ಗ್ರಾಮಲೆಕ್ಕಾಧಿಕಾರಿಗಳ ಲೊಕೇಶನ್‌ ಪಡೆಯಿರಿ

ಕ್ವಾರಂಟೈನ್‌ ಕೇಂದ್ರಕ್ಕೆ ಶಾಸಕರ ಭೇಟಿ, ರೈತರು ಬೆಳೆ ಮಾರುಕಟ್ಟೆಗೆ ಸಾಗಿಸಲು ತೊಂದರೆ ಬೇಡ

Team Udayavani, Apr 7, 2020, 4:15 PM IST

07-April-24

ಹರಪನಹಳ್ಳಿ: ಶಾಸಕ ಜಿ.ಕರುಣಾಕರ ರೆಡ್ಡಿ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಹರಪನಹಳ್ಳಿ: ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಗ್ರಾಮಾಂತರ ಭಾಗದಲ್ಲಿ ರಚನೆಯಾಗಿರುವ ಟಾಸ್ಕ್ಫೋರ್ಸ್‌
ಸಮಿತಿಯಲ್ಲಿರುವ ಗ್ರಾಪಂ ಪಿಡಿಒ ಮತ್ತು ಗ್ರಾಮಲೆಕ್ಕಾಧಿಕಾರಿ ಎರಡು ಗಂಟೆಗೊಮ್ಮೆ ಲೊಕೇಶನ್‌ ಪಡೆಯುವ ಮೂಲಕ ಅವರು
ಪಂಚಾಯ್ತಿಗಳಿಗೆ ತೆರಳಿದ್ದಾರೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಇಒಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಲೂಕು ಅಧಿಕಾರಿಗಳ ಸಭೆಯಲ್ಲಿ
ಮಾತನಾಡಿದ ಅವರು, ಗ್ರಾಪಂ ಮತ್ತು ಹಳ್ಳಿಗಳಲ್ಲಿ ಕೇವಲ ಸಮಿತಿ ರಚಿಸಿದರೆ ಸಾಲದು, ನಿಜಕ್ಕೂ ಅವರು ಕಾರ್ಯನಿರ್ವಹಿಸುವ ಕುರಿತು ಮೇಲುಸ್ತುವಾರಿ ಮಾಡಬೇಕಿದೆ. ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಒಗ್ಗಟ್ಟಾಗಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದರು.

ತಾಲೂಕಿನಲ್ಲಿ ವಿದೇಶಗಳಿಂದ ಬಂದ ಒಟ್ಟು 16 ಜನರಿಗೆ ಹೋಂ ಕ್ವಾರೆಂಟೈನ್‌ ನಲ್ಲಿಟ್ಟು ಅವರ ಮೇಲೆ ನಿಗಾವಹಿಸಲಾಗಿದೆ.
ಅನುಮಾನ ಬಂದವರನ್ನು ಪರೀಕ್ಷೆ ಮಾಡಿಸಲಾಗಿದ್ದು, ನೆಗಟಿವ್‌ ವರದಿ ಬಂದಿದೆ ಎಂದು ಟಿಎಚ್‌ಒ ಇನಾಯಿತ್‌ ಹೇಳಿದಾಗ
ಕಾμ ಸೀಮೆಯಿಂದ ಬಂದವರ ಮೇಲೆ ನಿಗಾ ಇಟ್ಟು ಪರೀಕ್ಷೆ ನಡೆಸಿ. ಚೆಕ್‌ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡು ನಮ್ಮಲ್ಲಿ
ಕೊರೊನಾ ಬಾರದಂತೆ ತಡೆಗಟ್ಟುವಂತೆ ತಿಳಿಸಿದರು.

ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆ ಸಾಗಿಸಲು ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಮೊದಲೇ ಫೋನ್‌
ನಲ್ಲಿ ಅಂಗಡಿ ಬಗ್ಗೆ ವಿಚಾರಿಸಿ ಬೆಳೆ ತರಲು ವ್ಯವಸ್ಥೆ ಆಗಬೇಕು. ಪಟ್ಟಣದಲ್ಲಿರುವ ರಾಗಿ ಖರೀದಿ ಕೇಂದ್ರ ಬಂದ್‌ ಮಾಡದೇ
ಪಂಚಾಯ್ತಿಗೊಂದು ದಿನಾಂಕ ನಿಗದಿ ಮಾಡಿ ಅವಕಾಶ ಮಾಡಿಕೊಡಬೇಕು. ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರ
ವಹಿಸಬೇಕು. ಹೊಸ 10 ಬೋರವೆಲ್‌ ಕೊರೆಸಿ ಪೈಪ್‌ಲೈನ್‌ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಎರಡು ತಿಂಗಳ ಪಡಿತರ ವಿತರಣೆಯಲ್ಲಿ ನಂದಿಬೇವೂರು ಗ್ರಾಮದ ನ್ಯಾಯ ಬೆಲೆ ಅಂಗಡಿಯಲ್ಲಿ 1
ಕೆಜಿ ಅಕ್ಕಿ ಮತ್ತು ಗೋದಿಯನ್ನು ಕಡಿಮೆ ವಿತರಿಸುತ್ತಿರುವುದಾಗಿ ದೂರು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಲೋಪ ಕಂಡು ಬಂದಲ್ಲಿ
ಅವರ ಪರವಾನಗಿ ರದ್ದುಪಡಿಸುವಂತೆ ಸೂಚಿಸಿದ ಶಾಸಕರು, ಜನರ ಬದಲು ಮಷಿನ್‌ಗಳಿಂದ ವಿವಿಧ ಇಲಾಖೆಯಲ್ಲಿ ಮಾಡುವ ಕಾಮಗಾರಿ ತಡೆಯುವಂತೆ ಆದೇಶ ಬಾರದಿದ್ದಲ್ಲಿ ಪೊಲೀಸರು ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿದರು.

ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ ವಿತರಣೆ ಮಾಡಿದರು. ನಂತರ ಮಾಚಿಹಳ್ಳಿ ಬಳಿಯಿರುವ ಹೋಂ ಕ್ವಾರಂಟೈನ್‌ ಕೇಂದ್ರಕ್ಕೆ
ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್‌, ತಹಶೀಲ್ದಾರ್‌ ಡಾ| ನಾಗವೇಣಿ, ಡಿವೈಎಸ್ಪಿ
ದೊಡ್ಡಮನೆ ಮಲ್ಲೇಶ್‌, ಇಒ ಅನಂತರಾಜು, ಸಿಪಿಐ ಕೆ.ಕುಮಾರ್‌, ವಿವಿಧ ಇಲಾಖೆ ಅಧಿಕಾರಿಗಳಾದ ಆನಂದ ಡೊಳ್ಳಿನ, ಭೀಮಾ
ನಾಯ್ಕ, ನಾಗರಾಜ ನಾಯ್ಕ, ಮಂಜುನಾಥ, ಜಯಪ್ಪ, ಭೀಮಪ್ಪ, ವೀರಭದ್ರಯ್ಯ ಇತರರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.