ದೆಹಲಿ ಗಣರಾಜ್ಯೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಹಂಪಿ ಸ್ಮಾರಕ

ಜ. 26ರ ಗಣರಾಜ್ಯೋತ್ಸವದಂದು ನವದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರಗಳ ಮೆರವಣಿಗೆಯಲ್ಲಿ ಹಂಪಿ ಸ್ಮಾರಕಗಳು ಪ್ರದರ್ಶನಗೊಳ್ಳಲಿವೆ

Team Udayavani, Jan 24, 2021, 4:52 PM IST

Hampi

ಬಳ್ಳಾರಿ:  ದೇಶದ ರಾಜಧಾನಿ ನವದೆಹಲಿಯಲ್ಲಿ ಜ. 26ರ ಗಣರಾಜ್ಯೋತ್ಸವದಂದು ನಡೆಯುವ ಸ್ತಬ್ಧ ಚಿತ್ರಗಳ ಮೆರವಣಿಗೆಯಲ್ಲಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ, ವಿಶ್ವದ ನೋಡಲೇಬೇಕಾದ ಪ್ರವಾಸಿ ತಾಣಗಳಲ್ಲಿ ಎರಡನೇ ಸ್ಥಾನಗಳಿಸಿರುವ ಹಂಪಿ ಸ್ಮಾರಕಗಳು ಪ್ರದರ್ಶನಗೊಳ್ಳಲಿವೆ. ಹಂಪಿ ಕೇಂದ್ರ ಬಿಂದು ಎನಿಸಿರುವ ಉಗ್ರ ನರಸಿಂಹ, ಭಗವಾನ್‌ ಹನುಮನ ಜನ್ಮ ಸ್ಥಳ ಎಂದು ಹೇಳಲಾದ ಅಂಜನಾದ್ರಿ ಬೆಟ್ಟ, ವಿಜಯನಗರ ಸಾಮ್ರಾಜ್ಯದ ಸರ್ವಶ್ರೇಷ್ಠ ಸಾಮ್ರಾಟ ಶ್ರೀಕೃಷ್ಣದೇವರಾಯರ 1509 ರಲ್ಲಿ ನಡೆದ ಪಟ್ಟಾಭಿಷೇಕ ಸಮಾರಂಭ ಹಾಗೂ ಹಜಾರರಾಮ ದೇವಾಲಯದ ಭಿತ್ತಿಚಿತ್ರಗಳನ್ನು ಈ ಸ್ತಬ್ಧ ಚಿತ್ರವು ಬಿಂಬಿಸುತ್ತಿದ್ದು, ಮೆರವಣಿಗೆಯಲ್ಲಿ ಪ್ರದರ್ಶನಗೊಂಡು ಜನಾಕರ್ಷಣೆಗೊಳ್ಳಲಿವೆ.

ಓದಿ : ಘಾಟ್‌ಕೋಪರ್‌ ಶ್ರೀ ಭವಾನಿ ಶನೀಶ್ವರ ದೇವಸ್ಥಾನ: ವಾರ್ಷಿಕ ಮಹಾಪೂಜೆ
ಕರ್ನಾಟಕದ ಡೆಕ್ಕನ್‌ ಪ್ರಸ್ಥಭೂಮಿಯ ತುಂಗಭದ್ರಾ ನದಿಯ ದಡದಲ್ಲಿ ಪ್ರವರ್ಧಮಾನಕ್ಕೆ ಬಂದ ವಿಜಯನಗರ ಸಾಮ್ರಾಜ್ಯದ ರಾಜಧಾನಿ ವಿಜಯನಗರ ಸಂಗಮ ರಾಜವಂಶದ ಹರಿಹರ-1 ಮತ್ತು ಬುಕ್ಕರಾಯ-1 ಇಬ್ಬರು ಸೋದರರು ಈ ಸಾಮ್ರಾಜ್ಯವನ್ನು ಸ್ಥಾಪಿಸಿದರು. ಸಂಗಮ ವಂಶದವರು ತಮ್ಮ ಆಡಳಿತದ ಉತ್ತುಂಗದ ಅವಧಿಯಲ್ಲಿ ದಕ್ಷಿಣ ಭಾರತದ ಬಹುತೇಕ ಕುಟುಂಬಗಳು ಹಾಗೂ ಡೆಕ್ಕನ್‌ ಪ್ರಾಂತ್ಯದ ಸುಲ್ತಾನರನ್ನು ತಮ್ಮ ಅ ಧೀನಕ್ಕೆ ತೆಗೆದುಕೊಂಡಿದ್ದರು.

ದಕ್ಷಿಣ ಭಾರತದ ಎಲ್ಲೆಡೆ ಬಹುತೇಕ ಸ್ಮಾರಕಗಳಿರುವ, ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವತಿಯಿಂದ ವಿಶ್ವ ಪರಂಪರೆಯ ಸ್ಥಳ ಎಂದು ಗುರುತಿಸಲ್ಪಟ್ಟಿರುವ, ಅತ್ಯಂತ ಪ್ರಸಿದ್ಧವಾದ ಹಾಗೂ ಇದೀಗ ಅವಶೇಷಗಳ ತಾಣವಾಗಿರುವ ಹಂಪಿ ಈ ಸಾಮ್ರಾಜ್ಯದ ಪರಂಪರೆಯಾಗಿದೆ. ಐರೋಪ್ಯ, ಪರ್ಷಿಯಾ ಪ್ರವಾಸಿಗರ ಕಥನಗಳು, ಪುರಾತತ್ವ ಉತ್ಪನ್ನನಗಳು ವಿಜಯನಗರ ಸಾಮ್ರಾಜ್ಯದ ಶಕ್ತಿ ಮತ್ತು ಶ್ರೀಮಂತಿಕೆಯನ್ನು ಬಹಿರಂಗಪಡಿಸುತ್ತವೆ. ಪರ್ಷಿಯಾ ಮತ್ತು ಪೋರ್ಚುಗಲ್‌ನಿಂದ ವ್ಯಾಪಾರಸ್ಥರನ್ನು ಆಕರ್ಷಿಸುತ್ತಿದ್ದ ಹಂಪಿ-ವಿಜಯನಗರವು, 1500 ನೇ ಇಸವಿಯಲ್ಲಿ ಬೀಜಿಂಗ್‌ನ
ನಂತರ, ವಿಶ್ವದ ಅತೀ ದೊಡ್ಡ ಹಾಗೂ ಭಾರತದ ಅತ್ಯಂತ ಸಿರಿವಂತ ಮಧ್ಯ ಕಾಲೀನ ಯುಗದ ನಗರಿಯಾಗಿತ್ತು ಎಂದು ಇತಿಹಾಸ ತಿಳಿಸುತ್ತದೆ.

ಓದಿ : ಬಿಎಸ್‌ವೈ-ಈಶ್ವರಪ್ಪ ರಾಜೀನಾಮೆ ನೀಡಲಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.