ಜನವರಿ ಅಂತ್ಯಕ್ಕೆ ಹಂಪಿ ಉತ್ಸವ: ಜೊಲ್ಲೆ

ವಿಜಯನಗರ ಗತವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು.

Team Udayavani, Dec 6, 2022, 6:43 PM IST

ಜನವರಿ ಅಂತ್ಯಕ್ಕೆ ಹಂಪಿ ಉತ್ಸವ: ಜೊಲ್ಲೆ

ಹೊಸಪೇಟೆ: ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಅದ್ಧೂರಿ ಹಂಪಿ ಉತ್ಸವ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದ ಅವರು, ಈ ಮೊದಲು 2023ರ ಜನವರಿ ತಿಂಗಳ 7 ಮತ್ತು 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ. ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು.

ಅದ್ಧೂರಿ ಆಚರಣೆ: ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವ ನಡೆದಿಲ್ಲ. ಈ ಬಾರಿ ಕಳೆದ ಎಲ್ಲ ಹಂಪಿ ಉತ್ಸವಗಳಿಗಿಂತಲೂ ಅದ್ಧೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂಥ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನವರಿ ತಿಂಗಳಾಂತ್ಯಕ್ಕೆ ಯಾವುದೇ ಹಂಪಿ ಉತ್ಸವ ನಡೆಯಲೇಬೇಕು.

ವಿಜಯನಗರ ಗತವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಅನುದಾನ: ಈಗಾಗಲೇ 2021-22ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್‌ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.

2 ಮುಖ್ಯ ವೇದಿಕೆ: ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮುಂದಿನ ವರ್ಷ ನವೆಂಬರ್‌ನಲ್ಲಿ ಹಂಪಿ ಉತ್ಸವ ಹೊಸಪೇಟೆ: ಪ್ರತಿವರ್ಷ ಹಂಪಿ ಉತ್ಸವವನ್ನು ನ. 3, 4 ಮತ್ತು 5 ರಂದು ನಡೆಸಲು ಉದ್ದೇಶಿಸಿದ್ದು
ಈ ಬಾರಿ ಉತ್ಸವದಲ್ಲಿ ದಿನಾಂಕ ಘೋಷಣೆ ಮಾಡಲು ಚಿಂತನೆ ನಡೆದಿದೆ ಎಂದು ಹಜ್‌ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಉತ್ಸವವನ್ನು ನಿಗದಿತ ದಿನಾಂಕದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿ ಹಾಗೂ ಇತರೆ ಅ ಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ವರ್ಷ ಹಂಪಿ ಉತ್ಸವ ನ. 3, 4, 5ರಂದು ನಡೆಸಲು ಚಿಂತನೆ ನಡೆಸಲಾಗಿದೆ. ಈ ಮೊದಲು 2023ರ ಜ.7, 8ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಜ.27, 28 ಮತ್ತು 29ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ.

ಮುಖ್ಯಮಂತ್ರಿಗಳ ಜತೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ್‌ ಜೀರೆ, ವಿಜಯನಗರ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅನೇಕರಿದ್ದರು.

ವಿಜಯನಗರದ ಭವ್ಯತೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಂಪಿ ಉತ್ಸವ ಬಹಳ ಮಹತ್ವದ್ದು. ನೂತನ ಜಿಲ್ಲೆಯಾದ ನಂತರದ ಮೊದಲ ಉತ್ಸವವನ್ನು ಅದ್ಧೂರಿಯಾಗಿ ಆಚರಿಸುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನವರಿ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳ ದಿನಾಂಕವನ್ನು ತೆಗೆದುಕೊಂಡು ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಜಿಲ್ಲಾಧಿಕಾರಿ
ವೆಂಕಟೇಶ್‌ ಟಿ, ಪೊಲೀಷ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಸಂಸದ ದೇವೇಂದ್ರಪ್ಪ ಹಾಗೂ ನಗರಸಭೆ ಅಧ್ಯಕ್ಷ ಸುಂಕಮ್ಮ ಇನ್ನಿತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.