ಹಂಪಿ ಯುವಕನ ಜೊತೆ ಸಪ್ತಪದಿ ತುಳಿದ ಬೆಲ್ಜಿಯಂ ಕನ್ಯೆ: 3 ವರ್ಷದ ಹಿಂದೆ ಪ್ರೀತಿ, ವಿದೇಶ ಪ್ರವಾಸ

ಮಾರ್ಗದರ್ಶಕನಾಗಿದ್ದ ಅನಂತರಾಜು

Team Udayavani, Nov 26, 2022, 7:00 AM IST

ಹಂಪಿ ಯುವಕನ ಜೊತೆ ಸಪ್ತಪದಿ ತುಳಿದ ಬೆಲ್ಜಿಯಂ ಕನ್ಯೆ: 3 ವರ್ಷದ ಹಿಂದೆ ಪ್ರೀತಿ, ವಿದೇಶ ಪ್ರವಾಸ

ಹೊಸಪೇಟೆ: ವಿದೇಶಿ ಯುವತಿಯೊಬ್ಬಳು ಹಂಪಿ ಯುವಕನೊಂದಿಗೆ ಶುಕ್ರವಾರ ಸಪ್ತಪದಿ ತುಳಿದಿದ್ದಾರೆ.

ಹೌದು, ವಿಶ್ವವಿಖ್ಯಾತ ಹಂಪಿಯಲ್ಲಿ ಮಾರ್ಗದರ್ಶಕ ಹಾಗೂ ಆಟೋ ಚಾಲಕನಾಗಿ ಕೆಲಸ ಮಾಡುತ್ತಿರುವ ಅನಂತರಾಜ ಅವರನ್ನು ಬೆಲ್ಜಿಯಂನ ಕೆಮಿಲ್‌ ಎಂಬ ಯುವತಿ ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮದುವೆಯಾಗಿದ್ದಾರೆ.

ಹಂಪಿ ಜನತಾ ಪ್ಲಾಟಿನ ನಿವಾಸಿ ರೇಣುಕಮ್ಮ, ದಿ|| ಅಂಜಿನಪ್ಪ ಅವರ ಪುತ್ರ ಅನಂತರಾಜು, ಬೆಲ್ಜಿಯಂನ ಕೆಮಿಲ್‌ಳ ಪ್ರೇಮ ಪಾಶಕ್ಕೆ ಒಳಗಾಗಿದ್ದ. ಇವರಿಬ್ಬರೂ ಸೇರಿ ವಿದೇಶ ಪ್ರವಾಸ ಕೂಡ ಮಾಡಿದ್ದರು. ಇದೀಗ ಅವರಿಗೆ ಮದುವೆ ಮಾಡಿಸುವ ಮೂಲಕ ಇಬ್ಬರ ಪ್ರೇಮಕ್ಕೆ ಅವರ ಕುಟುಂಬಸ್ಥರು ಅಧಿಕೃತ ಮೊಹರು ಒತ್ತಿದ್ದಾರೆ.

ಹಂಪಿಗೆ ಬಂದಾಗ ಪ್ರೇಮಾಂಕುರ: ಮೂರು ವರ್ಷದ ಹಿಂದೆ ಬೆಲ್ಜಿಯಂ ದೇಶದಿಂದ ಹಂಪಿಗೆ ಆಗಮಿಸಿದ್ದ ಮರಿಯನ್ನೇ ಜೀಮ್‌ ಫಿಲಿಪ್ಪೆ ಅವರ ಪರಿವಾರಕ್ಕೆ ಹಂಪಿಯಲ್ಲಿ ಆಟೋ ಚಾಲಕ ಅನಂತರಾಜುವಿನ ಪರಿಚಯವಾಗಿದೆ. ಅನಂತರಾಜು ಪ್ರಾಮಾಣಿಕ ಆಟೋ ಚಾಲಕ ಹಾಗೂ ಉತ್ತಮ ಮಾರ್ಗದರ್ಶಕನಾಗಿಯೂ ಅವರ ಮನಗೆದ್ದಿದ್ದಾನೆ. ಮರಿಯನ್ನೇ ಶ್ರೀ ಜೀಮ್‌ ಫಿಲಿಪ್ಪೆ ಅವರ ತೃತೀಯ ಸುಪುತ್ರಿ ಕೆಮಿಲ್‌ ಹಂಪಿಯ ನಿಸರ್ಗದ ಸೊಬಗಿಗೆ ಮನಸೋತಿದ್ದಾರೆ. ಕೆಮಿಲ್‌ ಅವರ ಪರಿವಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಅನಂತರಾಜುವಿನ ಮೇಲೆ ಯುವತಿ ಕೆಮಿಲ್‌ ಪ್ರೇಮ ಅರಳಿದೆ.

ಮೂರು ವರ್ಷದ ಹಿಂದೆಯೇ ಪ್ರೇಮ ವಿವಾಹವಾಗಬೇಕಿದ್ದ ಜೋಡಿಗೆ ಕೊರೊನಾ ತಡೆಯೊಡ್ಡಿತ್ತು. ಕೆಮಿಲ್‌ ಕುಟುಂಬದವರಿಗೆ ಮಗಳ ವಿವಾಹವನ್ನು ಬೆಲ್ಜಿಯಂ ದೇಶದಲ್ಲಿ ಅದ್ಧೂರಿಯಿಂದ ಮಾಡಬೇಕೆಂಬ ಮನಸ್ಸಿದ್ದರೂ ಹಿಂದೂ ಸಂಪ್ರದಾಯದಂತೆ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಸರಳವಾಗಿ ಮಾಡಿಕೊಳ್ಳಬೇಕೆಂಬ ಯುವಕನ ಆಸೆಗೆ ಸಹಮತ ಸೂಚಿಸಿ, 50ಕ್ಕೂ ಅಧಿಕ ಜನ ಬೆಲ್ಜಿಯಂ ದೇಶದಿಂದ ಆಗಮಿಸಿ ಗುರುವಾರ ಸಂಜೆ ಕುಟುಂಬ ಪರಿವಾರದೊಂದಿಗೆ ನಿಶ್ಚಿತಾರ್ಥ (ಎಂಗೇಜ್ಮೆಂಟ್) ನೆರವೇರಿಸಿದ್ದರು. ನ.25ರಂದು ಶುಕ್ರವಾರ ಬೆಳಗ್ಗೆ 8.30ರಿಂದ 9.30ರವರೆಗೆ ಸಲ್ಲುವ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಮಾಂಗಲ್ಯಧಾರಣೆ ನಡೆದಿದೆ.

ಹಿಂದೂ ಸಂಪ್ರದಾಯದಂತೆ ಮದುವೆ: ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿದೆ. ಸಪ್ತಪದಿ ತುಳಿಯುವುದರಿಂದ ಹಿಡಿದು ಮಾಂಗಲ್ಯಧಾರಣೆ, ಅರುಂಧತಿ ನಕ್ಷತ್ರ ನೋಡುವುದೂ ಸೇರಿ ಎಲ್ಲವೂ ಹಿಂದೂ ಸಂಪ್ರದಾಯದಂತೆ ನಡೆದಿದೆ.

ಕಳೆದ ಮೂರು ವರ್ಷಗಳ ಹಿಂದೆ ನಮ್ಮಬ್ಬರಿಗೂ ಪ್ರೇಮಾಂಕುರವಾಗಿತ್ತು. ಇಬ್ಬರೂ ಸಹ ನಮ್ಮ ಮನೆ ಹಿರಿಯರ ಮನವೊಲಿಸಿ ಇದೀಗ ಮದುವೆಯಾಗಿದ್ದೇವೆ. ಸುಖವಾಗಿ ಬಾಳಲು ಎಲ್ಲರೂ ಹರಸಲಿ ಎನ್ನುವುದು ನನ್ನ ಪ್ರಾರ್ಥನೆ.
-ಅನಂತರಾಜು, ವಿದೇಶಿ ಯುವತಿ ವರಿಸಿದಾತ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.