ಕೇರಿಸಿದರು ಸರಕಾರ ಜಾಣ ಕುರುಡು ಪ್ರದರ್ಶಿಸುತ್ತಿದೆ. ಸಚಿವರೊಂದಿಗೆ ದೂರವಾಣಿ ಮೂಲಕ ಈರುಳ್ಳಿ ಬೀಜ ದರ ಏರಿಕೆ ಬಗ್ಗೆ ಮಾತನಾಡಿದರೆ ಸೂಕ್ತ ಸ್ಪಂದನೆ ನೀಡಲಿಲ್ಲ. ಕಳೆದ ಬಾರಿ 600 ರೂ.ಗೆ ಸಿಗುತ್ತಿದ್ದ ಈರುಳ್ಳಿ ಬೀಜದ ಪ್ಯಾಕೇಟ್‌ ಸದ್ಯ 1200 ರೂ. ಆಗಿದೆ. ಈವರೆಗೂ ಈರುಳ್ಳಿ ಬೆಲೆ ಕುಸಿತ ಇರುವುದರಿಂದ ಬೆಳೆಗಾರರು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೈನಳ್ಳಿ ಕೊಟ್ರೇಶ,
ಈರುಳ್ಳಿ ಬೆಳೆಗಾರ

ಕಳೆದ ವರ್ಷ ಈರುಳ್ಳಿ ಬೀಜ ಸೀಡ್‌ ಮಾಡುವ ಸಂದರ್ಭದಲ್ಲಿ ಹೆಚ್ಚು ಮಳೆ ಇದ್ದಿದ್ದರಿಂದ ಉತ್ಪಾದನೆ ಕಷ್ಟಕರವಾಗಿತ್ತು. ಈ ಹಿನ್ನೆಲೆಯಲ್ಲಿ ಈರುಳ್ಳಿ ಬೀಜದ ದರ ಏರಿಕೆಯಾಗಿರಬಹುದು. ಕಂಪನಿಯವರಿಂದ ಬೆಲೆ ಏರಿಕೆಯ ಸೂಕ್ತ ಕಾರಣ ತಿಳಿದುಕೊಳ್ಳಲಾಗುವುದು. ಡಾ.ಪರಮೇಶ್ವರಪ್ಪ.
ಸಹಾಯಕ ನಿರ್ದೇಶಕರು,
ತೋಟಗಾರಿಕೆ ಇಲಾಖೆ.

ಸುರೇಶ ಯಳಕಪ್ಪನವರ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.