ಹರಪನಹಳ್ಳಿ ಈಗ ಬಯಲು ಶೌಚ ಮುಕ್ತ


Team Udayavani, Mar 29, 2019, 1:38 PM IST

bell
ಹರಪನಹಳ್ಳಿ: ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಶೌಚ ನಿರ್ಮಾಣದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ್ದು, ಹರಪನಹಳ್ಳಿ ಪಟ್ಟಣವನ್ನು ಸಂಪೂರ್ಣ ಬಯಲು ಶೌಚ ಮುಕ್ತ ಪಟ್ಟಣವನ್ನಾಗಿ ಘೋಷಿಸಿದೆ. ಭಾರತೀಯ ಗುಣಮಟ್ಟ ನಿಯಂತ್ರಣ ಮಂಡಳಿಯಿಂದ ಬಯಲು ಶೌಚ ಮುಕ್ತ ಪಟ್ಟಣ ಪ್ರಮಾಣ ಪತ್ರ ಪಡೆಯುವ ಮೂಲಕ ಹರಪನಹಳ್ಳಿ ಪುರಸಭೆ ತನ್ನ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ.
ಗ್ರಾಮೀಣ ಪ್ರದೇಶದಲ್ಲಿ ರೂಢಿಯಲ್ಲಿರುವ ಬಯಲಿನಲ್ಲಿ ಮಲ ವಿಸರ್ಜನೆ ಮಾಡುವ ಪದ್ಧತಿಯನ್ನು ತೊಲಗಿಸಲು ಹಾಗೂ ಗ್ರಾಮೀಣ ಸಮುದಾಯದಲ್ಲಿ ಸ್ವತ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಗ್ರಾಮೀಣ ಜನರ ಜೀವನ ಪದ್ಧತಿಯನ್ನು ಸುಧಾರಿಸುವ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದಿದ್ದ ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಹರಪನಹಳ್ಳಿ ಪಟ್ಟಣ ಬಯಲು ಶೌಚಾಲಯ ಮುಕ್ತ ಪಟ್ಟಣವಾಗಿ ರೂಪುಗೊಂಡಿದೆ. ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸ್ವತ್ಛತಾ ಪಟ್ಟಣ ಪ್ರಮಾಣ ಕೂಡ ಲಭಿಸಿದೆ.
ಪಟ್ಟಣದ ಒಟ್ಟು 27 ವಾರ್ಡ್‌ಗಳಲ್ಲಿ ಸರ್ಕಾರ ಪಟ್ಟಣದಲ್ಲಿ 2759 ಶೌಚಾಲಯ ನಿರ್ಮಾಣದ ಗುರಿ ನೀಡಲಾಗಿತ್ತು. ಕಳೆದ ಜನವರಿ ತಿಂಗಳಲ್ಲಿಯೇ ಈ ಗುರಿಯನ್ನು ತಲುಪಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಪ್ರತಿ ಫಲಾನುಭವಿಗೆ 5333 ರೂ. ಅನುದಾನ ಹಾಗೂ ಪುರಸಭೆ ಎಸ್‌ಎಫ್‌ಸಿ ಮತ್ತು ಇತರೆ ನಿಧಿಯಲ್ಲಿ 9667 ರೂ. ಸೇರಿ ಒಟ್ಟು 15 ಸಾವಿರ ರೂ. ಪ್ರತಿ ಫಲಾನುಭವಿಗಳಿಗೆ ವಿತರಿಸಲಾಗಿದೆ.
ಪುರಸಭೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರಂತರ ಪರಿಶ್ರಮದ ಫಲವಾಗಿ ಪ್ರಶಸ್ತಿ ದೊರಕಿದೆ. ಭಾರತೀಯ ಗುಣಮಟ್ಟ ನಿಯಂತ್ರಣ ಮಂಡಳಿಯು ಸದ್ಯ ನೀಡಿರುವ ಪ್ರಮಾಣ ಪತ್ರ 6 ತಿಂಗಳ ಕಲಾವಧಿ ಹೊಂದಿದೆ.
ಭಾರತೀಯ ಗುಣಮಟ್ಟ ನಿಯಂತ್ರಣ ಬಯಲು ಶೌಚಾಲಯ ಮುಕ್ತ ಸ್ಥಿತಿ ಪರಿಶೀಲಿಸಲು ಪಟ್ಟಣಕ್ಕೆ ಎರಡು ಬಾರಿ ಆಗಮಿಸಿ ದಾಖಲಾತಿ ಪರಿಶೀಲನೆ ಹಾಗೂ ನೇರ ಪರಿಶೀಲನೆ ಮಾಡುವ ಮೂಲಕ ಮೌಲ್ಯಮಾಪನ ಮಾಡಿದೆ. ಈ ಸಂದರ್ಭದಲ್ಲಿ
ಪಟ್ಟಣದ ಮುಖ್ಯಸ್ಥರು ಮತ್ತು ವಾರ್ಡ್‌ ಕೌನ್ಸಿಲರ್‌ ಘೋಷಣೆ ಒಳಗೊಂಡಿರುತ್ತದೆ.
ಅಲ್ಲದೇ ಗುಣಮಟ್ಟ ನಿಯಂತ್ರಣ ಸಮಿತಿ ಕಳೆದ ಕೆಲವು ವರ್ಷಗಳಲ್ಲಿ ನಿರ್ಮಿಸಲಾದ ಸಾರ್ವಜನಿಕ, ಸಮುದಾಯ ಶೌಚಾಲಯದ ನಿರ್ಮಾಣ, ಕಾರ್ಯ ಯೋಜನೆ, ಸಮೀಕ್ಷೆಗಳು ಸ್ವತ್ಛ ಭಾರತದ ಬಗ್ಗೆ ಹಾಗೂ ಬಯಲು ಶೌಚಾಲಯ ಮುಕ್ತತೆ ಬಗ್ಗೆ ಜಾಗೃತಿ ಹೆಚ್ಚಿಸಲು ಆಯೋಜಿಸಿದ ಆಂದೋಲನಗಳನ್ನು ಪರೀಕ್ಷೆ ನಡೆಸಿದೆ.
ನೇರ ಪರಿಶೀಲನೆಯಡಿ ಒಬ್ಬರು ಅಥವಾ ಇಬ್ಬರು ಸಮೀಕ್ಷೆದಾರರ ತಂಡ ಪಟ್ಟಣದ ಉದ್ದಗಲಕ್ಕೂ ಹರಡಿದ ಕೊಳಚೆ ಪ್ರದೇಶ, ಬಡಾವಣೆಗಳು, ಶಾಲೆ, ವಾಣಿಜ್ಯ ಸ್ಥಳಗಳು, ರೈಲು ನಿಲ್ದಾಣ, ಬಸ್‌ ನಿಲ್ದಾಣ, ನೀರಿನ ಮೂಲಗಳನ್ನು ಗಮನಿಸಲಾಗುತ್ತದೆ. ಸಮೀಕ್ಷೆಯಲ್ಲಿ ನೀಡಲಾದ ಬಯಲು ಶೌಚಾಲಯ ಮುಕ್ತತೆಯ ಸಂಭಾವ್ಯ ಸ್ಥಳಗಳನ್ನು ಖಚಿತಪಡಿಸಿಕೊಳ್ಳಲು ನಿರ್ದಿಷ್ಟ ನಿಯಮಾವಳಿಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಶಸ್ತಿ ಪರಿಶ್ರಮಕ್ಕೆ ಸಿಕ್ಕ ಫ‌ಲ ಸ್ವತ್ಛ ಭಾರತದ ಪರಿಕಲ್ಪನೆಯೊಂದಿಗೆ ಬಯಲು ಮಲ ವಿಸರ್ಜನೆಯಿಂದಾಗುವ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮತ್ತು ಪುರಸಭೆ ಅಧಿಕಾರಿಗಳು
ಮಾಡುತ್ತಿದ್ದಾರೆ. ಪುರಸಭೆಗೆ ತನ್ನದೇ ಆದ ಜವಾಬ್ದಾರಿಯಿದ್ದು, ಪ್ರಶಸ್ತಿಯೊಂದಿಗೆ ಜವಾಬ್ದಾರಿಯೂ ಹೆಚ್ಚಾಗಿದೆ. ಪುರಸಭೆಯ ಜನಪ್ರತಿನಿಧಿಗಳ, ಅಧಿಕಾರಿಗಳ ಕಠಿಣ ಪರಿಶ್ರಮದ ಫಲವಾಗಿ ಈ ಪ್ರಶಸ್ತಿ ದೊರಕಿದೆ.
 ರೇಣುಕಾ ದೇಸಾಯಿ, ಮುಖ್ಯಾಧಿಕಾರಿ, ಪುರಸಭೆ.
ಮನ ಪರಿವರ್ತನೆ ಮಾಡುತ್ತೇವೆ ಸ್ವತ್ಛತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಕೈ ಜೋಡಿಸಿದರೆ ಧ್ಯೇಯ
ಪೂರ್ಣಗೊಳ್ಳಲು ಸಾಧ್ಯವೇ ಹೊರತು ಕೇವಲ ಜನಪ್ರತಿನಿಧಿಗಳಿಂದ, ಅಧಿಕಾರಿಗಳಿಂದ ಸಾಧ್ಯವಿಲ್ಲ. ಸ್ವತ್ಛ ಭಾರತ ಇದೊಂದು ನಿರಂತರ ಪ್ರಕ್ರಿಯೆಯಾಗಿದ್ದು, ಇನ್ನೂ ಯಾರು ವೈಯಕ್ತಿಕ ಶೌಚಾಲಯ ಹೊಂದಿಲ್ಲವೋ ಅಂತವರನ್ನು ಗುರುತಿಸಿ ಶೌಚಾಲಯ ನಿರ್ಮಿಸಿಕೊಳ್ಳಲು ಮತ್ತು ಬಳಕೆ ಮಾಡಲು ಮನ ಪರಿವರ್ತನೆ ಮಾಡುವ ಕೆಲಸ ಮಾಡುತ್ತೇವೆ.
ಬಿ.ಮಂಜುನಾಥ್‌,ಆರೋಗ್ಯ ನಿರೀಕ್ಷಕ, ಪುರಸಭೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.